ಶಿವಣ್ಣ ನಟನೆಯ ʻಭೈರತಿ ರಣಗಲ್ʼ ಟೈಟಲ್‌ ಸಾಂಗ್‌ಗೆ ಸಿನಿಪ್ರಿಯರು ಫಿದಾ

ShivRajkumar starrer Bhairati Rangal Movie: ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

Written by - YASHODHA POOJARI | Last Updated : Aug 11, 2024, 01:09 PM IST
    • ಶಿವರಾಜ್‌ಕುಮಾರ್ ನಟನೆಯ ʻಭೈರತಿ ರಣಗಲ್ʼ
    • ಭೈರತಿ ರಣಗಲ್ ರಿಲೀಸ್‌ ಡೇಟ್‌ ಫಿಕ್ಸ್‌
    • ಭೈರತಿ ರಣಗಲ್ ಟೈಟಲ್‌ ಸಾಂಗ್‌
ಶಿವಣ್ಣ ನಟನೆಯ ʻಭೈರತಿ ರಣಗಲ್ʼ ಟೈಟಲ್‌ ಸಾಂಗ್‌ಗೆ ಸಿನಿಪ್ರಿಯರು ಫಿದಾ title=
ಶಿವರಾಜ್‌ಕುಮಾರ್

ShivRajkumar starrer Bhairati Rangal Movie: ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ಅವರು ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ಭೈರತಿ ರಣಗಲ್" ಚಿತ್ರದ ಶೀರ್ಷಿಕೆ ಗೀತೆ(ಟೈಟಲ್ ಸಾಂಗ್) ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. 

ಕಿನ್ನಾಳ್ ರಾಜ್ ಅವರು ಬರೆದಿರುವ "ಇತಿಹಾಸವೇ ನಿಬ್ಬೆರಿಗಿಸುವ ಎತ್ತಿ ಹಿಡಿಯುವ ಮೈಲಿಗಲ್ಲು" ಎಂಬ  ಭೈರತಿ ರಣಗಲ್ ಸಿನಿಮಾದ ಶೀರ್ಷಿಕೆ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ರವಿ ಬಸ್ರೂರು ಸಂಗೀತ ನೀಡಿದ್ದಾರೆ. ಸಂತೋಷ್ ವೆಂಕಿ ಹಾಡಿದ್ದಾರೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಿಣೆಯಾಗುತ್ತಿರುವ ಈ ಹಾಡಿಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.

ಇದನ್ನೂ ಓದಿ: ಗೆದ್ದ ಪ್ರೀತಿಗಾಗಿ ಜಾರಿತು ಕಣ್ಣ ಹನಿ..ತರುಣ್‌ ತಾಳಿ ಕಟ್ಟುತ್ತಿದ್ದಂತೆ ಭಾವುಕರಾದ ಸೋನಾಲ್‌ 

ನರ್ತನ್ ಹಾಗೂ ಶಿವಣ್ಣ ಅವರ ಕಾಂಬಿನೇಶನ್ ನಲ್ಲಿ ಬಂದಿದ್ದ "ಮಫ್ತಿ" ಚಿತ್ರದ ಪ್ರೀಕ್ವೆಲ್ ಆಗಿರುವ "ಭೈರತಿ ರಣಗಲ್" ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಹಾಗೂ ಹಾಡಿನ ಮೂಲಕ ಜನಪ್ರಿಯವಾಗಿರುವ ಈ ಚಿತ್ರದ ಬಿಡುಗಡೆಗೆ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ ನಲ್ಲಿ ತೆರೆಗೆ ಬರಲಿದೆ.  

ಶಿವರಾಜಕುಮಾರ್ ಅವರಿಗೆ ನಾಯಕಿಯಾಗಿ ರುಕ್ಮಿಣಿ ವಸಂತ್ ಅಭಿನಯಿಸಿದ್ದಾರೆ. ನವೀನ್ ಕುಮಾರ್ ಛಾಯಾಗ್ರಹಣ, ಆಕಾಶ್ ಹಿರೇಮಠ ಸಂಕಲನ, ‌ಗುಣ ಕಲಾ ನಿರ್ದೇಶನ ಹಾಗೂ ದಿಲೀಪ್ ಸುಬ್ರಹ್ಮಣ್ಯ, ಚೇತನ್ ಡಿಸೋಜ ಸಾಹಸ ನಿರ್ದೇಶನ "ಭೈರತಿ ರಣಗಲ್" ಚಿತ್ರಕ್ಕಿದೆ.

ಇದನ್ನೂ ಓದಿ: ತುಲಾ ಲಗ್ನದಲ್ಲಿ ಮಾಂಗಲ್ಯಧಾರಣೆ..ಅದ್ದೂರಿ ಮದುವೆಯಲ್ಲಿ ಅಪ್ಪನ ಫೋಟೋದ ಮುಂದೆ ತಾಳಿ ಕಟ್ಟಿದ ಸುಧೀರ್‌

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News