ಬಾಲಿವುಡ್ ಖ್ಯಾತ ನಟ ಶ್ರೇಯಸ್ ತಲ್ಪಾಡೆಗೆ ಹೃದಯಾಘಾತ! ಆಸ್ಪತ್ರೆಗೆ ದಾಖಲು
Shreyas Talpade Latest News:ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.
Shreyas Talpade Latest News : ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ. 47 ವರ್ಷದ ಶ್ರೇಯಸ್ ಇಡೀ ದಿನ ಶೂಟಿಂಗ್‌ನಲ್ಲಿ ನಿರತರಾಗಿದ್ದರು. ಶೂಟಿಂಗ್ ಮುಗಿಸಿ ಮನೆಗ ಬಂದ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ. ಇದರಿಂದಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು. ದಾರಿ ಮಧ್ಯೆ, ಶ್ರೇಯಸ್ ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಸದ್ಯ ಅವರಿಗೆ ಆಂಜಿಯೋಪ್ಲಾಸ್ಟಿ ಮಾಡಲಾಗಿದೆ.
ಮಾಹಿತಿಯ ಪ್ರಕಾರ, ಶ್ರೇಯಸ್ ವೆಲ್ಕಮ್ ಟು ದಿ ಜಂಗಲ್ ಚಿತ್ರದ ಚಿತ್ರೀಕರಣದಲ್ಲಿದ್ದಾರೆ. ಇತ್ತೀಚಿಗೆ, ಈ ಚಿತ್ರದ ಶೂಟಿಂಗ್ ವೀಡಿಯೊ ಕೂಡ ವೈರಲ್ ಆಗಿತ್ತು. ಇದರಲ್ಲಿ ಶ್ರೇಯಸ್ ಅಕ್ಷಯ್ ಕುಮಾರ್ ಮತ್ತು ಇತರ ತಾರೆಯರೊಂದಿಗೆ ಚಿತ್ರೀಕರಣದಲ್ಲಿ ಬ್ಯುಸಿಯಾಗಿರುವುದು ಕಾಣಿಸಿಕೊಂಡಿತ್ತು. ಶ್ರೇಯಸ್ ಸೆಟ್‌ನಲ್ಲಿ ಸಂಪೂರ್ಣವಾಗಿ ಆರೋಗ್ಯವಾಗಿದ್ದು, ಎಲ್ಲರೊಂದಿಗೆ ತಮಾಷೆ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ. ಆದರೆ ಮನೆಗೆ ಮರಳಿದ ನಂತರ ಆರೋಗ್ಯದ ಬಗ್ಗೆ ಪತ್ನಿಗೆ ಹೇಳಿದ್ದಾರೆ. ತಕ್ಷಣ ಪತ್ನಿ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಮಾರ್ಗ ಮಧ್ಯೆ, ಶ್ರೇಯಸ್ ಅವರು ಪ್ರಜ್ಞೆ ತಪ್ಪಿದ್ದಾರೆ.
ಇದನ್ನೂ ಓದಿ : ಪೂಜಾ ಹೆಗ್ಡೆಗೆ ಜೀವ ಬೆದರಿಕೆ ಕರೆ ಬಂದಿದ್ದು ಎಲ್ಲಿಂದ? ಅಸಲಿಗೆ ನಡೆದದ್ದೇನು! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್
ಆರೋಗ್ಯದಲ್ಲಿ ಸುಧಾರಣೆ :
ಶ್ರೇಯಸ್ ಅವರ ಆರೋಗ್ಯ ಮೊದಲಿಗಿಂತ ಉತ್ತಮವಾಗಿದೆ. ಆದರೆ ಸದ್ಯಕ್ಕೆ ಅವರನ್ನು ಆಸ್ಪತ್ರೆಯಲ್ಲಿ ಇರಿಸಲಾಗುವುದು ಎಂದು ವರದಿಯಾಗಿದೆ. ಶ್ರೇಯಸ್ ಅವರಿಗೆ ಹೃದಯಾಘಾತವಾದ ಸುದ್ದಿ ಬಾಲಿವುಡ್ ಬೆಚ್ಚಿ ಬಿದ್ದಿದೆ. ಶ್ರೇಯಸ್ ಕೇವಲ 47 ವರ್ಷ ವಯಸ್ಸಿನವರಾಗಿದ್ದು, ತನ್ನನ್ನು ತಾನು ಫಿಟ್ ಆಗಿಟ್ಟುಕೊಳ್ಳಲು ಪ್ರಯತ್ನಿಸುತ್ತಾರೆ. ಹೀಗಿದ್ದರೂ ಅವರಿಗೆ ಹೃದಯಾಘಾತವಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಈ ಸುದ್ದಿಯಿಂದ ಶ್ರೇಯಸ್ ಅಭಿಮಾನಿಗಳು ಕೂಡಾ ಆತಂಕಗೊಂಡಿದ್ದಾರೆ.
2023 ರಲ್ಲಿ ಕೋಟಿಗಟ್ಟಲೆ ಸಂಭಾವನೆ ಪಡೆದ ಟಾಪ್ 5 ಸೌತ್ ನಟಿಯರು ಯಾರು ಗೊತ್ತಾ?
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.