FACT CHECK : ಸಚಿನ್ ಪುತ್ರಿ ಸಾರಾ ಜೊತೆ ಶುಭಮನ್ ಗಿಲ್ ಎಂಗೇಜ್ಮೆಂಟ್‌.!

Sara engagement with Shubman Gill : ಇತ್ತೀಚೆಗೆ ನಟಿ ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ಮಾಡಿದ ವಿಚಾರವಾಗಿ ಶುಭಮನ್ ಗಿಲ್ ಸುದ್ದಿಯಲ್ಲಿದ್ದರು. ಅವರು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಸ್ನೇಹ ಹೊಂದಿದ್ದರು ಎಂಬ ವದಂತಿಗಳು ಸಹ ಇವೆ. 

Written by - Chetana Devarmani | Last Updated : Jan 19, 2023, 08:45 AM IST
  • ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್
  • ಸಚಿನ್ ಪುತ್ರಿ ಸಾರಾ ಜೊತೆ ಶುಭಮನ್ ಗಿಲ್ ಎಂಗೇಜ್ಮೆಂಟ್‌.!
  • ಇಂತಹದ್ದೊಂದು ಟ್ವೀಟ್‌ ಎಲ್ಲೆಡೆ ವೈರಲ್‌ ಆಗುತ್ತಿರುವುದೇಕೆ?
FACT CHECK : ಸಚಿನ್ ಪುತ್ರಿ ಸಾರಾ ಜೊತೆ ಶುಭಮನ್ ಗಿಲ್ ಎಂಗೇಜ್ಮೆಂಟ್‌.!   title=

Sara Tendulkar engagement with Shubman Gill : ಇತ್ತೀಚೆಗೆ ನಟಿ ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ಮಾಡಿದ ವಿಚಾರವಾಗಿ ಶುಭಮನ್ ಗಿಲ್ ಸುದ್ದಿಯಲ್ಲಿದ್ದರು. ಅವರು ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ತೆಂಡೂಲ್ಕರ್ ಅವರೊಂದಿಗೆ ಸ್ನೇಹ ಹೊಂದಿದ್ದರು ಎಂಬ ವದಂತಿಗಳು ಸಹ ಇವೆ. ಇದೀಗ ಟ್ವೀಟ್‌ ಒಂದು ಸಾಕಷ್ಟು ವೈರಲ್ ಆಗಿದೆ. ವಾಸ್ತವವಾಗಿ,  ನಿನ್ನೆಯ ಪಂದ್ಯದಲ್ಲಿ ಶುಭಮನ್ ಗಿಲ್ ಡಬಲ್‌ ಸೆಂಚ್ಯುರಿ ಬಾರಿಸಿದರು, ಅಲ್ಲದೇ ಸಚಿನ್‌ ತೆಂಡೂಲ್ಕರ್‌ ದಾಖಲೆಯನ್ನು ಸಹ ಮುರಿದರು. ಈ ವೇಳೆ ಸ್ಟೇಡಿಯಂನಲ್ಲಿ ಅಭಿಮಾನಿಗಳು ಸಾರಾ ಸಾರಾ ಎಂದು ಜಪಿಸುತ್ತಿದ್ದರು. ದೊಡ್ಡದಾಗಿ ಕೂಗಿದರು, ಇದನ್ನು ಕೇಳಿದ ಗಿಲ್‌ ಜನರತ್ತ ಕೈ ಬೀಸಿದರು. 

ಇದನ್ನೂ ಓದಿ : No Ball : ಕ್ರಿಕೆಟ್‌ ವೃತ್ತಿಜೀವನದಲ್ಲಿ ಒಂದೇ ಒಂದು No Ball ಎಸೆಯದ 5 ಶ್ರೇಷ್ಠ ಬೌಲರ್‌ಗಳಿವರು.!

ಕೆಲವು ತಿಂಗಳ ಹಿಂದೆ, ಸಾರಾ ಅಲಿ ಖಾನ್ ಜೊತೆ ಡೇಟಿಂಗ್ ವಿಚಾರವಾಗಿ ಸುದ್ದಿಯಾಗಿದ್ದರು. ಇಬ್ಬರೂ ಎರಡು ಬಾರಿ ಭಾರತ ಮತ್ತು ವಿದೇಶಗಳಲ್ಲಿನ ರೆಸ್ಟೋರೆಂಟ್‌ಗಳಲ್ಲಿ ಡಿನ್ನರ್‌ ಪಾರ್ಟಿ ವೇಳೆ ಕಾಣಿಸಿಕೊಂಡಿದ್ದಾರೆ. ಇಂದು ಅವರು ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 208 ರನ್ ಬಾರಿಸಿದರು. 50 ಓವರ್‌ಗಳ ಕ್ರಿಕೆಟ್ ಪಂದ್ಯದಲ್ಲಿ ದ್ವಿಶತಕ ಗಳಿಸಿದ ಭಾರತದ ಅತ್ಯಂತ ಕಿರಿಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. 

 

 

ಈ ದಾಖಲೆಯ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಹಲವಾರು ಮೀಮ್‌ಗಳು ಹರಿದಾಡುತ್ತಿವೆ. ಆದರೆ ಈ ಒಂದು ಟ್ವೀಟ್ ಎಲ್ಲರ ಗಮನ ಸೆಳೆದಿದೆ. ಈ ಟ್ವೀಟ್‌ ನೋಡಿದ ಎಲ್ಲರೂ ಅರೆಕ್ಷಣ ಅಚ್ಚರಿಗೊಂಡಿದ್ದಾರೆ. ಟ್ವಿಟರ್‌ನಲ್ಲಿ ಶುಭಮನ್ ಗಿಲ್ ಜೊತೆ ತಮ್ಮ ಪುತ್ರಿಯ ನಿಶ್ಚಿತಾರ್ಥ ಮಾಡುವುದಾಗಿ ಸಚಿನ್‌ ತೆಂಡೂಲ್ಕರ್‌ ಹೇಳಿದ್ದಾರೆ ಎಂಬ ಟ್ವೀಟ್‌ ಎಲ್ಲೆಡೆ ವೈರಲ್‌ ಆಗುತ್ತಿದೆ. ಇದಕ್ಕೆ ಕೆಲವು ನೆಟಿಜನ್‌ಗಳು ತಮಾಷೆಯ ಪ್ರತಿಕ್ರಿಯೆಗಳನ್ನು ನೀಡಿದ್ದಾರೆ. ಈ ಟ್ವೀಟ್ ಈಗ ವೈರಲ್ ಆಗಿದ್ದು, ಕೆಲವು ಅಭಿಮಾನಿಗಳು ಸಂಪೂರ್ಣವಾಗಿ ಆಶ್ಚರ್ಯಗೊಂಡಿದ್ದಾರೆ. ಆದರೆ ಈ ಟ್ವೀಟ್‌ ಯಾವುದೇ ಅಧಿಕೃತ ಹೇಳಿಕೆಯಾಗಿಲ್ಲ. ಅಲ್ಲದೇ ಶುಭಮನ್‌ ಗಿಲ್‌ ಆಗಲಿ ಸಚಿನ್‌ ತೆಂಡೂಲ್ಕರ್‌ ಆಗಲಿ ಈ ಬಗ್ಗೆ ಯಾವುದೇ ಸ್ಪಷ್ಟನೆ ನೀಡಿಲ್ಲ. ಇದೊಂದು ವದಂತಿಯಾಗಿದೆ ಎಂದು ಹೇಳಲಾಗುತ್ತಿದೆ. 

ಇದನ್ನೂ ಓದಿ : Sonu Sood : ವ್ಯಕ್ತಿಗೆ ಸಿಪಿಆರ್ ಕೊಟ್ಟು ಜೀವ ಉಳಿಸಿದ ಸೋನು ಸೂದ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News