Serial Actress Shambavi: ನಟಿ ಶಾಂಭವಿ ಕನ್ನಡ ಸಿನಿಮಾ ಹಾಗೂ ಕಿರುತೆರೆಗೆ ಚಿರಪರಿಚಿತರು. ನಟಿ ಕನ್ನಡದ ಹಲವಾರು ಹಿಟ್‌ ಸಿನಿಮಾಗಳಲ್ಲಿ ನಟಿಸಿ ಒಳ್ಳೆಯ ಹೆಸರು ಗಿಟ್ಟಿಸಿಕೊಂಡಿದ್ದಾರೆ. ತಮ್ಮ ಅಭಿನಯದ ಮೂಲಕ ಬಣ್ಣದ ಲೋಕದಲ್ಲಿ ಸೈ ಎನಿಸಿಕೊಂಡಿದ್ದಾರೆ, ಆದರೆ ಸುಂದರವಾಗಿದ್ದ ಅವರ ಜೀವನದಲ್ಲಿ ಇದೀಗ ಬರ ಸಿಡಿಲು ಬಡಿದಿದೆ.


COMMERCIAL BREAK
SCROLL TO CONTINUE READING

ಸಿನಿಮಾ ಹಾಗೂ ಧಾರವಾಹಿಗಳಲ್ಲಿ ಸಕ್ರಿಯವಾಗಿರುವ ಶಾಂಭವಿ, ತಮ್ಮ ವೈಯಕ್ತಿಕ ಜೀವನದಲ್ಲಿಯೂ ತುಂಬಾ ಆಕ್ಟಿವ್‌, ನಟಿ ಮೂರು ವರ್ಷದ ಹಿಂದೆ ಇಬ್ಬರು ಅವಳಿ ಮಕ್ಕಳಿಗೆ ಜನ್ಮ ನೀಡಿದ್ದರು, ಎಲ್ಲವೂ ಚೆನ್ನಾಗಿಯೇ ಇತ್ತು, ಆದರೆ ವಿಧಿಯ ಆಟ ಅವರ ಜೀವನಗಳನ್ನೆ ತಲೆ ಕೀಳಾಗಿ ಮಾಡಿ ಬಿಟ್ಟಿದೆ. ನಟಿ ಶಾಂಭವಿ ಅವರ ಅವಳಿ ಮಗುವೊಂದು ಮಾರಕ ಕ್ಯಾನ್ಸರ್‌ ರೋಗಕ್ಕೆ ತುತ್ತಾಗಿದ್ದಾನೆ. ಶಾಭವಿ ಅವರ ಮೂರು ವರ್ಷದ ಮಗ ಇದೀಗ ಬ್ಲಡ್‌ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಈ ವಿಷಯವನ್ನಯ ಸ್ವತಃ ನಟಿಯೇ ತಮ್ಮ ಇನ್ಸ್ಟಾಗ್ರಾಮ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. 


ಇನ್ನೂ, ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಬರೆದುಕೊಂಡಿರುವ ನಟಿ..."ಕನಸು ಮನಸಿನಲ್ಲೂ ನೆನೆಸದ ವಿಷಯ ನಡೆದುಹೋಗಿದೆ. ಸೆ. 23ರಂದು ನಮ್ಮ ಪುಟ್ಟ ಮೂರು ವರ್ಷದ ಮಗನಿಗೆ "3rd stage ಬ್ಲಡ್ ಕ್ಯಾನ್ಸರ್" ಇರೋದು ಪತ್ತೆ ಆಗಿದೆ. 5-6 ದಿನಗಳಲ್ಲಿ ನಡೆದ ಟೆಸ್ಟ್ ರಿಸಲ್ಟ್ಸ್ ಬರೋ ವರೆಗೆ ಪ್ರತಿ ಕ್ಷಣವೂ "ಇದು ಕ್ಯಾನ್ಸರ್ ಆಗಿರದೆ ಇರಲಿ" ಅಂತಾ ಪ್ರಾರ್ಥಿಸ್ತಾ ಇದ್ವಿ. ಹಣೆಯಲಿ ಬರೆದಿರೋದನ್ನ ಬಲಿಸೋಕೆ ಆಗದಿದ್ದಾಗ ಈ ಪೂಜೆ, ಪ್ರಾರ್ಥನೆ, ಹರೆಗಳೆಲ್ಲ ಯಾಕೆ ಅನ್ಸತ್ತೆ!!! ಎನಗತ್ತೋ ಆಗ್ಲಿ ಅಂತ ರೆಡಿ ಆಗಿ ನಿಂತಿದೀವಿ ಇವಾಗ. ಬೇರೆ ಆಪ್ಷನ್ ಆದ್ರೂ ಏನಿದೆ?? ಇದು 95% curable ಅಂತಾ doctors ಭರವಸೆ ಕೊಟ್ಟಿದ್ದಾರೆ. ಆದ್ರೆ ಪಾಪಾ ದುಷ್ಯೂಗೆ ತನ್ನ ಜೊತೆ ಏನಾಗ್ತಾ ಇದೆ? ಯಾಕ್ ಆಗ್ತಾ ಇದೆ ಅನ್ನೋ ಅರಿವೇ ಇಲ್ಲ. ಎಷ್ಟೆಲ್ಲ ನೋವು ಅನುಭವಿಸಬೇಕಲ್ಲ ಈ ಕಂದ ಅನ್ನೋದೇ ಸಂಕಟ. "ನಿನಗ ಹುಷಾರಿಲ್ಲ ಮಗನೇ, ತುಂಬಾ ದೊಡ್ಡ ಟ್ರೀಟ್ಮೆಂಟ್ ತಗೋಬೇಕಿದೆ" ಅಂತಾ ಅರ್ಥ ಮಾಡಿಸೋಕೆ ಪ್ರಯತ್ನ ಪಡ್ತಾ ಇರ್ತೀನಿ. Chemotherapy ಮೊದಲ ಹಂತ ಮುಗಿದು ಎರಡನೇ ಹಂತ ಶುರುವಾಗಿದೆ. ಸುಮಾರು 40 ದಿನಗಳ ಹಿಂದೆ therapy ಯ ಮೊದಲ ದಿನದಂದು ಕ್ಲಿಕ್ಕಿಸಿದ shots ಇದು." ಎಂದು ಬರೆದುಕೊಂಡಿದ್ದಾರೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.