Acress Sneha Divorce : ಬಹುಭಾಷಾ ನಟಿ ಸ್ನೇಹಾ ಪ್ರಸನ್ನ ವಿಚ್ಛೇದನದ ವದಂತಿಗಳು ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್ ಆಗುತ್ತಿವೆ. ಸದ್ಯ ಸ್ನೇಹಾ ಕಿರುತೆರೆಯಲ್ಲಿ ಸಕ್ರಿಯವಾಗಿದ್ದು, ತೆಲುಗು ಪ್ರೇಕ್ಷಕರಿಗೆ ಶೋ ಮೂಲಕ ಮನರಂಜನೆ ನೀಡುತ್ತಿದ್ದಾರೆ. ಅಲ್ಲದೆ, ಕೆಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ನಡುವೆ ಸ್ನೇಹಾಗೆ ಸಂಬಂಧಿಸಿದ ವದಂತಿಯೊಂದು ಇಂಟರ್‌ನೆಟ್‌ನಲ್ಲಿ ವೈರಲ್ ಆಗುತ್ತಿದೆ. 


COMMERCIAL BREAK
SCROLL TO CONTINUE READING

ಸ್ನೇಹಾ ಅವರು ತಮ್ಮ ಪತಿ ಪ್ರಸನ್ನ ಅವರಿಂದ ದೂರ ಉಳಿದು ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಅಲ್ಲದೆ, ವಿಚ್ಛೇದನ ಪಡೆಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಆದರೆ ಈ ಕುರಿತು ಸ್ನೇಹಾ ಅಧಿಕೃತವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದೀಗ ಪತಿ ಜೊತೆಗಿನ ಫೋಟೋಗಳನ್ನು ಹಂಚಿಕೊಂಡು ವದಂತಿಗಳಿಗೆ ಕಡಿವಾಣ ಹಾಕಿದ್ದಾರೆ. ಪತಿ ಬಗ್ಗೆ ಸ್ನೇಹಾ ಹಾಕಿರುವ ಪೋಸ್ಟ್ ವೈರಲ್ ಆಗುತ್ತಿದೆ. 


ಇದನ್ನೂ ಓದಿ:  Video : ಜೈಲಿನಲ್ಲಿ ಹಾಟ್‌ ಬ್ಯೂಟಿ ಉರ್ಫಿ ಜಾವೇದ್‌ ಹೇಗಿದ್ದಾರೆ ನೋಡಿ..


ಸ್ನೇಹಾ ಹಾಗೂ ಪ್ರಸನ್ನ ಲವ್‌ ಮಾಡಿ ಅದ್ದೂರಿಯಾಗಿ ಮದುವೆಯಾಗಿದ್ದರು. ಸ್ನೇಹಾ ಮತ್ತು ಪ್ರಸನ್ನ ಮೊದಲ ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡುವಾಗ ಪರಿಚಯವಾಗಿ ನಂತರ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು ಎಂದು ಅನೇಕ ಬಾರಿ ತಮ್ಮ ಪ್ರೇಮಕಥೆಯನ್ನು ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಾರೆ. ಇದೀಗ ಡೈವೋರ್ಸ್‌ ವದಂತಿಗಳಿಗೆ ತಮ್ಮ ಸ್ಟೈಲ್‌ನಲ್ಲಿ ಉತ್ತರ ನೀಡಿರುವ ಸ್ನೇಹಾ ಪತಿ ಜೊತೆ ಸಖತ್ತಾಗಿ ಫೋಟೋ ಶೂಟ್‌ ಮಾಡಿಸಿ ಪೋಸ್ಟ್‌ ಮಾಡಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.