ಬೆಂಗಳೂರು : ಸಿ.ಆರ್.ಮನೋಹರ್ ನಿರ್ಮಿಸಿರುವ,  ಖ್ಯಾತ ನಿರ್ದೇಶಕ ಪವನ್ ಒಡೆಯರ್ ನಿರ್ದೇಶನದ ‘ರೇಮೊ’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್  ‘ರೇಮೊ’ ಟ್ರೇಲರ್ ಬಿಡುಗಡೆ ಮಾಡಿದ್ದಾರೆ.  ಇಶಾನ್ ಮತ್ತು ಆಶಿಕಾ ರಂಗನಾಥ್ ಈ ಚಿತ್ರದ ನಾಯಕ, ನಾಯಕಿಯಾಗಿ ನಟಿಸಿದ್ದಾರೆ. 


COMMERCIAL BREAK
SCROLL TO CONTINUE READING

‘ಕನ್ನಡ ಚಿತ್ರರಂಗ ಯಾರಿಗೂ ಕಡಿಮೆ ಇಲ್ಲ. "ಕಾಂತಾರ" ಚಿತ್ರ ನಮಗೆಲ್ಲ ಒಂದು ಹೆಮ್ಮೆ. ಆ ಚಿತ್ರದ ಟ್ರೇಲರ್ ಮತ್ತು ಸಾಂಗ್ ನೋಡಿ ನಾನು ರಿಷಬ್ ಶೆಟ್ಟಿ ಅವರಿಗೆ ಫೋನ್ ಮಾಡಿದ್ದೆ. ‘ರೇಮೊ’ಕೂಡ ಅದೇ ರೀತಿ ಸೂಪರ್ ಹಿಟ್ ಆಗಲಿ ಅಂತ ದೇವರಲ್ಲಿ ಪ್ರಾರ್ಥನೆ ಮಾಡಿಕೊಳ್ಳುತ್ತೇನೆ ಎಂದು ಶಿವರಾಜಕುಮಾರ್ ಹೇಳಿದರು. 


ಇದನ್ನೂ ಓದಿ : ಸುಮಧುರವಾಗಿದೆ "ವಿಜಯಾನಂದ" ಚಿತ್ರದ ಹಾಡು!


‘ರೇಮೊ’ಚಿತ್ರದ ಕೆಲಸ ಶುರುವಾಗಿ 3 ವರ್ಷ ಆಯಿತು. ಈಗ ಬಿಡುಗಡೆ ಹಂತಕ್ಕೆ ಬಂದಿದೆ. ನನ್ನನ್ನು ಚಿತ್ರರಂಗಕ್ಕೆ ಬರಲು ಹೇಳಿದ್ದು ಶಿವಣ್ಣ. ಇವತ್ತು ಅವರಿಂದಲೇ ನಮ್ಮ ಚಿತ್ರದ ಟ್ರೇಲರ್ ಬಿಡುಗಡೆಯಾಗಿದ್ದು ಖುಷಿಯಾಗಿದೆ ಎಂದು  ನಾಯಕ ಇಶಾನ್ ಸಂತಸ ವ್ಯಕ್ತಪಡಿಸಿದ್ದಾರೆ.  ನವೆಂಬರ್ 25 ರಂದು ನಮ್ಮ ಚಿತ್ರ ಬಿಡುಗಡೆಯಾಗಲಿದೆ. ಅಂದೇ ನಮ್ಮ ಚಿತ್ರವನ್ನು ನೋಡುವುದಾಗಿ ಶಿವಣ್ಣ ಹೇಳಿದ್ದಾರೆ.  ಅವರೇ ನನಗೆ ಸ್ಫೂರ್ತಿ ಎಂದಿದ್ದಾರೆ. 


ನಟಿ ಆಶಿಕಾ ರಂಗನಾಥ್ ಅವರಿಗೂ ‘ರೇಮೊ’ಚಿತ್ರ ವಿಶೇಷವಂತೆ.  ‘ಇಷ್ಟು ದಿನ ನನ್ನನ್ನು ಕ್ಯೂಟ್ ಹುಡುಗಿಯ ಪಾತ್ರದಲ್ಲಿ ನೋಡಿದ್ದೀರಿ. ಆದರೆ ಈ ಸಿನಿಮಾದಲ್ಲಿನ ಪಾತ್ರ ಭಿನ್ನವಾಗಿದೆ. ಈವರೆಗೆ ನಾನು ಮಾಡಿದ ಪಾತ್ರಗಳಲ್ಲಿ ಇದೇ ಬೆಸ್ಟ್. ಹೀರೋಗೆ ಸಮನಾಗಿ ಇರುವಂತಹ ಪಾತ್ರ ನನಗೆ ಸಿಕ್ಕಿದೆ ಎಂದಿದ್ದಾರೆ ಆಶಿಕಾ ರಂಗನಾಥ್.


ಇದನ್ನೂ ಓದಿ : ನವೆಂಬರ್ 7 ರಿಂದ 11 ರವರೆಗೆ ಗಂಧದ ಗುಡಿ ಚಿತ್ರದ ಟಿಕೆಟ್ ದರದಲ್ಲಿ ಇಳಿಕೆ


ಪ್ರೀತಿಯಲ್ಲಿ ಹಲವು ವಿಧಗಳಿದೆ. ಅದರಲ್ಲಿ ನಾನು ಮ್ಯೂಸಿಕಲ್ ಲವ್ ಸ್ಟೋರಿ ಆಯ್ಕೆ ಮಾಡಿಕೊಂಡಿದ್ದೀನಿ. ಈ ಚಿತ್ರದಲ್ಲಿ ಎಮೋಷನ್ ಸಹ ಇದೆ. ವೈದಿ ಅವರ ಛಾಯಾಗ್ರಹಣ ಹಾಗೂ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಚಿತ್ರವನ್ನು ಮತ್ತಷ್ಟು ಸುಂದರವಾಗಿಸಿದೆ ಎಂದು ನಿರ್ದೇಶಕ ಪವನ್ ಒಡೆಯರ್ ಹೇಳಿದ್ದಾರೆ. 


ಪವನ್ ಒಡೆಯರ್ ಪತ್ನಿ ಅಪೇಕ್ಷಾ ಪುರೋಹಿತ್ ಅವರು ಈ ಚಿತ್ರಕ್ಕೆ ವಸ್ತ್ರ ವಿನ್ಯಾಸ ಮಾಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ,  ವೈದಿ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ, ಪಿ. ಗುಣಶೇಖರನ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ