Ghost movie release date : ʼಘೋಸ್ಟ್‌ʼ ಕನ್ನಡ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ಈ ಹಿಂದೆ ಚಿತ್ರದ ಪೋಸ್ಟರ್‌ ರಿಲೀಸ್‌ ಆಗಿ ಕುತೂಹಲ ಮೂಡಿಸಿತ್ತು. ಇದೀಗ ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌ ಆಗಿದ್ದು, ಅಕ್ಟೋಬರ್ 19ರಂದು ವಿಶ್ವದಾದ್ಯಂತ ಘೋಸ್ಟ್ ತೆರೆಗೆ ಅಪ್ಪಳಿಸಲಿದೆ.


COMMERCIAL BREAK
SCROLL TO CONTINUE READING

ಹೌದು... ಶ್ರೀನಿ ನಿರ್ದೇಶನದಲ್ಲಿ ಮೂಡಿ ಬರುತ್ತಿವ ʼಘೋಸ್ಟ್‌ʼ ಚಿತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ನಟಿಸಿದ್ದಾರೆ, ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಈ ಚಿತ್ರವನ್ನು ಅದ್ಧೂರಿಯಾಗಿ ನಿರ್ಮಾಣ ಮಾಡಲಾಗಿದ್ದು, ಶಿವಣ್ಣ ಅಭಿಮಾನಿಗಳಿಗೆ ದಸರಾ ಉಡುಗೊರೆಯಾಗಿ ಈ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ.


ಕಾಂತಾರ 2 ಶೂಟಿಂಗ್, ರಿಲೀಸ್ ಡೇಟ್ ರಿವೀಲ್.. ಯಾವಾಗ ಗೊತ್ತಾ?


ಇತ್ತೀಚೆಗೆ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದ್ದು, ಕುಂಬಳಕಾಯಿ ಒಡೆಯಲಾಗಿತ್ತು. ಈಗಾಗಲೇ ಘೋಸ್ಟ್ ಫಸ್ಟ್ ಲುಕ್, ಬಿಗ್‌ ಡ್ಯಾಡಿ ಟೀಸರ್ ಅಭಿಮಾನಿಗಳ ಮನ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಅಲ್ಲದೆ, ಕ್ಯೂರಿಯಾಸಿಟಿ ಹುಟ್ಟು ಹಾಕಿತ್ತು, ಸಧ್ಯ ಚಿತ್ರವನ್ನು ತೆರೆಯ ಮೇಲೆ ನೋಡುವ ಕಾತುರ ಶಿವಣ್ಣ ಅಭಿಮಾನಿಗಳಲ್ಲಿ ಹೆಚ್ಚಿದೆ.


ಘೋಸ್ಟ್‌ ಚಿತ್ರದಲ್ಲಿ ಶಿವರಾಜಕುಮಾರ್ ನಾಯಕನಾಗಿ ನಟಿಸಿದ್ದಾರೆ, ಅನುಪಮ್ ಖೇರ್, ಜಯರಾಂ, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್, ಶ್ರೀನಿ ಮುಂತಾದವರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಚಿತ್ರ ಅಕ್ಟೋಬರ್‌ 19 ದಸರಾ ಹಬ್ಬದಂದು ಅದ್ಧೂರಿಯಾಗಿ ಬಿಡುಗಡೆಯಾಗಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.