Meena Husband Death: ಖ್ಯಾತ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ
ಕಳೆದ ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾಸಾಗರ್ ಅವರು ತಮ್ಮ 48 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ.
ಬೆಂಗಳೂರು: ಖ್ಯಾತ ನಟಿ ಮೀನಾ ಪತಿ ವಿದ್ಯಾಸಾಗರ್ ನಿಧನ ಹೊಂದಿದ್ದಾರೆ. ಅನಾರೋಗ್ಯದ ಹಿನ್ನೆಲೆ ವಿದ್ಯಾಸಾಗರ್ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಳೆದ ಕೆಲವು ವರ್ಷಗಳಿಂದ ಶ್ವಾಸಕೋಶದ ಕಾಯಿಲೆಯಿಂದ ಬಳಲುತ್ತಿದ್ದ ವಿದ್ಯಾಸಾಗರ್ ಅವರು ತಮ್ಮ 48 ವಯಸ್ಸಿನಲ್ಲಿ ಇಹಲೋಕ ತ್ಯಜಿಸಿದ್ದಾರೆ. ಮೀನಾ 2009ರಲ್ಲಿ ಬೆಂಗಳೂರಿನ ಮೂಲದ ಉದ್ಯಮಿ ವಿದ್ಯಾಸಾಗರ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿಗೆ ನೈನಿಕಾ ಎಂಬ ಮಗಳಿದ್ದಾಳೆ.
ಕಿಚ್ಚ ಸುದೀಪ್ ಅವರನ್ನು ನೋಡಬೇಕಂತೆ ಆ್ಯಸಿಡ್ ಸಂತ್ರಸ್ತೆ!
ವಿದ್ಯಾ ಸಾಗರ್ ಸಾಫ್ಟ್ ವೇರ್ ಎಂಜಿನಿಯರ್ ಆಗಿದ್ದರು. ಮದುವೆಯ ನಂತರ ಈ ಜೋಡಿ ಚೆನ್ನೈನಲ್ಲಿ ನೆಲೆಸಿದ್ದರು. ಮೀನಾ ಪತಿ ವಿದ್ಯಾಸಾಗರ್ ನಿಧನದ ಸುದ್ದಿ ಕೇಳಿ ಚಿತ್ರರಂಗದ ಸದಸ್ಯರು ಮತ್ತು ಲಕ್ಷಾಂತರ ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
‘ನಟಿ ಮೀನಾ ಅವರ ಪತಿ ವಿದ್ಯಾಸಾಗರ್ ಅಕಾಲಿಕ ನಿಧನದ ಸುದ್ದಿ ಕೇಳಿ ಆಘಾತವಾಯಿತು.ಮೀನಾ ಮತ್ತವರ ಕುಟುಂಬದ ಆತ್ಮೀಯರಿಗೆ ಹೃತ್ಪೂರ್ವಕ ಸಂತಾಪಗಳು. ವಿದ್ಯಾಸಾಗರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಮೀನಾ ಜೊತೆಗೆ ನಟಿಸಿರುವ ನಟ ಶರತ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಸಲ್ಮಾನ್ ಖಾನ್ ಚಿತ್ರದಿಂದ ತೆಲುಗಿನ DSP ಔಟ್, ರವಿ ಬಸ್ರೂರ್ ಇನ್..!
ಮೀನಾ ಬಾಲ ಕಲಾವಿದೆಯಾಗಿ ತಮ್ಮ ಸಿನಿ ವೃತ್ತಿಜೀವನವನ್ನು ಪ್ರಾರಂಭಿಸಿದರು. 90ರ ದಶಕ ಮತ್ತು 2000ರ ದಶಕದ ಉತ್ತರಾರ್ಧದಲ್ಲಿ ಪ್ರಮುಖ ಮಹಿಳಾ ಪಾತ್ರಗಳಲ್ಲಿ ನಟಿಸಿ, ಹೆಚ್ಚು ಬೇಡಿಕೆ ನಟಿಯರಲ್ಲಿ ಒಬ್ಬರಾಗಿದ್ದರು. ಕನ್ನಡದ ‘ಪುಟ್ನಂಜ’, ‘ಸ್ವಾತಿಮುತ್ತು’ ಸೇರಿದಂತೆ ವಿವಿಧ ಭಾಷೆಗಳಲ್ಲಿ ಹಲವಾರು ಸಿನಿಮಾಗಳಲ್ಲಿ ನಟಿಸಿ ಮೀನಾ ಮಿಂಚಿದ್ದಾರೆ. ಅವರು ದಕ್ಷಿಣ ಭಾರತದ ಎಲ್ಲಾ ಸೂಪರ್‌ಸ್ಟಾರ್‌ಗಳೊಂದಿಗೆ ನಟಿಸಿದ್ದಾರೆ.
ಮೀನಾ ಅವರ ಹಾದಿಯಲ್ಲೇ ಮಗಳು ನೈನಿಕಾ ಕೂಡ ಬಾಲ ಕಲಾವಿದೆಯಾಗಿ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದ್ದರು. ಬ್ಲಾಕ್‌ಬಸ್ಟರ್ ಚಿತ್ರ ‘ತೇರಿ’ಯಲ್ಲಿ ಅವರು ವಿಜಯ್ ಮಗಳ ಪಾತ್ರವನ್ನು ನಿರ್ವಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ