ಬೆಂಗಳೂರು: ಹೃದಯಾಘಾತದಿಂದ ಅಕಾಲಿಕ ಮರಣಕ್ಕೆ ತುತ್ತಾದ ಪವರ್ ಸ್ಟಾರ್ ಪುನೀತ್ ಅವರಿಗೆ ಭಾರತೀಯ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಮರಣೋತ್ತರವಾಗಿ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕೆಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಸಿದ್ಧರಾಮಯ್ಯ "ಯಾವ ಪ್ರಶಸ್ತಿ ಗೌರವಗಳಿಗಿಂತಲೂ ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ ಪ್ರೀತಿ-ಅಭಿಮಾನ ದೊಡ್ಡದು.ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ" ಎಂದು ಅವರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಪುನೀತ್ ರಾಜ್ ಕುಮಾರ್ ಜೊತೆಗಿನ ನೆನಪುಗಳನ್ನು ಸ್ಮರಿಸಿದ ಪ್ರಿಯಾಂಕ್ ಖರ್ಗೆ
ಯಾವ ಪ್ರಶಸ್ತಿ ಗೌರವಗಳಿಗಿಂತಲೂ
ಪುನೀತ್ ರಾಜಕುಮಾರ್ ಜನತೆಯಿಂದ ಗಳಿಸಿರುವ
ಪ್ರೀತಿ-ಅಭಿಮಾನ ದೊಡ್ಡದು.ಹೀಗಿದ್ದರೂ, ಪುನೀತ್ ಬದುಕಿದ್ದರೆ ತನ್ನ ನಟನೆ ಮತ್ತು ಸಾಮಾಜಿಕ ಕಾಳಜಿಯಿಂದಾಗಿ ಖಂಡಿತ ಪಡೆಯುತ್ತಿದ್ದ ಪದ್ಮಶ್ರೀ ಪ್ರಶಸ್ತಿಯನ್ನು
ಅವರಿಗೆ ಮರಣೋತ್ತರವಾಗಿ ನೀಡಬೇಕೆಂದು ಮನವಿ ಮಾಡುತ್ತೇನೆ.@PMOIndia pic.twitter.com/Zll2NtpRPs— Siddaramaiah (@siddaramaiah) November 1, 2021
ಭಾನುವಾರದಂದು ಪುನೀತ್ ರಾಜಕುಮಾರ್ ಅವರ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಕರುನಾಡಿನ ಪ್ರೀತಿಯ ‘ಅಪ್ಪು’ ಅಂತ್ಯಕ್ರಿಯೆ ನಡೆಯಿತು. ಮೂರು ಸುತ್ತು ಕುಶಾಲು ತೋಪು ಹಾರಿಸಿ ನಟನಿಗೆ ಗೌರವ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ನಿಂದಲೂ ಗೌರವ ವಂದನೆ ಸಲ್ಲಿಕೆಯಾಯಿತು. ಬಳಿಕ ಪುನೀತ್ ಅವರ ಪಾರ್ಥಿವ ಶರೀರಕ್ಕೆ ಈಡಿಗ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನೆರವೇರಿಸಲಾಯಿತು. ವಿನಯ್ ರಾಜ್ ಕುಮಾರ್ ಅವರು ವಿಧಿವಿಧಾನ ನೆರವೇರಿಸಿದರು.
ಇದನ್ನೂ ಓದಿ:Puneeth Rajkumar: ಕರುನಾಡಿನ ಪೀತಿಯ ‘ಅಪ್ಪು’ಗೆ ಭಾವಪೂರ್ಣ ವಿದಾಯ, ಅಂತಿಮ ಸಂಸ್ಕಾರದಲ್ಲಿ ಗಣ್ಯರ ಕಂಬನಿ
ಪುನೀತ್ ರಾಜಕುಮಾರ್ ಅವರ ನಿಧನಕ್ಕೆ ಪ್ರಧಾನಿ ಮೋದಿ ಸೇರಿದಂತೆ ದಕ್ಷಿಣ ಭಾರತದ ಖ್ಯಾತ್ಯ ನಟರು, ಹಾಗೂ ಬಾಲಿವುಡ್ ನಟ ಸಂತಾಪ ಸೂಚಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ