ಪ್ರತಿಭಾನ್ವಿತ ತಂಡದ 'ಶುಭಮಂಗಳ' ಟೀಸರ್ ರಿಲೀಸ್..

Written by - YASHODHA POOJARI | Edited by - Manjunath N | Last Updated : May 13, 2022, 06:45 PM IST
  • ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದ್ದು,
  • ಸಿದ್ಧಾರ್ಥ್‌ ಮಾಧ್ಯಮಿಕ, ಮೇಘನಾ ಗಾಂವ್ಕರ್‌, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.
 ಪ್ರತಿಭಾನ್ವಿತ ತಂಡದ 'ಶುಭಮಂಗಳ' ಟೀಸರ್ ರಿಲೀಸ್.. title=

ಚಿತ್ರಬ್ರಹ್ಮ ಪುಟ್ಟಣ್ಣ ಕಣಗಾಲ್ ನಿರ್ದೇಶನದ ಶುಭಮಂಗಳ ಸಿನಿಮಾ ಯಾರಿಗೆ ತಾನೇ ಗೊತ್ತಿಲ್ಲ. ಈ ಎವರ್ ಗ್ರೀನ್ ಸಿನಿಮಾವನ್ನು ಯಾರಾದ್ರೂ ಮರೆಯುವುದುಂಟೇ..? ಇದೇ ಟೈಟಲ್ ಇಟ್ಟುಕೊಂಡು ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಿನಿಮಾ ಸೆಟ್ಟೇರಿರೋದು ಹಳೇ ವಿಷಯ. ಇದೀಗ ಶುಭಮಂಗಳ ಸಿನಿಮಾ ಅಂಗಳದಿಂದ ಸಖತ್ ಮಜವಾಗಿರುವ ಟೀಸರ್ ತುಣುಕು ಬಿಡುಗಡೆಯಾಗಿದ್ದು, ಸಿನಿಮಾ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಇದನ್ನೂ ಓದಿ: Garadi Shoot In Badami: ಬಾದಾಮಿಯಲ್ಲಿ ಯೋಗರಾಜ್ ಭಟ್ಟರ "ಗರಡಿ"

ಈ ಹಿಂದೆ ಸಿಲ್ಕ್ ಬೋರ್ಡ್, ಮಹಾ ಸಂಪರ್ಕ ಸೇರಿದಂತೆ 20ಕ್ಕೂ ಹೆಚ್ಚು ಕಿರುಚಿತ್ರಗಳ ನಿರ್ಮಾತೃ ಸಂತೋಷ್ ಗೋಪಾಲ್ ನಿರ್ದೇಶನದಲ್ಲಿ ತಯಾರಾಗಿರುವ ಶುಭಮಂಗಳ ಸಿನಿಮಾದಲ್ಲಿ ಒಂದು ಮದುವೆ ಮನೆಯಲ್ಲಿ ನಡೆಯುವ ಕಾಮಿಡಿ, ಲವ್, ಸೆಂಟಿಮೆಂಟ್ ಎಳೆಯನ್ನು ಇಟ್ಕೊಂಡು ಸಿನಿಮಾ ಮಾಡಿದ್ದಾರೆ. ಪ್ರತಿಯೊಬ್ಬರಿಗೂ ಕನೆಕ್ಟ್ ಆಗುವ ಸಿನಿಮಾ ಇದಾಗಿದ್ದು, ಸಿದ್ಧಾರ್ಥ್‌ ಮಾಧ್ಯಮಿಕ, ಮೇಘನಾ ಗಾಂವ್ಕರ್‌, ಹಿತಾ ಚಂದ್ರಶೇಖರ್‌, ರಾಕೇಶ್ ಮಯ್ಯ, ಅದಿತಿ ರಾಮ್, ದೀಪ್ತಿ ನಾಗೇಂದ್ರ, ಅರುಣ್ ಬಲಾಜಿ ಸೇರಿದಂತೆ ದೊಡ್ಡ ತಾರಾಬಳಗವೇ ಸಿನಿಮಾದಲ್ಲಿದೆ.No description available.

ಇದನ್ನೂ ಓದಿ: ಮತ್ತೆ ಶುರುವಾಗುತ್ತಾ ಮಜಾ ಟಾಕೀಸ್?‌

ಈಗಾಗಲೇ ಶೂಟಿಂಗ್ ಕಂಪ್ಲೀಟ್ ಮಾಡಿ ರಿಲೀಸ್ ಹೊಸ್ತಿಲಿನಲ್ಲಿರುವ ಶುಭಮಂಗಳ ಸಿನಿಮಾದಲ್ಲಿ ಐದು ವೆರೈಟಿ ಹಾಡುಗಳಿದ್ದು, ಜೂಡಾ ಸ್ಯಾಂಡಿ ಮ್ಯೂಸಿಕ್ ಇಂಪು, ರಾಕೇಶ್ ಬಿ. ರಾಜ್ ಕ್ಯಾಮರಾ ತಂಪಿದೆ. ಶುಭಮಂಗಳ ಸಿನಿಮಾಗೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಿರ್ದೇಶಕ ಸಂತೋಷ್ ಸಂಕಲನದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ತಮ್ಮದೇ ಅವ್ಯಕ್ತ ಬ್ಯಾನರ್‌ನಡಿ ಸ್ನೇಹಿತರು ಹಾಗೂ ಕುಟುಂಬಸ್ಥರ ಜೊತೆಗೂಡಿ ಸಿನಿಮಾ ಕೂಡ ನಿರ್ಮಾಣ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News