ಧೀರʼ ಶಿವಣ್ಣನ ಹೊಸ ಸಿನಿಮಾ ಅನೌಸ್ಸ್‌..! ಸಖತ್ತಾಗಿದೆ ಹ್ಯಾಟ್ರಿಕ್‌ ಹೀರೋ ಹೊಸ ಚಿತ್ರದ ಪೋಸ್ಟರ್‌

Shivarajkumar new movies : ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬದ ಪ್ರಯುಕ್ತ ಸಾಲು ಸಾಲು ಸಿನಿಮಾಗಳ ಟೈಟಲ್‌ ಮತ್ತು ಟೀಸರ್‌ ಹಾಗೂ ಟ್ರೈಲರ್‌ ಬಿಡುಗಡೆ ಕಂಡಿವೆ. ಇದೀಗ ಇವುಗಳ ಸಾಲಿನಲ್ಲಿ ಶಿವಣ್ಣ ನಟನೆಯ ಮುಂಬರುವ ಧೀರ ಸಿನಿಮಾ ಕೂಡ ಅನೌನ್ಸ್‌ ಆಗಿದೆ.

Written by - YASHODHA POOJARI | Edited by - Krishna N K | Last Updated : Jul 12, 2023, 05:02 PM IST
  • ಇಂದು ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬ.
  • ಈ ದಿನ ಶಿವಣ್ಣ ಅಭಿನಯಿಸಲಿರುವ ಅನೇಕ ಸಿನಿಮಾ ಶೀರ್ಷಿಕೆಗಳ‌ ಅನೌನ್ಸ್ ಮೆಂಟ್ ಆಗಿವೆ.
  • ಇವುಗಳ ಸಾಲಿನಲ್ಲಿ ಶಿವಣ್ಣ ನಟನೆಯ ಮುಂಬರುವ ಧೀರ ಸಿನಿಮಾ ಕೂಡ ಅನೌನ್ಸ್‌ ಆಗಿದೆ.
ಧೀರʼ ಶಿವಣ್ಣನ ಹೊಸ ಸಿನಿಮಾ ಅನೌಸ್ಸ್‌..! ಸಖತ್ತಾಗಿದೆ ಹ್ಯಾಟ್ರಿಕ್‌ ಹೀರೋ ಹೊಸ ಚಿತ್ರದ ಪೋಸ್ಟರ್‌ title=

Dheera kannada movie : ಇಂದು ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬ. ಈ ದಿನ ಶಿವಣ್ಣ ಅಭಿನಯಿಸಲಿರುವ ಅನೇಕ ಸಿನಿಮಾ ಶೀರ್ಷಿಕೆಗಳ‌ ಅನೌನ್ಸ್ ಮೆಂಟ್ ಆಗಿದ್ದು ಈ ಚಿತ್ರಗಳ ಪೈಕಿ "ಧೀರ" ಸಿನಿಮಾ ಕೂಡ ಒಂದು. ಹೆಚ್.ಸಿ.ಶ್ರೀನಿವಾಸ್(ಶಿಲ್ಪ ಶ್ರೀನಿವಾಸ್) ಅರ್ಪಿಸುತ್ತಿರುವ ಈ ಚಿತ್ರವನ್ನು ಚಿಲ್ಲಿ ಫಿಲಂಸ್ ಎಂಟರ್ ಟೈನ್ ಮೆಂಟ್ ಅಡಿಯಲ್ಲಿ ಸಾಗರ್ ಅವರು ಅದ್ದೂರಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಇನ್ನು ಈ ಚಿತ್ರಕ್ಕೆ ನವೀನ್ ಶೆಟ್ಟಿ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ‌. 

ಸಿನಿಮಾ ನಟನಾಗಬೇಕೆಂಬ ಕನಸು ಹೊತ್ತು 12 ವರ್ಷಗಳ ಹಿಂದೆ ಮಲೆನಾಡಿಂದ ಬೆಂಗಳೂರಿಗೆ ಬಂದ ನವೀನ್ ಶೆಟ್ಟಿ ಅವರು ಎಸ್.ನಾರಾಯಣ್, ಓಂಪ್ರಕಾಶ್ ರಾವ್, ಗಡ್ಡವಿಜಿ ಅವರ ಜೊತೆ ಸಹಾಯಕನಾಗಿ ಕೆಲಸ‌ ಮಾಡಿದ್ದಾರೆ. ಇಲ್ಲಿ ಬಂದಮೇಲೆ ನಿರ್ದೇಶನದ ಮೇಲೆ ಹೆಚ್ಚು ಆಸಕ್ತಿ ಹುಟ್ಟಿ ಅದರಲ್ಲೇ ಪರಿಣತಿ ಪಡೆದಿಕೊಂಡಿದ್ದಾರೆ. 

ಇದನ್ನೂ ಓದಿ: ‘ಲೆಟ್ಸ್ ಗೆಟ್ ಮ್ಯಾರೀಡ್’ ಸಿನಿಮಾದ ಟ್ರೇಲರ್ ಹಾಗೂ ಆಡಿಯೋ ರಿಲೀಸ್‌ ಮಾಡಿದ ಕ್ಯಾಪ್ಟನ್ ಕೂಲ್ ಎಂ.ಎಸ್.ಧೋನಿ..!

Open photo

ನಂತರ ಓಟಿಟಿ ವೇದಿಕೆಗೆಂದೇ 'ನಿಧಾನವಾಗಿ ಚಲಿಸಿ' ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಒಮ್ಮೆ ಆ ಚಿತ್ರವನ್ನು  ವೀಕ್ಷಿಸಿದ ಶಿವಣ್ಣ  ಮೆಚ್ಚಿ ಬೆನ್ನು ತಟ್ಟಿದ್ದಾರೆ. ಅದೇ ಸಮಯದಲ್ಲಿ ತಾವು ಶಿವಣ್ಣ ಅವರಿಗೆಂದೇ  ಮಾಡಿಕೊಂಡಿದ್ದ 'ಧೀರ' ಕಥೆಯನ್ನು ಹೇಳಿ ಅವರನ್ನು ಒಪ್ಪಿಸಿದ್ದಾರೆ. 

ತೆರೆಮೇಲೆ ಶಿವಣ್ಣ ಅವರನ್ನು ಬೇರೆಯದೇ ರೀತಿ ತೋರಿಸಹೊಟಿರುವ ನವೀನ್ ಶಟ್ಟಿ, ಮಾಸ್, ಅಂಡರ್ ವರ್ಲ್ಡ್, ಮ್ಯೂಸಿಕಲ್ ಆಕ್ಷನ್ ಡ್ರಾಮಾ ಸಬ್ಜೆಕ್ಟ್ ಅನ್ನು ಈ ಚಿತ್ರದಲ್ಲಿ ಹೇಳಹೊರಟಿದ್ದಾರೆ. ಕಲಿಯುಗ ಕರ್ಣ ಎಂಬ ಟ್ಯಾಗ್ ಲೈನ್ ಹೊಂದಿರುವ ಈ ಚಿತ್ರಕ್ಕೆ ಎಂ.ಎನ್. ಕೃಪಾಕರ್ ಅವರು  ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಧೀರ ಚಿತ್ರದ ಪ್ರಿಪ್ರೊಡಕ್ಷನ್ ವರ್ಕ್ ನಡೆಯುತ್ತಿದ್ದು, ಶೀಘ್ರದಲ್ಲೇ ನಾಯಕಿ ಸೇರಿದಂತೆ ಉಳಿದ ತಾಂತ್ರಿಕ ವರ್ಗವನ್ನು ಪ್ರಕಟಿಸಲಾಗುವುದು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News