ಪ್ರಭುದೇವ ಅಭಿನಯದ "wolf" ಚಿತ್ರದ ಚಿತ್ರೀಕರಣ ಮುಕ್ತಾಯ

ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "wolf" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. 

Written by - Zee Kannada News Desk | Last Updated : Dec 25, 2022, 11:30 PM IST
  • ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
  • ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.
  • ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
 ಪ್ರಭುದೇವ ಅಭಿನಯದ "wolf" ಚಿತ್ರದ ಚಿತ್ರೀಕರಣ ಮುಕ್ತಾಯ title=

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "wolf" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ.

ಇದನ್ನೂ ಓದಿ: ಕ್ರಿಸ್ಮಸ್ ಸಂಭ್ರಮದಲ್ಲಿ ಚರ್ಚ್‌ಗೆ ತೆರಳುತ್ತಿದ್ದ ಯುವಕ ಮಸಣಕ್ಕೆ..! 

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 

ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ.ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ "wolf" ಚಿತ್ರದ ನಿರ್ಮಾಣ ನಿರ್ವಾಹಕರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News