ಈ ಹಿಂದೆ ಒನ್ ಲವ್ ಟೂ ಸ್ಟೋರಿ ಸಿನಿಮಾ ಮೂಲಕ ಕನ್ನಡ ಚಿತ್ರ ಲೋಕಕ್ಕೆ ಪರಿಚಿತರಾದ ನಿರ್ದೇಶಕ ವಸಿಷ್ಠ ಬಂಟನೂರು ನಿರ್ದೇಶನದಲ್ಲಿ ಮತ್ತೊಂದು ಸಿನಿಮಾ ತಯಾರಾಗಿದೆ. ಅದೇ 1975. ಕ್ರೈಮ್ ಥ್ರಿಲ್ಲರ್ ಕಥಾಹೂರಣ ಈ ಸಿನಿಮಾದಲ್ಲಿ ಚಕ್ರವರ್ತಿ ಚಂದ್ರಚೂಡ್, ಜಯ್ ಶೆಟ್ಟಿ, ಮಾನಸ, ವೆಂಕಟೇಶ್ ಪ್ರಸಾದ್ ಸೇರಿದಂತೆ ಹಲವು ಪ್ರತಿಭಾನ್ವಿತ ತಾರಾಬಳಗವಿದೆ.


COMMERCIAL BREAK
SCROLL TO CONTINUE READING

ಸ್ಪೆಷಲ್ ಹಾಡಿನಲ್ಲಿ ಸಿಂಧೂ


1975 ಸಿನಿಮಾದ ಮೆಲೋಡಿ ಪಬ್ ಸಾಂಗ್ ವೊಂದರಲ್ಲಿ ಸಿಂಧೂ ಲೋಕನಾಥ್ ಭರ್ಜರಿಯಾಗಿ ಸ್ಟೆಪ್ಸ್ ಹಾಕಿದ್ದಾರೆ. ಇತ್ತೀಚೆಗಷ್ಟೇ ಬೆಂಗಳೂರಿನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದ್ದು, ಚಿತ್ರತಂಡ ಈ ಬಗ್ಗೆ ಮಾಧ್ಯಮದವರ ಮುಂದೆ ಹಾಜರಾಗಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. 


ಇದನ್ನೂ ಓದಿ: ಲವ್ ಮಾಡಲ್ಲ ಎಂದ ಯುವತಿ ಮೇಲೆ ಆಸಿಡ್ ಎರಚಿದ ಪಾಗಲ್ ಪ್ರೇಮಿ


ನನ್ನ ಸಿನಿಮಾ ಜರ್ನಿಯಲ್ಲಿ ಈ ರೀತಿ ಸ್ಪೆಷಲ್ ಸಾಂಗ್ ಗೆ ಹೆಜ್ಜೆ ಹಾಕಿರುವುದು. ಸಾಂಗ್ ತುಂಬಾ ಚೆನ್ನಾಗಿದೆ. ಈ ಸಾಂಗ್ ಪ್ರತಿಯೊಬ್ಬರಿಗೂ ಇಷ್ಟವಾಗುತ್ತದೆ. ಹೊಸಬರ ತಂಡ ಇಡೀ ಟೀಂಗೆ ಒಳ್ಳೆದಾಗಲಿ ಎಂದು ಸಿಂಧು ಲೋಕನಾಥ್ ತಮ್ಮ ಅನುಭವ ಹಂಚಿಕೊಂಡಿದ್ದಾರೆ.


ಸಿಸಿಬಿ ಸಹಾಯವಾಗುವ, ಕಳೆದ ಮೂರು ವರ್ಷಗಳಿಂದ ನಡೆಯುತ್ತಿರುವ ವಿಷ್ಯವಿದು. ನಿರ್ಮಾಪರು ಕೇಳಿದೆಲ್ಲವನ್ನೂ ಕೊಟ್ಟಿದ್ದಾರೆ. ಸ್ಕ್ರೀಪ್ಟ್ ತುಂಬಾ ಚೆನ್ನಾಗಿದೆ ಎಂದು ಚಕ್ರವರ್ತಿ ಚಂದ್ರಚೂಡ್ ಹೇಳಿದರು.


ಇದನ್ನೂ ಓದಿ: ರಾಜ್ಯದಲ್ಲಿ ಕೋವಿಡ್ ನಾಲ್ಕನೇ ಅಲೆ ಬಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ


ಪ್ರೊಡಕ್ಷನ್ ಸಿಲ್ವರ್ ಸ್ಕ್ರೀನ್ ಫಿಲ್ಮಂ ಫ್ಯಾಕ್ಟರಿ ಬ್ಯಾನರ್ ನಡಿ ದಿನೇಶ್ ರಾಜನ್ ಸಿನಿಮಾಗೆ ಬಂಡವಾಳ ಹೂಡಿದ್ದು, ಬೆಂಗಳೂರು, ಉಡುಪಿ ಸೇರಿದಂತೆ ಚಿತ್ರೀಕರಣ ನಡೆದಿದೆ. ಈಗಾಗ್ಲೇ ಶೂಟಿಂಗ್ ಮುಗಿಸಿ ಕುಂಬಳಕಾಯಿ ಒಡೆದಿರುವ ಚಿತ್ರತಂಡ ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸಲ್ಲಿ ಬ್ಯುಸಿಯಾಗಿದೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.