" ಬಿಂಗೋ" ಚಿತ್ರಕ್ಕೆ ಮೂರನೇ ಹಂತದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ನಗರದ ಹೊರವಲಯದಲ್ಲಿರುವ ದೇವರಾಜ್ ಎಸ್ಟೇಟ್ ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ಬಹುತೇಕ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ-Balam Pichkari Song ಶೂಟಿಂಗ್‌ ವೇಳೆ ಭಾಂಗ್‌ ಮತ್ತಲ್ಲಿ ದೀಪಿಕಾ - ರಣಬೀರ್‌... ಸೆಟ್‌ಲ್ಲಿದ್ದವರೆಲ್ಲ ಶಾಕ್‌.!!


ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ರಾಗಿಣಿ ದ್ವಿವೇದಿ, ಆರ್ ಕೆ ಚಂದನ್ (ನಾಯಕ) , ರಕ್ಷಾ ನಿಂಬರ್ಗಿ (ನಾಯಕಿ), ರಾಜೇಶ್ ನಟರಂಗ, ಪವನ್(ಮಜಾ ಟಾಕೀಸ್),  ಮುರಳಿ ಪೂರ್ವಿಕ್, ಅಪೂರ್ವ, ಆಶಾ ಸುಜಯ್, ಶ್ರವಣ್ ಮುಂತಾದವರು ತಾರಾಬಳಗದಲ್ಲಿದ್ದಾರೆ. 


ಈ ಚಿತ್ರದಲ್ಲಿ ರಾಗಿಣಿ ದ್ವಿವೇದಿ ಅವರು ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಎರಡು ಶೇಡ್ ಗಳಲ್ಲಿ ಅವರ ಪಾತ್ರವಿರುತ್ತದೆ ಎಂದು ನಿರ್ದೇಶಕರು ತಿಳಿಸಿದ್ದಾರೆ. ಹಿತನ್ ಹಾಸನ್ ಸಂಗೀತ ನಿರ್ದೇಶನವಿರುವ  "ಬಿಂಗೋ" ಚಿತ್ರಕ್ಕೆ  ನಟರಾಜ್ ಮುದ್ದಾಲ್ ಅವರ ಛಾಯಾಗ್ರಹಣವಿದೆ.


ಇದನ್ನೂ ಓದಿ-Bollywood: ಕಾಶ್ಮೀರಿ  ಫೈಲ್ಸ್ ನಿಂದ ಮನೆಮಾತಾದ ಅನುಪಮ್ ಖೇರ್ ಗೆ ಹುಟ್ಟು ಹಬ್ಬದ ಸಂಭ್ರಮ


 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.