ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜೀವಮಾನ ಸಾಧನೆ ಪ್ರಶಸ್ತಿ!

Shabana Azmi: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು.   

Written by - YASHODHA POOJARI | Edited by - Zee Kannada News Desk | Last Updated : Mar 10, 2025, 04:10 PM IST
  • ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು.
  • ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು.
ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಜೀವಮಾನ ಸಾಧನೆ ಪ್ರಶಸ್ತಿ!

Shabana Azmi: ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶ್ರೀಮತಿ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್ ನೀಡಲಾಯಿತು. 

Add Zee News as a Preferred Source

ವಿಶ್ವ ವಿಖ್ಯಾತ ಕವಿ, ಗೀತಕಾರ ಜಾವೇದ್ ಅಖ್ತರ್ ಅವರು ಈ ಸಂದರ್ಭದಲ್ಲಿ ಜೊತೆಗಿದ್ದರು. 

"ಮಿಲೇಸುರ್ ಮೇರಾ ತುಮಾರಾ" ದೃಶ್ಯಕಾವ್ಯ ನಮಗೆ ತುಂಬಾ ಇಷ್ಟ. ಇದರಲ್ಲಿ ನಿಮ್ಮನ್ನು ನೋಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಬಾನಾ ಆಜ್ಮಿಯವರನ್ನು ಸ್ಮರಿಸಿದರು.  

ಕರ್ನಾಟಕ ರಾಜ್ಯ ಸಾಂಸ್ಕೃತಿಕವಾಗಿ ಮತ್ತು  ಸಂಗೀತಕ್ಕೆ ಅತ್ಯಂತ ಪ್ರಸಿದ್ಧಿ ಎಂದು ಶಬಾನಾ ಮತ್ತು ಜಾವೇದ್ ಅವರು ಮೆಚ್ಚುಗೆ ಸೂಚಿಸಿದರು. 

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು
ಭೀಮ್ ಸೇನ್ ಜೋಶಿ, ಕುಮಾರ ಗಂಧರ್ವ, ಗಂಗೂಬಾಯಿ ಹಾನಗಲ್ ಇವರೆಲ್ಲಾ ಹಿಂದೂಸ್ತಾನಿ ಸಂಗೀತದ ದಿಗ್ಗಜರು, ನಮ್ಮ ರಾಜ್ಯದ ಹೆಮ್ಮೆ ಇವರೆಲ್ಲಾ ಧಾರವಾಡದವರು ಎನ್ನುವುದು ಮತ್ತೊಂದು ವಿಶೇಷ ಎಂದು ಮಾತು ಸೇರಿಸಿದರು.

ಕಾಪಿ ರೈಟ್ಸ್ ಕಾಯ್ದೆಯಲ್ಲಿ ಕಲಾವಿದರಿಗೆ, ಸಂಗೀತಗಾರರಿಗೆ ಅನುಕೂಲ ಆಗಿರುವ ರೀತಿಯಲ್ಲೇ, GST ಯಲ್ಲೂ ಅನುಕೂಲ ಆಗುವ ರೀತಿಯಲ್ಲಿ GST ಕೌನ್ಸಿಲ್ ನಲ್ಲಿ ಅಭಿಪ್ರಾಯ ವ್ಯಕ್ತಪಡಿಸುವ ಬಗ್ಗೆಯೂ ಮುಖ್ಯಮಂತ್ರಿಗಳು ತಿಳಿಸಿದರು. 

ಸರ್ಕಾರದ ಕಾರ್ಯದರ್ಶಿ ಕಾವೇರಿ, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ , ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಶಬಾನಾ ಆಜ್ಮಿ ಮತ್ತು ಜಾವೇದ್ ಅಖ್ತರ್ ಅವರನ್ನು ಸ್ವಾಗತಿಸಿದರು.

ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ , ಚಲನಚಿತ್ರ ಅಕಾಡೆಮಿ ಅಧ್ಯಕ್ಷರಾದ ಸಾದು ಕೋಕಿಲ, 16 ನೇ ಅಂತಾರಾಷ್ಟ್ರೀಯ ಚಲನ ಚಿತ್ರೋತ್ಸವದ ಕಲಾ ನಿರ್ದೇಶಕ ವಿದ್ಯಾಶಂಕರ್ ಅವರು ಉಪಸ್ಥಿತರಿದ್ದು ಗೌರವಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Trending News