ಗಾನ ಕೋಗಿಲೆ ಎಸ್.ಜಾನಕಿ ಆಸ್ಪತ್ರೆಗೆ ದಾಖಲು
ಮೈಸೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಸೊಂಟದಲ್ಲಿ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರು: ಗಾನಕೋಗಿಲೆ ಎಸ್ ಜಾನಕಿ ಅವರು ಕಾಲು ಜಾರಿ ಬಿದ್ದ ಪರಿಣಾಮ ಅವರ ಸೊಂಟಕ್ಕೆ ಏಟಾದ್ದರಿಂದ ಕೂಡಲೇ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೈಸೂರಿನಲ್ಲಿ ಸಂಬಂಧಿಕರ ಮನೆಗೆ ಬಂದಿದ್ದ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಸೊಂಟದಲ್ಲಿ ತೀವ್ರ ನೋವು ಕಾಣಿಸಿಕೊಂಡ ಪರಿಣಾಮ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸೊಂಟ ಫ್ರ್ಯಾಕ್ಚರ್ ಆಗಿದೆ ಎನ್ನಲಾಗಿದೆ. ಹೀಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಎಸ್ ಜಾನಕಿ ಅವರಿಗೆ ಈಗ ಸುಮಾರು 80 ವರ್ಷ ವಯಸ್ಸಾಗಿದ್ದು, ಸುಮಾರು 17 ಭಾಷೆಗಳಲ್ಲಿ 48 ಸಾವಿರಕ್ಕೂ ಹೆಚ್ಚು ಹಾಡುಗಳನ್ನು ಹಾಡಿದ್ದಾರೆ. ಜೊತೆಗೆ ನಾಲ್ಕು ಬಾರಿ ತಮ್ಮ ಹಾಡಿಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.