ಈ ನಟಿಯ ವಿರುದ್ಧ 50 ಕೋಟಿ ರೂ. ಮಾನಹಾನಿ ಮೊಕದ್ದಮೆ ಹೂಡಿದ ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ..!
`ಶಿಲ್ಪಾ ಶೆಟ್ಟಿ ಮತ್ತು ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಆಧಾರರಹಿತವಾಗಿದೆ ಎಂದು ಶಿಲ್ಪಾ ರಾಜ್ ಕುಂದ್ರ ದಂಪತಿಯ ವಕೀಲರು ಅಧಿಕೃತ ಹೇಳಿಕೆಯಲ್ಲಿ, ತಿಳಿಸಿದ್ದಾರೆ.
ನವದೆಹಲಿ : ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಕುಂದ್ರಾ (Shilpa Shetty kundra) ಮತ್ತು ರಾಜ್ ಕುಂದ್ರಾ ಅವರು ನಟಿ ಶೆರ್ಲಿನ್ ಚೋಪ್ರಾ (Sherlyn Chopra) ವಿರುದ್ಧ 50 ಕೋಟಿ ರೂ. ಮಾನನಷ್ಟ ಮೊಕದಮೆ ಹೂಡಿದ್ದಾರೆ. ಶೆರ್ಲಿನ್ ಚೋಪ್ರಾ ಮಾಡಿರುವ ಎಲ್ಲಾ ಆರೋಪಗಳು ಸಂಪೂರ್ಣ ಆಧಾರರಹಿತ ಮತ್ತು ಸುಳ್ಳು ಎಂದು ಹೇಳಿದ್ದಾರೆ .ಶೆರ್ಲಿನ್ ಚೋಪ್ರಾ ಕೂಡ ಇತ್ತೀಚೆಗೆ ರಾಜ್-ಶಿಲ್ಪಾ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣ ದಾಖಲಿಸಿದ್ದರು.
ರಾಜ್ ಕುಂದ್ರಾ (Raj Kundra) ಮತ್ತು ಶಿಲ್ಪಾ ಶೆಟ್ಟಿ, ತಮ್ಮನ್ನು ದೈಹಿಕವಾಗಿ ಮತ್ತು ಮಾನಸಿಕವಾಗಿ ನಿಂದಿಸಿದ್ದಾರೆ ಎಂದು ಇತ್ತೀಚೆಗೆ ಶೆರ್ಲಿನ್ ಚೋಪ್ರಾ ಆರೋಪಿಸಿದ್ದರು. 'ಶಿಲ್ಪಾ ಶೆಟ್ಟಿ (Shilpa Shetty) ಮತ್ತು ರಾಜ್ ಕುಂದ್ರಾ ವಿರುದ್ಧ ಶೆರ್ಲಿನ್ ಚೋಪ್ರಾ ಮಾಡಿರುವ ಎಲ್ಲಾ ಆರೋಪಗಳು ಸುಳ್ಳು ಆಧಾರರಹಿತವಾಗಿದೆ ಎಂದು ಶಿಲ್ಪಾ ರಾಜ್ ಕುಂದ್ರ ದಂಪತಿಯ ವಕೀಲರು ಅಧಿಕೃತ ಹೇಳಿಕೆಯಲ್ಲಿ, ತಿಳಿಸಿದ್ದಾರೆ.
ಇದನ್ನೂ ಓದಿ : Sharan: ಇದೇ ಮೊದಲ ಬಾರಿಗೆ ಹಾರರ್ ಥ್ರಿಲ್ಲರ್ ಸಿನಿಮಾದಲ್ಲಿ ನಟ ಶರಣ್
ಶಿಲ್ಪಾ ಶೆಟ್ಟಿ ಕುಂದ್ರಾ ಪತಿ, ರಾಜ್ ಕುಂದ್ರಾ ಅಶ್ಲೀಲ ಸಿನಿಮಾಗಳನ್ನು ನಿರ್ಮಾಣ ಮಾಡಿ, ನಂತರ ಅದನ್ನು ಆಪ್ ಗಳಲ್ಲಿ ಬಿಡುಗಡೆ ಮಾಡುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣ ಬೆಳಕಿಗೆ ಬಂದ ದಿನದಿಂದ ಗಾಂಧಿ ಬಾತ್ ಖ್ಯಾತಿಯ ನಟಿ ಗೆಹ್ನಾ ವಸಿಷ್ಠ (Gehana vasisth) ರಾಜ್ ಕುಂದ್ರಾ ಅವರನ್ನು ಬೆಂಬಲಿಸುತ್ತಲೇ ಬಂದಿದ್ದಾರೆ. ಇನ್ನೊಂದೆಡೆ, ಶೆರ್ಲಿನ್ ಚೋಪ್ರಾ (Sherlyn Chopra) ಮತ್ತು ಪೂನಂ ಪಾಂಡೆ ಈ ದಂಪತಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸುತ್ತಿದ್ದರು.
ಈ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ ಕುಂದ್ರಾ 2 ತಿಂಗಳ ಕಾಲ ಜೈಲು ವಾಸ ಅನುಭವಿಸಿದ್ದು, ಸೆಪ್ಟೆಂಬರ್ 21, ರಂದು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಆದರೆ ಈ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿದೆ. ರಾಜ್ ಕುಂದ್ರಾ ಬಂಧನದ ನಂತರ, ಶಿಲ್ಪಾ ಶೆಟ್ಟಿ ಕುಂದ್ರಾ ಕೇಳ ದಿನಗಳವರೆಗೆ ಕೆಲಸದಿಂದ ಬ್ರೇಕ್ ತೆಗೆದುಕೊಂಡಿದ್ದರು. ಆದರೆ ಈಗ ಮತ್ತೆ ಅವರು ಪೂರ್ಣ ಪ್ರಮಾಣದಲ್ಲಿ ತಮ್ಮ ಕೆಲಸದಲ್ಲಿ ತೊಡಗಿಕೊಂಡಿದ್ದಾರೆ.
ಇದನ್ನೂ ಓದಿ: India's Best Dancer season 2: ನಟಿ ಮಲೈಕಾ ಆರೋರಾ ಕೆನ್ನೆ ಸ್ಪರ್ಶಿಸಿದ ಸ್ಪರ್ಧಿ..! ಮುಂದೆ ಆಗಿದ್ದೇನು ಗೊತ್ತೇ ?
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.