ಬೆಂಗಳೂರು : ಕಿರಣ್ ರಾಜ್ ನಾಯಕರಾಗಿ ನಟಿಸಿ, ಪ್ರಸಿದ್ಧ್ ನಿರ್ದೇಶಿಸುತ್ತಿರುವ "ಶೇರ್" ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ನಿರ್ಮಾಪಕ ಡಾ. ಸುದರ್ಶನ್ ಸುಂದರರಾಜ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿಸಿದರು. ಸಾಕಷ್ಟು ಗಣ್ಯರು ಮುಹೂರ್ತ ಸಮರಂಭಕ್ಕೆ ಆಗಮಿಸಿ ಶುಭ ಕೋರಿದರು.


COMMERCIAL BREAK
SCROLL TO CONTINUE READING

"ಕನ್ನಡತಿ" ಧಾರಾವಾಹಿ ಮೂಲಕ ಜನಪ್ರಿಯರಾಗಿರುವ ಕಿರಣ್ ರಾಜ್, "ಬಡ್ಡೀಸ್" ಚಿತ್ರದ ಮೂಲಕ ನಾಯಕನಾಗಿ ಬೆಳ್ಳಿತೆರೆ ಪ್ರವೇಶಿಸಿದ್ದರು. ಇವರ ನಟನೆಯ "ಭರ್ಜರಿ ಗಂಡು" ಚಿತ್ರ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೀಗ ಶೇರ್ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. 


ಇದನ್ನೂ ಓದಿ : ಆಗಸ್ಟ್ 18 ರಿಂದ ಟೆಲಿಮಿಷನ್ ಪ್ರೀಮಿಯರ್ ಲೀಗ್ ಆರಂಭ


"ಶೇರ್" ಪಕ್ಕಾ ಆಕ್ಷನ್ ಥ್ರಿಲ್ಲರ್ ಚಿತ್ರ. ಅನಾಥಾಶ್ರಮದಲ್ಲಿ ಈ ಕಥೆ ನಡೆಯುತ್ತದೆ. ಅಲ್ಲೊಬ್ಬ ರಾಜಕಾರಣಿ, ಎರಡು ಗುಂಪುಗಳೂ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿವೆ.  ನಾಯಕ-ನಾಯಕಿ  ಅನಾಥರ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲೂ  ಈ ಚಿತ್ರದ ಕಥೆ ಸಾಗುತ್ತದೆ. 


ಇನ್ನು  ಚಾಕಲೇಟ್ ಹೀರೋ ಎಂದೇ ಹೆಸರಾಗಿರುವ ಕಿರಣ್ ರಾಜ್ ಗೆ ರಗಡ್ ಲುಕ್ ಸರಿ ಹೊಂದುವುದೆ ಎನ್ನುವ ಪ್ರಶ್ನೆ ಬಹುತೇಕರನ್ನು ಕಾಡುತ್ತಿದೆ. ಚಿತ್ರ ತಂಡವನ್ನು ಕೂಡಾ ಅನೇಕರು ಈ ಪ್ರಶ್ನೆ ಕೇಳಿದ್ದಾರಂತೆ. ಆದರೆ ಮಾಸ್ ಪಾತ್ರಕ್ಕೆ ಬೇಕಾದ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದವುಗಳನ್ನು ಕಿರಣ್ ರಾಜ್ ಅಭ್ಯಾಸ ಮಾಡಿದ್ದಾರೆಯಂತೆ. 


ನನ್ನ ಹಾಗೂ ಕಿರಣ್ ರಾಜ್ ಕಾಂಬಿನೇಶನ್ ನಲ್ಲಿ ಮೂಡಿಬಂದಿರುವ "ಭರ್ಜರಿ ಗಂಡು" ಚಿತ್ರ ಸಹ ಸೆಪ್ಟೆಂಬರ್ ನಲ್ಲಿ ತೆರೆ ಕಾಣಲಿದೆ. ಆ ಚಿತ್ರದಲ್ಲಿ ಭಾಗಿಯಾಗಿರುವ ಬಹುತೇಕ ತಂಡವೇ ಈ ಚಿತ್ರದಲ್ಲಿ ಮುಂದುವರೆಯಲಿದೆ ಎನ್ನುವುದು ನಿರ್ದೇಶಕ ಪ್ರಸಿದ್ಧ್ ಅವರ ಮಾತು. ಬೀದರ್ ಸುದರ್ಶನ್ ಸುಂದರರಾಜ್ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಇದೇ 22 ರಿಂದ‌ ಚಿತ್ರೀಕರಣ ಆರಂಭವಾಗಲಿದೆ.  


ಇದನ್ನೂ ಓದಿ : Galipata 2 Review: ಗಣಿ - ಭಟ್ರ "ಗಾಳಿಪಟ 2" ಗಗನದೆತ್ತರಕ್ಕೆ ಹಾರಾಯ್ತು..! "ಭಟ್ರು ಗೆದ್ದೇ ಬಿಟ್ರು"..


ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ‌ ಚಿತ್ರದಲ್ಲಿ ನಟಿಸುವುದು ಖುಷಿ ತಂದಿದೆ. ಈ ಚಿತ್ರದ ಪಾತ್ರಕ್ಕಾಗಿ ಕಿಕ್ ಬಾಕ್ಸಿಂಗ್, ಮಾರ್ಷಲ್ ಆರ್ಟ್ಸ್ ಮುಂತಾದ ಕಲೆಗಳನ್ನು ಅಭ್ಯಾಸ ಮಾಡಿಕೊಂಡಿದ್ದೇನೆ ಎನ್ನುತ್ತಾರೆ ನಾಯಕ ನಟ ಕಿರಣ್ ರಾಜ್. 


ಸುರೇಖ ಚಿತ್ರದ ನಾಯಕಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದು, ತನೀಶಾ ಪೋಲೀಸ್ ಅಧಿಕಾರಿ ಪಾತ್ರದಲ್ಲಿ ಮಿಂಚಲಿದ್ದಾರೆ. ಕಿಟ್ಟಿ ಕೌಶಿಕ್ ಛಾಯಾಗ್ರಹಣವಿದ್ದು, ಗುಮ್ಮಿನೇನಿ‌ ವಿಜಯ್ ಸಂಗೀತ ನೀಡಿದ್ದಾರೆ. 



 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ