ಟೀಸರ್‌ನಲ್ಲೇ ಕುತೂಹಲ ಮೂಡಿಸಿದ "ಭೈರತಿ ರಣಗಲ್" : ನ.15ರಂದು ತೆರೆಗೆ

Shivarajkumar Bhairathi Ranagal : "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ "ಭೈರತಿ ರಣಗಲ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ.  ಈಗಾಗಲೇ ಟೈಟಲ್ ಸಾಂಗ್ ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ "ಭೈರತಿ ರಣಗಲ್" ಚಿತ್ರ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

Written by - Krishna N K | Last Updated : Oct 25, 2024, 12:32 PM IST
    • ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸಿರುವ ಬಹು ನಿರೀಕ್ಷಿತ "ಭೈರತಿ ರಣಗಲ್"
    • ಬಹು ನಿರೀಕ್ಷಿತ "ಭೈರತಿ ರಣಗಲ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ.
    • "ಭೈರತಿ ರಣಗಲ್" ಚಿತ್ರ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ಟೀಸರ್‌ನಲ್ಲೇ ಕುತೂಹಲ ಮೂಡಿಸಿದ "ಭೈರತಿ ರಣಗಲ್" : ನ.15ರಂದು ತೆರೆಗೆ title=

Bhairathi Ranagal : ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಭೈರತಿ ರಣಗಲ್" ಚಿತ್ರದ ಟೀಸರ್ ಬಿಡುಗಡೆಯಾಗಿದೆ. 

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಟೀಸರ್ ಕುತೂಹಲ ಮೂಡಿಸಿದ್ದು, ಶಿವಣ್ಣ ಅವರ ಲುಕ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಈಗಾಗಲೇ ಟೈಟಲ್ ಸಾಂಗ್ ಹಾಗೂ ಟೀಸರ್ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ "ಭೈರತಿ ರಣಗಲ್" ಚಿತ್ರ ನವೆಂಬರ್ 15 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದಕ್ಕೂ ಮುನ್ನ ಟ್ರೇಲರ್ ಬರಲಿದೆ. 

ಇದನ್ನೂ ಓದಿ:ಸ್ಯಾಂಡಲ್‌ವುಡ್‌ ಸ್ಟಾರ್‌ ಕಿಚ್ಚ ಸುದೀಪ್‌ ಫೇವರೆಟ್‌ ಹಿರೋಯಿನ್‌ ಯಾರು ಗೊತ್ತಾ? ಇಡೀ ಸೌತ್‌ ಇಂಡಸ್ಟ್ರೀಯನ್ನೇ ಆಳುತ್ತಿರೋ ಬ್ಯೂಟಿ ಆಕೆ  

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ "ಭೈರತಿ ರಣಗಲ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ.

ರವಿ ಬಸ್ರೂರ್ ಸಂಗೀತ ನಿರ್ದೇಶನ, ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ "ಭೈರತಿ ರಣಗಲ್" ಚಿತ್ರಕ್ಕಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News