ಬೆಂಗಳೂರು : ʼಘೋಸ್ಟ್ʼ ಸಿನಿಮಾ ಮೂಲಕ ಬಾಕ್ಸ್ ಆಫೀಸ್ ಬ್ಲಾಸ್ಟ್ ಮಾಡೋಕೆ ಕರುನಾಡ ಚಕ್ರವರ್ತಿ ಡಾ. ಶಿವರಾಜಕುಮಾರ್ ಅವರು ಸಿದ್ಧರಾಗಿದ್ದು, ಶಿವಣ್ಣ ಹೊಸ ಸಿನಿಮಾಗೆ ಗೀತಾ ಶಿವರಾಜಕುಮಾರ್ ಅವರು ಕ್ಲಾಪ್ ಮಾಡುವ ಮೂಲಕ ಕ್ಯಾಮರಾಗೆ ಚಾಲನೆ ನೀಡಿದರು.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಹಿಟ್ ಸಿನಿಮಾಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಸಂದೇಶ್ ಎನ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ. ಶ್ರೀನಿ ನಿರ್ದೇಶನದ ಹಾಗೂ ಶಿವರಾಜಕುಮಾರ್ ಅಭಿನಯಿಸುತ್ತಿರುವ ʼಘೋಸ್ಟ್ʼ ಚಿತ್ರದ ಮುಹೂರ್ತ ಸಮಾರಂಭ ಮಿನರ್ವ ಮಿಲ್ನಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಗೀತಾ ಶಿವರಾಜಕುಮಾರ್ ಅವರು ಕ್ಲಾಪ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಮೂಹೂರ್ತದಲ್ಲಿ ಚಿತ್ರತಂಡದ ಸದಸ್ಯರು ಹಾಗೂ ಗಣ್ಯರು ಉಪಸ್ಥಿತರಿದ್ದರು.
ಇದನ್ನೂ ಓದಿ: ʼನರೇಂದ್ರ ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರುʼ
ವಿಭಿನ್ನ ಕಥಾಹಂದರ ಹೊಂದಿರುವ ʼಘೋಸ್ಟ್ʼಗಾಗಿ ಅದ್ದೂರಿ ಸೆಟ್ಗಳನ್ನು ನಿರ್ಮಾಣ ಮಾಡಲಾಗಿದೆ. ಮಿನರ್ವ ಮಿಲ್ನಲ್ಲಿ 15 ಹಾಗೂ ಮೈಸೂರಿನಲ್ಲಿ 4 ಡಿಫ್ರೆಂಟ್ ಸೆಟ್ಗಳನ್ನು ಕಲಾ ನಿರ್ದೇಶಕ ಮೋಹನ್ ಬಿ ಕೆರೆ ನಿರ್ಮಾಣ ಮಾಡಿದ್ದಾರೆ. ಬೆಂಗಳೂರು ಹಾಗೂ ಮೈಸೂರಿನಲ್ಲಿ ಚಿತ್ರೀಕರಣ ನಡೆಯಲಿದೆ. ಮಿನರ್ವ ಮಿಲ್ನಲ್ಲಿ ನಿರ್ಮಿಸಲಾಗಿರುವ ಜೈಲ್ ಸೆಟ್ನಲ್ಲೇ 24 ದಿನಗಳ ಚಿತ್ರೀಕರಣ ನಡೆಯಲಿದೆ. ಈ ಅದ್ದೂರಿ ಸೆಟ್ಗಳ ನಿರ್ಮಾಣಕ್ಕೆ ಸುಮಾರು ಮೂರು ಕೋಟಿ ವೆಚ್ಚವಾಗಿದೆಯಂತೆ.
ʼಶ್ರೀನಿವಾಸ ಕಲ್ಯಾಣʼ, ʼಓಲ್ಡ್ ಮಾಂಕ್ʼ ಸೇರಿದಂತೆ ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿ ನಿರ್ದೇಶನದ ಐದನೇ ಚಿತ್ರ ʼಘೋಸ್ಟ್ʼ. ನಿರ್ದೇಶಕರೆ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ʼಘೋಸ್ಟ್ʼ ಚಿತ್ರಕ್ಕಿದೆ. ಐದು ಸಾಹಸ ಸನ್ನಿವೇಶಗಳು ಈ ಚಿತ್ರದಲ್ಲಿದ್ದು, ಶಿವರಾಜಕುಮಾರ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್, ದತ್ತಣ್ಣ, ಅಭಿಜಿತ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.