NEET-JEE ಪರೀಕ್ಷೆಗಳ ಮುಂದೂಡುವಿಕೆಯ ಕುರಿತು ಟ್ವೀಟ್ ಮಾಡಿದ Sonu Sood ಮಾಡಿದ ಮನವಿ ಏನು?
ಕರೋನಾದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಸೋನು ಸೂದ್ ಸರ್ಕಾರವನ್ನು ಕೋರಿದ್ದಾರೆ.
ನವದೆಹಲಿ: ಕರೋನಾ ವೈರಸ್‌ನಿಂದಾಗಿ, ದೇಶಾದ್ಯಂತ ವಿದ್ಯಾರ್ಥಿಗಳು ನೀಟ್-ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಏತನ್ಮಧ್ಯೆ, ಈ ವಿಷಯಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಸೋನು ಸೂದ್ ಟ್ವೀಟ್ ವೊಂದನ್ನು ಮಾಡಿದ್ದು, ಅವರ ಟ್ವೀಟ್ ಇದೀಗ ಭಾರಿ ವೈರಲ್ ಆಗುತ್ತಿದೆ. ಕರೋನಾದ ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನೀಟ್ ಮತ್ತು ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ಸೋನು ಸೂದ್ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಈ ಕುರಿತು ತಮ್ಮ ಟ್ವೀಟ್ ನಲ್ಲಿ ಬರೆದುಕೊಂಡಿರುವ ಸೋನು ಸೂದ್, " ಪ್ರಸ್ತುತ ದೇಶದಲ್ಲಿನ ಕರೋನಾ ಪ್ರಕೋಪವನ್ನು ಗಮನದಲ್ಲಿಟ್ಟುಕೊಂಡು, ನೀಟ್-ಜೆಇಇ ಪರೀಕ್ಷೆಗಳನ್ನು ಮುಂದೂಡಬೇಕೆಂದು ನಾನು ಸರ್ಕಾರಕ್ಕೆ ಮನವಿ ಮಾಡುತ್ತೇನೆ! ಕರೋನಾದ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಹೆಚ್ಚು ಗಮನ ವಹಿಸುವ ಅಗತ್ಯವಿದ್ದು, ವಿದ್ಯಾರ್ಥಿಗಳ ಪ್ರಾಣವನ್ನು ಅಪಾಯಕ್ಕೆ ತಳ್ಳುವುದು ಉಚಿತವಲ್ಲ" ಎಂದಿದ್ದಾರೆ.
ಜೆಇಇ ಮುಖ್ಯ ಮತ್ತು ನೀಟ್ ಪರೀಕ್ಷೆಗಳ ಆಯೋಜನೆಗೆ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಲೇ ಇದೆ. ಸದ್ಯ ಪರೀಕ್ಷೆಗೆ ಒಂದು ತಿಂಗಳಿಗಿಂತಲೂ ಕಡಿಮೆ ಸಮಯಾವಕಾಶ ಉಳಿದಿದೆ. ಇಂತಹ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ಕೂಡ ಜೆಇಇ ಮುಖ್ಯ ಮತ್ತು ನೀಟ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿದೆ.