ವಿಭಿನ್ನ ಕಥಾಹಂದರ ಹೊಂದಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ!

ಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ  ನಿರ್ಮಿಸುತ್ತಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.

Written by - YASHODHA POOJARI | Edited by - Chetana Devarmani | Last Updated : Apr 21, 2022, 06:43 PM IST
  • ವಿಭಿನ್ನ ಕಥಾಹಂದರ ಹೊಂದಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ!
  • ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ "ಸ್ಪೂಕಿ ಕಾಲೇಜ್"
  • "ಪ್ರೀಮಿಯರ್ ಪದ್ಮಿನಿ" ಖ್ಯಾತಿಯ ವಿವೇಕ್ ಸಿಂಹ "ಸ್ಪೂಕಿ ಕಾಲೇಜ್" ನ ನಾಯಕ
ವಿಭಿನ್ನ ಕಥಾಹಂದರ ಹೊಂದಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ! title=
ಸ್ಪೂಕಿ ಕಾಲೇಜ್

ಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ  ನಿರ್ಮಿಸುತ್ತಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ.

"ರಂಗಿತರಂಗ", " ಅವನೇ ಶ್ರೀಮನ್ನಾರಾಯಣ" ಚಿತ್ರದಂತಹ ಉತ್ತಮ ಚಿತ್ರಗಳ ನಿರ್ಮಾಪಕರಾದ ಹೆಚ್.ಕೆ.ಪ್ರಕಾಶ್ ಅವರು ಶ್ರೀದೇವಿ ಎಂಟರ್ ಟೈನರ್ಸ್ ಲಾಂಛನದಲ್ಲಿ  ನಿರ್ಮಿಸುತ್ತಿರುವ "ಸ್ಪೂಕಿ ಕಾಲೇಜ್" ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಒಂದೇ ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಆ ರೊಮ್ಯಾಂಟಿಕ್  ಹಾಡನ್ನು ಕಾಡಿನ ಸುಂದರ ಪರಿಸರದಲ್ಲಿ ನಡೆಸುವ ಯೋಚನೆಯಿದೆ.  ಕನ್ನಡದ ಸುಪ್ರಸಿದ್ಧ ನಟಿಯೊಬ್ಬರು ಈ ಹಾಡಿನಲ್ಲಿ ಕಾಣಿಸಿಕೊಳ್ಳಲಿದಾರಂತೆ. 

ಇದನ್ನೂ ಓದಿ: ಪಾನ್ ಮಸಾಲ ಜಾಹೀರಾತು ನೀಡಿ ಟ್ರೋಲ್‌ ಆದ ಅಕ್ಕಿ! ಕ್ಷಮೆಯಾಚಿಸಿದ ನಟ ಅಕ್ಷಯ್ ಕುಮಾರ್

ಹಾರಾರ್,  ಕಾಮಿಡಿ ಹಾಗೂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಭರತ್ ಜೆ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ಭರತ್ ಅವರೆ ಬರೆದಿದ್ದಾರೆ. ರೆಡಿಯೋ ಹಾಗೂ ಪ್ರಚಾರ ವಿಭಾಗದಲ್ಲಿ ಕೆಲಸ ಮಾಡಿರುವ ಅನುಭವವಿರುವ ಭರತ್ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. 

 "ಪ್ರೀಮಿಯರ್ ಪದ್ಮಿನಿ" ಖ್ಯಾತಿಯ ವಿವೇಕ್ ಸಿಂಹ "ಸ್ಪೂಕಿ ಕಾಲೇಜ್" ನ ನಾಯಕ. "ದಿಯಾ" ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ.  ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಪಿ.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ "ಕಾಮಿಡಿ ಕಿಲಾಡಿಗಳು" ಶೋನ‌ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕರ್ನಾಟಕದಾದ್ಯಂತ ಆಡಿಷನ್ 
ನಡೆಸುವ ಮೂಲಕ ಕೂಡ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

ಧಾರವಾಡದಲ್ಲಿರುವ 103 ವರ್ಷಗಳ ಹಿಂದಿನ ಬ್ರಿಟಿಷರ ಕಾಲದ ಕಾಲೇಜು ಈ ಚಿತ್ರದ ಕೇಂದ್ರ ಬಿಂದು. ಇಲ್ಲೇ ಬಹುತೇಕ ಚಿತ್ರೀಕರಣ ನಡೆದಿದೆ. ಕಾಳಿ ನದಿಯಿಂದ ಆವೃತವಾಗಿರುವ, ದಟ್ಟವಾದ ವನಸಿರಿಯನ್ನು ಹೊಂದಿರುವ ದಾಂಡೇಲಿಯಲ್ಲೂ ಚಿತ್ರೀಕರಣ ನಡೆಸಿರುವುದಾಗಿ ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ: ‘Love...ಲಿ’ ಮೂಡ್ ನಲ್ಲಿ ಆಂಗ್ರಿ ಯಂಗ್ ಮ್ಯಾನ್..ಮತ್ತೊಂದು ಸಿನಿಮಾಗೆ ವಸಿಷ್ಠ ಸಿಂಹ ಹೀರೋ

ಹಾರಾರ್ ಚಿತ್ರಗಳು ಸಾಕಷ್ಟು ಬಂದಿದೆಯಾದರೂ, ಇದು ವಿಭಿನ್ನ ಎನ್ನುವ ನಿರ್ದೇಶಕ ಭರತ್, ನಮ್ಮ ಚಿತ್ರ ತಾಂತ್ರಿಕವಾಗಿ ಬಹಳ ಶ್ರೀಮಂತವಾಗಿರುತ್ತದೆ. ಇದು ಒಂಥರ "ಸ್ಪೂಕಿ" ಎಂದು ತಿಳಿಸಿದ್ದಾರೆ. ಮನೋಹರ್ ಜೋಶಿ ಅವರ ಮನಮೋಹಕ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಅವರ ಇಂಪಾದ ಸಂಗೀತ ಹಾಗೂ "ಕೆ.ಜಿ.ಎಫ್" ಖ್ಯಾತಿಯ ಶ್ರೀಕಾಂತ್ ಅವರ ಸಂಕಲನ "ಸ್ಪೂಕಿ ಕಾಲೇಜ್" ನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ.  ಚಿತ್ರದ ಪೋಸ್ಟರ್ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. 

 ಕನ್ನಡ ಚಿತ್ರರಂಗದಲ್ಲಿ ಈವರೆಗೂ ಬಂದಿರುವ "ನಾ ನಿನ್ನ ಬಿಡಲಾರೆ", " ಶ್", "ಆಪ್ತಮಿತ್ರ", " ರಂಗಿತರಂಗ" ದಂತಹ ಅದ್ಭುತ ಚಿತಗಳಷ್ಟೇ ನಮ್ಮ ಚಿತ್ರವೂ "ಸ್ಪೂಕಿ" ಯಾಗಿರುತ್ತದೆ ಎನ್ನುತ್ತಾರೆ ನಿರ್ದೇಶಕರು. ಯಾರು ಊಹಿಸಲಾಗದ ಕ್ಲೈಮ್ಯಾಕ್ಸ್ ಸಹ "ಸ್ಪೂಕಿ ಕಾಲೇಜ್" ನಲ್ಲಿರುತ್ತದಂತೆ.

ಸಾಮಾನ್ಯವಾಗಿ ಎಲ್ಲಾ ಕಾಲೇಜಿನಲ್ಲಿ ಲವ್ ಸ್ಟೋರಿ ನೋಡಬಹುದು. ಆದರೆ ದೆವ್ವದ ಸ್ಟೋರಿ ನೋಡಬೇಕಾದರೆ "ಸ್ಪೂಕಿ ಕಾಲೇಜ್" ಗೆ ಬರಬೇಕು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
 

Trending News