ಬೆಂಗಳೂರು: ಹಿಂದೂಸ್ತಾನ್ ಮುಕ್ತ ಮೀಡಿಯಾ ಎಂಟರ್ ಟೇನರ್ಸ್ ಲಾಂಛನದಲ್ಲಿ ಗಣೇಶ್ ಪ್ರಭು ನಿರ್ಮಿಸಿರುವ, ಕೆ.ಶಿವರುದ್ಯಯ್ಯ ನಿರ್ದೇಶಿಸಿರುವ, ಖ್ಯಾತ ನಟ ಪ್ರಕಾಶ್ ಬೆಳವಾಡಿ ವಿಭಿನ್ನಪಾತ್ರದಲ್ಲಿ ನಟಿಸಿರುವ "ಸಿಗ್ನಲ್‌ ಮ್ಯಾನ್" 1971" ಚಿತ್ರ ತೆರೆಗೆ ಬರಲು‌ ಸಿದ್ದವಾಗಿದೆ.


COMMERCIAL BREAK
SCROLL TO CONTINUE READING

ಅದಕ್ಕೂ ಮುನ್ನ ಈ ಬಾರಿಯ 14 ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಏಷ್ಯನ್ ಚಿತ್ರಗಳ ವಿಭಾಗಕ್ಕೆ ಈ ಚಿತ್ರ ಆಯ್ಕೆಯಾಗಿದೆ‌‌. ಮಾರ್ಚ್ 26 ಹಾಗೂ 29 ರಂದು ಪ್ರದರ್ಶನವಾಗಲಿದೆ.  ಈ ಚಿತ್ರದ ಕೆಲವು ವಿಷಯಗಳನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು.ಇಂಗ್ಲೀಷ್ ಲೇಖಕ ಚಾರ್ಲ್ಸ್ ಡಿಕನ್ಸ್ ಅವರ "ಸಿಗ್ನಲ್ ಮ್ಯಾನ್" ಕಥೆಯಿಂದ ಸ್ಪೂರ್ತಿ ಪಡೆದ ನಾನು ಈ ಚಿತ್ರ ಮಾಡಬೇಕೆಂದು ಕೊಂಡೆ. ಈ ವಿಷಯವನ್ನು ಪ್ರಕಾಶ್ ಬೆಳವಾಡಿ ಅವರ ಹತ್ತಿರ ಹೇಳಿದಾಗ,   ಈ ಕಥೆಯನ್ನು ಭಾರತ ದೇಶಕ್ಕೆ ತಕ್ಕ ಹಾಗೆ ಅವರು ಕಥೆ ಹೆಣೆದು ಕೊಟ್ಟರು.


ಇದನ್ನೂ ಓದಿ: The Elephant Whisperers:  ದಿ ಎಲಿಫೆಂಟ್ ವಿಸ್ಪರ್ಸ್' ಖ್ಯಾತಿ ಜೋಡಿ ಮಡಿಲಿಗೆ ಮತ್ತೊಂದು ಆನೆ ಮರಿ


1971 ರ ಕಾಲಘಟ್ಟದಲ್ಲಿ ನಡೆಯುವ ಕಥೆಯಿದು. ಆಗಷ್ಟೇ ಭಾರತ - ಪಾಕ್ ಯುದ್ದದ ಭೀತಿ ದೇಶದೆಲ್ಲೆಡೆ ಇರುತ್ತದೆ. ಅಂತಹ ಸಮಯದಲ್ಲಿ ನಡೆಯುವ ಕಥೆ "ಸಿಗ್ನಲ್ ಮ್ಯಾನ್ 1971". ಅದೊಂದು ಪಶ್ಚಿಮ ಘಟ್ಟದ ರೈಲ್ವೆ ನಿಲ್ದಾಣ. ಆದರೆ ಅಲ್ಲಿ ರೈಲು ನಿಲುವುದಿಲ್ಲ. ಆ ನಿಲ್ದಾಣದಲೊಬ್ಬ ಬಾಲು ಎಂಬ " ಸಿಗ್ನಲ್ ಮ್ಯಾನ್". ಅಲ್ಲಿಗೆ ಆತನೇ ಎಲ್ಲಾ. ಅಂತಹ ಸುಂದರ ಪರಿಸರದಲ್ಲಿರುವ ನಿಲ್ದಾಣಕ್ಕೆ ಅನಿರೀಕ್ಷಿತವಾಗಿ ಫೋಟೋಗ್ರಾಫರ್ ರಾಜಶೇಖರ್ ಆಗಮನವಾಗುತ್ತದೆ. ಬಾಲುವಿನ ಒಂಟಿತನ, ತಳಮಳ, ಹಿಂದಿನ ನೆನಪುಗಳು, ಯುದ್ದದ ಭೀತಿ. ಸೈನಿಕರನ್ನು ಹೊತ್ತೊಯುವ ರೈಲುಗಳು. ಇವೆಲ್ಲವೂ ಐದು ದಿನಗಳಲ್ಲಿ ತೆರೆದುಕೊಳ್ಳುತ್ತಾ ಹೋಗುತ್ತದೆ. ಈ ಬಾರಿಯ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲೂ ನಮ್ಮ ಚಿತ್ರ ಪ್ರದರ್ಶನವಾಗುತ್ತಿದೆ. ಸದ್ಯದಲ್ಲೇ ತೆರೆಗೆ ಬರಲಿದೆ.


ಉತ್ತಮ ತಂತ್ರಜ್ಞರ ಹಾಗೂ ಕಲಾವಿದರ ಸಹಕಾರದಿಂದ ನಮ್ಮ ಚಿತ್ರ ಅದ್ದೂರಿಯಾಗಿ ಬಂದಿದೆ. ಇದು ನನ್ನ ಹನ್ನೊಂದನೇ ನಿರ್ದೇಶನದ ಚಿತ್ರ ಎಂದರು ನಿರ್ದೇಶಕ ಕೆ.ಶಿವರುದ್ರಯ್ಯ.ನನಗೆ ಶಿವರುದ್ರಯ್ಯ ಅವರು ಈ ಕಾನ್ಸೆಪ್ಟ್ ಬಗ್ಗೆ ಹೇಳಿ, ನೀವು ಅಭಿನಯಿಸಬೇಕು ಎಂದರು. ಆನಂತರ ಕಥೆಯನ್ನು ನೀವೆ ಬರೆಯಿರಿ ಎಂದು ಹೇಳಿದರು. ನಾನು ಈ ಕಥೆಯನ್ನು ಭಾರತದ ಸೊಗಡಿಗೆ ತಕ್ಕ ಹಾಗೆ ಬರೆದಿದ್ದೇನೆ.


ಇದನ್ನೂ ಓದಿ: ʼಪ್ರಣಯಂʼ ಚಿತ್ರದ ಲಿರಿಕಲ್ ಸಾಂಗ್‌ ರಿಲೀಸ್‌ ಮಾಡಿದ ಅಶ್ವಿನಿ ಪುನೀತ್‌...!


ಊಟಿಯ ಬಳಿ ಹೆಚ್ಚು ಚಿತ್ರೀಕರಣ ನಡೆದಿದೆ. ಕೊಟ್ಟಿಗೆಹಾರ, ಚಿಕ್ಕಮಗಳೂರು, ಬೆಂಗಳೂರಿನಲ್ಲೂ ಚಿತ್ರೀಕರಣವಾಗಿದೆ. ಈ ಚಿತ್ರಕ್ಕಾಗಿ ಅದ್ದೂರಿ ಸೆಟ್ ನಿರ್ಮಿಸಲಾಗಿತ್ತು. ರೈಲು ಈ ಚಿತ್ರದ ಒಂದು ಭಾಗವಾಗಿತ್ತು. ಸಹ ಕಲಾವಿದರ ಅಭಿನಯ ಹಾಗೂ ತಂತ್ರಜ್ಞರ ಕಾರ್ಯವೈಖರಿ ಸೊಗಸಾಗಿತ್ತು ಎಂದು ನಟ ಹಾಗೂ ಕಥೆಗಾರ ಪ್ರಕಾಶ್ ಬೆಳವಾಡಿ ತಿಳಿಸಿದರು.


ನಾನು ಉದ್ಯಮಿ. ಈ ಚಿತ್ರದ ಕಥೆ ಇಷ್ಟವಾಯಿತು ನಿರ್ಮಾಣಕ್ಕೆ ಮುಂದಾದೆ‌. ಮುಂದೆ ಸದಭಿರುಚಿ ಚಿತ್ರಗಳನ್ನು ನಿರ್ಮಿಸುವ ಆಸೆ ಇದೆ ಎಂದರು ನಿರ್ಮಾಪಕ ಗಣೇಶ್ ಪ್ರಭು. ಛಾಯಾಗ್ರಹಣದ ಬಗ್ಗೆ ಶೇಖರ್ ಚಂದ್ರು ಮಾಹಿತಿ ನೀಡಿದರು. ಕಾರ್ಯಕಾರಿ ನಿರ್ಮಾಪಕ - ನಟ ವೆಂಕಟೇಶ್ ಪ್ರಸಾದ್ ಹಾಗೂ ಚಿತ್ರದಲ್ಲಿ ಅಭಿನಯಿಸಿರುವ ರಾಜೇಶ್ ನಟರಂಗ ಈ ಚಿತ್ರದ ಕುರಿತು ಮಾತನಾಡಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.