ShivaRajkumar on slipper hurled at Darshan : ಕ್ರಾಂತಿ ಸಿನಿಮಾದ ಎರಡನೇ ಹಾಡಿನ ಬಿಡುಗಡೆ ಸಮಾರಂಭ ನಿನ್ನೆ ಬಳ್ಳಾರಿಯ ಹೊಸಪೇಟೆಯಲ್ಲಿ ನಡೆಯಿತು. ಈ ಘಟನಗೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿ ಬಾಸ್ ಅಭಿಮಾನಿಗಳು ಅಪ್ಪು ಅಭಿಮಾನಿಗಳ ವಿರುದ್ಧ ಕಿಡಿಕಾರಿದ್ದರು. ಈ ಕಾರ್ಯಕ್ರಮದ ಆಯೋಜನೆ ಆದಾಗಲೇ ದರ್ಶನ್ ಹಾಗೂ ಪುನೀತ್ ಅಭಿಮಾನಿಗಳ ನಡುವೆ ಫ್ಯಾನ್ ವಾರ್ ಶುರುವಾಗಿತ್ತು. ಹೊಸಪೇಟೆಗೆ ಬಂದ ನಟ ದರ್ಶನ್ ಅವರು ಪುನೀತ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು. ಆ ಬಳಿಕ ಪರಿಸ್ಥಿತಿ ಕೊಂಚ ತಣ್ಣಗಾಗಿತ್ತು. ಕ್ರಾಂತಿ ಚಿತ್ರದ ಎರಡನೇ ಸಾಂಗ್ ಬೊಂಬೆ ಬೊಂಬೆ ಹಾಡು ರಿಲೀಸ್ ಕಾರ್ಯಕ್ರಮ ಸರಾಗವಾಗಿ ಆರಂಭವಾಯಿತು.
ಇದನ್ನೂ ಓದಿ : DBoss ಮೇಲೆ ಚಪ್ಪಲಿ ಎಸೆತ : ನುಗುತ್ತಲೇ ʼಪರವಾಗಿಲ್ಲ ಬಿಡು ಚಿನ್ನʼ ಎಂದ ಯಜಮಾನ..!
ಇದೀಗ ಹಾಡು ಬಿಡುಗಡೆಯಾಗುವ ಮುನ್ನ ಕ್ರಾಂತಿ ಸಾಂಗ್ ರಿಲೀಸ್ ಕಾರ್ಯಕ್ರಮದ ವೇದಿಕೆ ಮೇಲೆ ಪುನೀತ್ ಸಿನಿಮಾ ಸಾಂಗ್ ಹಾಕಿಸಿ ಕುಣಿದಿದ್ದ ಅಪ್ಪು ಅಭಿಮಾನಿಗಳೇ ಈ ಕೆಲಸ ಮಾಡಿದ್ದಾರೆ ಎಂದು ನಟ ದರ್ಶನ್ ಫ್ಯಾನ್ಸ್ ಆರೋಪಿಸುತ್ತಿದ್ದಾರೆ. ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್‌ಗಳನ್ನು ಹಾಕುತ್ತಿದ್ದಾರೆ.
ಇದರ ಬೆನ್ನಲ್ಲೇ ರಾಜ್ ಕುಟುಂಬದ ಅಭಿಮಾನಿಗಳು ಈ ರೀತಿ ಮಾಡಲ್ಲ, ಯಾರೋ ಕಿಡಿಗೇಡಿಗಳು ಈ ಕೆಲಸ ಮಾಡಿದ್ದಾರೆ ಎಂದು ಶಿವರಾಜ್‌ಕುಮಾರ್, ರಾಘಣ್ಣ ಮತ್ತು ಅಪ್ಪು ಫ್ಯಾನ್ಸ್ ವಾದಿಸುತ್ತಿದ್ದಾರೆ. ಈ ಕುರಿತಾಗಿ ಶಿವರಾಜ್‌ಕುಮಾರ್ ಅವರ ಬಳಿ ಕೆಲ ಅಭಿಮಾನಿಗಳು ದಯವಿಟ್ಟು ಇದರ ಕುರಿತು ಮಾತನಾಡಿ ಎಂದು ಮನವಿ ಮಾಡಿದ್ದರು. ಈ ಬೆನ್ನಲ್ಲೇ ಶಿವರಾಜ್‌ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ನೆನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ.
ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ
ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲನಿಮ್ಮ
ಶಿವಣ್ಣ pic.twitter.com/34eJfpdmKk— DrShivaRajkumar (@NimmaShivanna) December 19, 2022
"ನಿನ್ನೆ ಹೊಸಪೇಟೆಯಲ್ಲಿ ದರ್ಶನ್ ಅವರ ಮೇಲೆ ನಡೆದ ಕೃತ್ಯ ನನ್ನ ಮನಸ್ಸಿಗೆ ನೋವುಂಟು ಮಾಡಿದೆ. ಈ ರೀತಿಯ ಅಮಾನವೀಯ ಘಟನೆ ಒಂದೇ ಮನೆಯವರಂತಿರುವ ಎಲ್ಲರಿಗೂ ನೋವುಂಟು ಮಾಡುತ್ತದೆ. ಮನುಷ್ಯತ್ವ ಮರೆತು ಯಾರೂ ಈ ರೀತಿಯ ಕೃತ್ಯಗಳನ್ನು ನಡೆಸಬಾರದು ಎಂದು ವಿನಂತಿಸುತ್ತೇನೆ. ಅಭಿಮಾನದಿಂದ ಪ್ರೀತಿಯನ್ನು ತೋರಿ; ದ್ವೇಷ ಅಗೌರವವನ್ನಲ್ಲ" ಎಂದು ಶಿವಣ್ಣ ಹೇಳಿದ್ದಾರೆ.
ಇದನ್ನೂ ಓದಿ : ದರ್ಶನ್ ಮೇಲೆ ಚಪ್ಪಲಿ ಎಸೆತ: ನಿಮ್ಮ ಮೇಲೆ ಆರೋಪಿಸಿದವರಿಗೆ ಉತ್ತರ ಕೊಡಿ ಶಿವಣ್ಣ ಎಂದ ಫ್ಯಾನ್ಸ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.