ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಸದಭಿರುಚಿ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆ ಲಾಂಛನದಲ್ಲಿ ರಾಷ್ಟ್ರಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್(ಎಂ.ಎಲ್.ಸಿ)  ನಿರ್ಮಸಿರುವ, ಇಂಡಿಯನ್ ಮೈಕಲ್ ಜಾಕ್ಸನ್ ಪ್ರಭುದೇವ ನಾಯಕರಾಗಿ ನಟಿಸಿರುವ "wolf" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬಹುಕೋಟಿ ವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರಕ್ಕೆ ಪಾಂಡಿಚೇರಿ, ಚೆನೈ, ಬೆಂಗಳೂರು, ಅಂಡಮಾನ್, ನಿಕೋಬಾರ್ ಮುಂತಾದ ಕಡೆ 65 ದಿನಗಳ ಚಿತ್ರೀಕರಣ ನಡೆದಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಕ್ರಿಸ್ಮಸ್ ಸಂಭ್ರಮದಲ್ಲಿ ಚರ್ಚ್‌ಗೆ ತೆರಳುತ್ತಿದ್ದ ಯುವಕ ಮಸಣಕ್ಕೆ..! 


ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ವಿನು ವೆಂಕಟೇಶ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲೆಯಾಳಂ ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದೆ.ಪ್ರಭುದೇವ, ಅಂಜು ಕುರಿಯನ್, ಲಕ್ಷ್ಮೀ ರೈ, ಅನಸೂಯ(ಪುಷ್ಪ ಖ್ಯಾತಿ) ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. 


ಅಂಬರೀಶ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಅರುಳ್ ವಿನ್ಸೆಂಟ್ ಅವರ ಛಾಯಾಗ್ರಹಣವಿದೆ.ಲಾರೆನ್ಸ್ ಕಿಶೋರ್ ಸಂಕಲನ, ಪ್ರದೀಪ್ ದಿನೇಶ್ ಸಾಹಸ ನಿರ್ದೇಶನ, ಮಣಿ ಮೌಳಿ ಕಲಾ ನಿರ್ದೇಶನ ಹಾಗೂ ಗಣೇಶ್, ಶ್ರೀಧರ್, ಭೂಪತಿ ರಾಜ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ಪ್ತಸಾದ್ ನಿರ್ಮಾಣ ಮೇಲ್ವಿಚಾರಣೆ ಹಾಗೂ ಶಂಕರ್ ಲಿಂಗಂ, ಮೈಸೂರು ಸುರೇಶ್ ನಿರ್ಮಾಣ ನಿರ್ವಹಣೆ "wolf" ಚಿತ್ರದ ನಿರ್ಮಾಣ ನಿರ್ವಾಹಕರು.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.