Puneeth Rajkumar: ʼನನಗೆ ನೀನು ಎಂದೆಂದಿಗೂ ಪುಟ್ಟ ತಮ್ಮʼ : ಅಪ್ಪು ಸ್ಮರಿಸಿದ ಶಿವಣ್ಣ

Shivarajkumar : ಇಂದು ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲದಿದ್ದರೂ, ಅವರ ನೆನಪು ಅಜರಾಮರ. ಅಂದಹಾಗೆ, ಶಿವರಾಜ್‌ಕುಮಾರ್ ಅವರು ಕೂಡ ಸಹೋದರನಿಗಾಗಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದು, ಸಖತ್‌ ವೈರಲ್‌ ಆಗಿದೆ.

Written by - Krishna N K | Last Updated : Mar 17, 2024, 03:03 PM IST
    • ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್ ಅವರ ಹುಟ್ಟು ಹಬ್ಬ.
    • ಅಪ್ಪು ಸಮಾಧಿಗೆ ಅವರ ಅಭಿಮಾನಿಗಳು ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ.
    • ಶಿವಣ್ಣ ತಮ್ಮನ್ನ ನೆನೆದು ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ.
Puneeth Rajkumar: ʼನನಗೆ ನೀನು ಎಂದೆಂದಿಗೂ ಪುಟ್ಟ ತಮ್ಮʼ : ಅಪ್ಪು ಸ್ಮರಿಸಿದ ಶಿವಣ್ಣ title=
Puneeth rajkumar

Puneeth Rajkumar birthday : ಇಂದು ಸ್ಯಾಂಡಲ್‌ವುಡ್‌ ಪವರ್ ಸ್ಟಾರ್‌ ಪುನೀತ್ ರಾಜ್‌ಕುಮಾರ್ ಅವರ ಹುಟ್ಟು ಹಬ್ಬ. ಈಗಾಗಲೇ ಕಂಠೀರವ ಸ್ಟುಡಿಯೋದಲ್ಲಿರುವ ಅಪ್ಪು ಸಮಾಧಿಗೆ ಅವರ ಅಭಿಮಾನಿಗಳು ಭೇಟಿ ನೀಡಿ ದರ್ಶನ ಪಡೆಯುತ್ತಿದ್ದಾರೆ. ಇದರ ನಡುವೆ ಶಿವಣ್ಣ ತಮ್ಮನ್ನ ನೆನೆದು ವಿಶೇಷ ಪೋಸ್ಟ್‌ ಒಂದನ್ನು ಹಂಚಿಕೊಂಡಿದ್ದಾರೆ..

ಹೌದು.. ಇಂದು ಪುನೀತ್‌ ರಾಜ್‌ಕುಮಾರ್‌ ಅಭಿಮಾನಿಗಳಿಗೆ ಸಂತಸದ ದಿನ. ಇಂದು ಅಪ್ಪು ನಮ್ಮೊಂದಿಗೆ ದೈಹಿಕವಾಗಿ ಇಲ್ಲದಿದ್ದರೂ, ಅವರ ನೆನಪು ಅಜರಾಮರ. ಅಂದಹಾಗೆ, ಶಿವರಾಜ್‌ಕುಮಾರ್ ಅವರು ಕೂಡ ಸಹೋದರನಿಗಾಗಿ ವಿಶೇಷ ಪೋಸ್ಟ್ ಹಂಚಿಕೊಂಡಿದ್ದು, ಸಖತ್‌ ವೈರಲ್‌ ಆಗಿದೆ.

ಇದನ್ನೂ ಓದಿ: ಟೈಮ್ ಸ್ಕ್ವೇರ್​ನಲ್ಲಿ ರಾಜರತ್ನ..! ನ್ಯೂಯಾರ್ಕ್‌ನಲ್ಲಿ ಅಪ್ಪು ಬತ್‌ ಡೇ ಮಾಡಿದ ಫ್ಯಾನ್ಸ್

ಇನ್ನು ಪೋಸ್ಟ್‌ನಲ್ಲಿ, ಅಪ್ಪು ಆಗಿ ಬಂದ ನೀನು ಪುನೀತನಾಗಿ ಎಲ್ಲರ ಮನಸ್ಸಲ್ಲೂ ಭದ್ರವಾಗಿ ಇದ್ದುಬಿಟ್ಟೆ. ಜನ ನಿನ್ನಲ್ಲಿ ದೇವರನ್ನು ಕಾಣುತ್ತಾರೆ, ಎಷ್ಟೋ ಜನಕ್ಕೆ ನೀನು ಮಾರ್ಗದರ್ಶಿ, ಅವರ ಆರಾಧ್ಯ ದೈವ, ಕೋಟಿ ಕೋಟಿ ಅಭಿಮಾನಿಗಳಿಗೆ ಪ್ರೀತಿಯ ಪವ‌ರ್ ಸ್ಟಾರ್.

ಆದರೆ ನನಗೆ ಎಂದೆಂದಿಗೂ ನನ್ನ ಪುಟ್ಟ ತಮ್ಮ. ನನ್ನ ಕೈ ಹಿಡಿದು ನಡೆದ ತಮ್ಮ, ನಿನ್ನ ನಗುವಲ್ಲಿ ನನ್ನ ಸಂತೋಷ ಹುಡುಕ ಕೊಟ್ಟ ತಮ್ಮ, ನನ್ನ ಎದೆಯ ಮೇಲೆ ಮಲಗಿದ ತಮ್ಮ. ನನ್ನ ಮನಸಲ್ಲೇ ಸದಾ ರಾಜನಂತೆ ಬಾಳುವ ತಮ್ಮ. ಹುಟ್ಟುಹಬ್ಬದ ಶುಭಾಶಯಗಳು ಅಪ್ಪು ಎಂದು ಶಿವಣ್ಣ ಬರೆದುಕೊಂಡಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News