ವರ್ತೂರು ಮಂಜು (Varturu Manju) ನಿರ್ಮಾಣದ, ಶಂಕರ್ ಕೋನಮಾನಹಳ್ಳಿ ನಿರ್ದೇಶನದಲ್ಲಿ ಮೂಡಿಬಂದಿರುವ "ಶಂಭೋ ಶಿವ ಶಂಕರ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು.


COMMERCIAL BREAK
SCROLL TO CONTINUE READING

ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹಾಗೂ ನಾಯಕ ವಸಿಷ್ಠ ಸಿಂಹ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿ ಹಾಡುಗಳನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನವೀನ್ ಸಜ್ಜು ಹಾಡಿರುವ "ನಾಟಿಕೋಳಿ" (Natikoli Song) ಹಾಡು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸದ್ದು ಮಾಡತ್ತಿದೆ. 


ಇದನ್ನೂ ಓದಿ: Upendra: ಏಪ್ರಿಲ್ 1ಕ್ಕೆ ‘ಹೋಮ್ ಮಿನಿಸ್ಟರ್’ ಆಗಲಿದ್ದಾರೆ ರಿಯಲ್ ಸ್ಟಾರ್ ಉಪೇಂದ್ರ!


ನಾನು ಕಿರುತೆರೆಯಲ್ಲಿ ಧಾರಾವಾಹಿಗಳನ್ನು ನಿರ್ದೇಶಿಸಿ ಅನುಭವವಿದ್ದವನು. ಹಿರಿತೆರೆಯಲ್ಲಿ ಇದು ಚೊಚ್ಚಲ ಚಿತ್ರ. ನನ್ನ ಕನಸಿಗೆ ಜೀವ ತುಂಬಿದ ನಿರ್ಮಾಪಕ‌, ತಂತ್ರಜ್ಞರಿಗೆ ಹಾಗೂ‌ ಕಲಾವಿದರಿಗೆ  ಧನ್ಯವಾದ. ಹಾಡುಗಳನ್ನು ಬಿಡುಗಡೆ ಮಾಡಿಕೊಟ್ಟ ಬಹುದಿನಗಳ ಗೆಳೆಯ ವಸಿಷ್ಠ ಸಿಂಹ (Vasistha Simha) ಹಾಗೂ‌ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ವಿಶೇಷ ಧನ್ಯವಾದ ಎಂದು ನಿರ್ದೇಶಕ ಶಂಕರ್ ಕೋನಮಾನಹಳ್ಳಿ ಹೇಳಿದರು.


ಸಿನಿಮಾ ನಿರ್ಮಾಣದ ಬಗ್ಗೆ ವರ್ತೂರು ಮಂಜು, ಗೀತರಚನೆ ಕುರಿತು ಗೌಸ್ ಫಿರ್ ಹಾಗೂ ಸಂಗೀತದ ಬಗ್ಗೆ ಹಿತನ್ ಹಾಸನ್ ಮಾಹಿತಿ ನೀಡಿದರು. ಛಾಯಾಗ್ರಾಹಕ ನಟರಾಜು ಮದ್ದಾಲ, ನೃತ್ಯ ನಿರ್ದೇಶಕ ಕಲೈ ತಮ್ಮ ಕಾರ್ಯಗಳ ಬಗ್ಗೆ ಮಾತನಾಡಿದರು. ನನಗೆ ಅಭಿನಯ ಅಂದರೆ ಏನೆಂದು ಗೊತ್ತಿರಲಿಲ್ಲ. ನನಗೆ ಅಭಿನಯ ಕಲಿಸಿದ ನಿರ್ದೇಶಕರಿಗೆ ನಾನು ಆಭಾರಿ ಎಂದು ನಾಯಕ ಅಭಯ್ ಪುನೀತ್ ಹೇಳಿದರು.  


ಇದನ್ನೂ ಓದಿ: The Kashmir Files:ದಿ ಕಾಶ್ಮೀರ ಫೈಲ್ಸ್ ಚಿತ್ರವನ್ನು ಒಬ್ಬನೇ ವೀಕ್ಷಿಸಿದ ಅಭಿಮಾನಿ.!


ನಾಯಕಿ ಸೋನಾಲ್ ಮಾಂಟೆರೊ, ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿರುವ ರೋಹಿತ್ ಹಾಗೂ ರಕ್ಷಕ್ ತಮ್ಮ ಪಾತ್ರ ಪರಿಚಯ ಮಾಡಿಕೊಂಡರು. ಆನಂದ್ ಆಡಿಯೋ ಮೂಲಕ ಈ ಚಿತ್ರದ ಹಾಡುಗಳು ಬಿಡುಗಡೆಯಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ. 


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.