ಬೆಂಗಳೂರು : ಮಲ್ಟಿಸ್ಟಾರರ್‌ ʼಶಂಭೋ ಶಿವ ಶಂಕರ್‌ʼ ಸಿನಿಮಾಗೆ ಸೆನ್ಸಾರ್‌ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದ್ದು, ನವಂಬರ್‌ ಕೊನೆಗೆ ಸಿನಿಮಾ ಪ್ರೇಕ್ಷಕರ ಮುಂದೆ ಬರಲು ಸಿದ್ಧವಾಗಿದೆ.


COMMERCIAL BREAK
SCROLL TO CONTINUE READING

ವರ್ತೂರು ಮಂಜು ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದ ʼಶಂಭೋ ಶಿವ ಶಂಕರʼದಲ್ಲಿ ಮೂರು ನಾಯಕರು. ಅಭಯ್ ಪುನೀತ್, ರೋಹಿತ್ ಹಾಗೂ ರಕ್ಷಕ್ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಸುಪ್ರಿಂ ಹೀರೋ ಶಶಿಕುಮಾರ್, ಸೋನಾಲ್ ಮಾಂಟೆರೊ, ಜೊಗಿ‌ ನಾಗರಾಜ್, ಪ್ರದೀಪ್ ತಿಪಟೂರು, ಆಶಾ ಸುಜಯ್, ಪ್ರೇಮ, ರೋಹಿಣಿ, ಸಂಗಮೇಶ್', ಡಿ.ಸಿ.ತಮ್ಮಣ್ಣ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ʼಓಟಿಟಿ ಬಿಗ್ ಬಾಸ್ʼ ಖ್ಯಾತಿಯ ಕಿರಣ್ ಸಹ ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.


ಇದನ್ನೂ ಓದಿ: Video Viral : ಕಾಲೇಜಿನಲ್ಲಿ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡ ಹುಡುಗಿಯರು


ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ಮೂರು ಮನಮೋಹಕ ಹಾಡುಗಳಿದ್ದು ಹಿತನ್ ಹಾಸನ್ ಸಂಗೀತ ನೀಡಿದ್ದಾರೆ. ಈಗಾಗಲೇ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಚಿತ್ರದ ʼನಾಟಿ ಕೋಳಿʼ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಸದ್ಯದಲ್ಲೇ ಇನ್ನೆರಡು ಹಾಡುಗಳು ಹಾಗೂ ಟ್ರೇಲರ್ ಬಿಡುಗಡೆಯಾಗಲಿದೆ.


ಧರ್ಮ ವಿಶ್ ಹಿನ್ನೆಲೆ ಸಂಗೀತ ನೀಡಿದ್ದಾರೆ.  ನಟರಾಜ್ ಮುದ್ದಾಲ ಛಾಯಾಗ್ರಹಣ, ಕಲೈ ನೃತ್ಯ ನಿರ್ದೇಶನ, ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಹಾಗೂ ವೆಂಕಟೇಶ್ ಯುಡಿವಿ ಅವರ  ಸಂಕಲನ 'ಶಂಭೋ ಶಿವ ಶಂಕರ' ಚಿತ್ರಕ್ಕಿದೆ. ಬೆಂಗಳೂರಿನಲ್ಲೇ ಈ ಚಿತ್ರದ ಬಹುತೇಕ ಚಿತ್ರೀಕರಣವಾಗಿದೆ. ಹಾಡಿನ ಚಿತ್ರೀಕರಣ ಮಾತ್ರ ಭಾರತ-ಚೀನಾ ಗಡಿಯ ಲಾಹೌಲ್ ಸ್ಪಿಟಿ ಎಂಬ ಸ್ಥಳದಲ್ಲಿ ನಡೆದಿದೆ.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.