Chhoo Mantar Movie : ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, ʼಕರ್ವʼ ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ಹೆಸರಾಂತ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ ʼಛೂ‌ ಮಂತರ್ʼ ಚಿತ್ರ  ಮೇ 10 ರಂದು ಬಿಡುಗಡೆ ಮಾಡುವುದಾಗಿ ಮೊದಲು ತಿಳಿಸಲಾಗಿತ್ತು. ಈಗ ಸಿನಿಮಾ ಬಿಡುಗಡೆ ಸ್ವಲ್ಪ ಮುಂದೆ ಹೋಗಿದೆ. 


COMMERCIAL BREAK
SCROLL TO CONTINUE READING

ಚಿತ್ರವನ್ನು ವೀಕ್ಷಿಸಿರುವ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗಳ ವಿತರಕರು, ಇದೊಂದು ವಿಭಿನ್ನ ಕಥಾಹಂದರ ಹೊಂದಿರುವ ಹಾರಾರ್ ಚಿತ್ರವಾಗಿದ್ದು, ಉತ್ತಮವಾಗಿ ಮೂಡಿಬಂದಿದೆ ಎಲ್ಲಾ ಭಾಷೆಗಳ ಜನರು ನೋಡುವ ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಈಗ ದೇಶಾದ್ಯಂತ ಚುನಾವಣೆ ಕೂಡ ನಡೆಯುತ್ತಿದೆ. ಹಾಗಾಗಿ, ಸರಿಯಾದ ಸಮಯ ನೋಡಿಕೊಂಡು ಚಿತ್ರ ಬಿಡುಗಡೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಈ ಕಾರಣಗಳಿಂದ ನಮ್ಮ ಚಿತ್ರವನ್ನು ಮೇ 10 ರಂದು ಬಿಡುಗಡೆ ಮಾಡುತ್ತಿಲ್ಲ. ಮುಂದಿನ ದಿನಾಂಕವನ್ನು ಸದ್ಯದಲ್ಲೇ ತಿಳಿಸುತ್ತವೆ ಎಂದು ನಿರ್ಮಾಪಕ ತರುಣ್ ಶಿವಪ್ಪ ತಿಳಿಸಿದ್ದಾರೆ‌. . 


ಇದನ್ನೂ ಓದಿ: ʼಅರುಂದತಿʼ ಸಿನಿಮಾದಲ್ಲಿ ಅನುಷ್ಕಾ ಬಾಲ್ಯದ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಬಾಲಕಿ ಯಾರು ಗೊತ್ತೆ..?


ಈಗಾಗಲೇ‌ ಟೀಸರ್, ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ತಾರಾಬಳಗದಲ್ಲಿ ಶರಣ್, ಚಿಕ್ಕಣ್ಣ, ಮೇಘನಾ ಗಾಂವ್ಕರ್, ಅದಿತಿ ಪ್ರಭುದೇವ, ಪ್ರಭು ಮುಂಡ್ಕರ್ ಮುಂತಾದವರಿದ್ದಾರೆ. ಅನುಪ್ ಕಟ್ಟುಕರನ್ ಛಾಯಾಗ್ರಹಣ ಹಾಗೂ ಚಂದನ್ ಶೆಟ್ಟಿ ಅವರ ಸಂಗೀತ ನಿರ್ದೇಶನವಿರುವ "ಛೂ ಮಂತರ್" ಚಿತ್ರಕ್ಕೆ ಅವಿನಾಶ್ ಬಸುತ್ಕರ್ ಹಿನ್ನೆಲೆ ಸಂಗೀತ ನೀಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.