ಪ್ರವಾಸಿ ಕಾರ್ಮಿಕರಿಗಾಗಿ ನೌಕರಿಯ ಸಿದ್ಧತೆ ನಡೆಸಲು ಮುಂದಾದ Sonu Sood
ಕೊರೊನಾ ಪ್ರಕೋಪದ ಹಿನ್ನೆಲೆ ಘೋಷಿಸಲಾಗಿರುವ ಲಾಕ್ ಡೌನ್ ಹಿನ್ನೆಲೆ ಮುಂಬೈನಲ್ಲಿ ಸಿಲುಕಿಕೊಂಡ ವಲಸೆ ಕಾರ್ಮಿಕರನ್ನು ಅವರವರ ಮನೆಗೆ ಕಳುಹಿಸಲು ವ್ಯವಸ್ಥೆ ಮಾಡಿದ್ದ ಖ್ಯಾತ ಬಾಲಿವುಡ್ ನಟ ಸೋನು ಸೂದ್ ಭಾರಿ ಅಭಿಯಾನವನ್ನೇ ನಡೆಸಿದ್ದರು.
ನವದೆಹಲಿ: ಲಾಕ್ ಡೌನ್ ಕಾಲಾವಧಿಯಲ್ಲಿ ಮುಂಬೈನಲ್ಲಿ ಸಿಲುಕಿಕೊಂಡಿದ್ದ ವಲಸೆ ಕಾರ್ಮಿಕಾರನ್ನು ಅವರ ಮನೆಗೆ ತಲುಪಿಸುವ ಜವಾಬ್ದಾರಿ ಹೊತ್ತಿದ್ದ ಖ್ಯಾತ ಬಾಲಿವುಡ್ ನಟ ಸೋನು ಸೂದ್ ಇದೀಗ ದೇಶಾದ್ಯಂತ ಇರುವ ವಲಸೆ ಕಾರ್ಮಿಕರಿಗೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಹುಡುಕಲು ಸಹಾಯ ಮಾಡುವ ಉದ್ದೇಶದಿಂದ 'ಪ್ರವಾಸಿ ರೋಜಗಾರ್ ಆಪ್' ಅನ್ನು ಪ್ರಾರಂಭಿಸಿದ್ದಾರೆ. ಈ ಮೊಬೈಲ್ ಅಪ್ಲಿಕೇಶನ್‌ನ ಸಹಾಯದಿಂದ, ಉದ್ಯೋಗವನ್ನು ಹುಡುಕಾಟಕ್ಕೆ ಬೇಕಾಗುವ ಮಾಹಿತಿಯು ಸುಲಭವಾಗಿ ಲಭಿಸಲಿದೆ.
ಉತ್ತರ ಪ್ರದೇಶ, ಬಿಹಾರ ಮತ್ತು ಇತರ ರಾಜ್ಯಗಳಿಂದ ಮಹಾರಾಷ್ಟ್ರದ ವಿವಿಧ ನಗರಗಳಿಗೆ ಉದ್ಯೋಗ ಆರಿಸಿ ಬಂದ ವಲಸೆ ಕಾರ್ಮಿಕರನ್ನು ಅವರ ಸ್ವಂತ ಊರುಗಳಿಗೆ ತಲುಪಿಸಲು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಿ ಅವರಿಗೆ ಆಹಾರದ ವ್ಯವಸ್ಥೆಯನ್ನು ಕೂಡ ಮಾಡಿದ್ದರು. ಸೋನು ನಡೆಸಿದ್ದ ಈ ಅಭಿಯಾನಕ್ಕೆ ದೇಶಾದ್ಯಂತ ಅಪಾರ ಸಂಖ್ಯೆಯಲ್ಲಿ ಜನರಿಂದ ಪ್ರಶಂಸೆ ವ್ಯಕ್ತವಾಗಿತ್ತು. ಇದೀಗ ಸೋನು ಸೂದ್ ವಲಸೆ ಕಾರ್ಮಿಕರಿಗೆ ಉದ್ಯೋಗ ಒದಗಿಸಲು ಸಹಾಯ ಮಾಡಲು ಸಿದ್ಧವಾಗಿದೆ.
ಈ ಕುರಿತು ಖುದ್ದು ಸೋನು ಸೂದ್ ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಟ್ವೀಟ್ ಮಾಡುವ ಮೂಲಕ ಉದ್ಯೋಗಾವಕಾಶ ಕಲ್ಪಿಸುವುದಾಗಿ ಭರವಸೆ ವಲಸೆ ಕಾರ್ಮಿಕರಿಗೆ ಭರವಸೆ ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿರುವ ಸೋನು, " ಇದೀಗ ರೋಜಗಾರ್ ಸರದಿ' ಎಂದಿದ್ದಾರೆ. ಸೋನು ಸಾಮಾಜಿಕ ಮಾಧ್ಯಮಗಳಲ್ಲಿ ಅದರಲ್ಲೂ ವಿಶೇಷವಾಗಿ ಟ್ವಿಟ್ಟರ್ ನಲ್ಲಿ ಪ್ರವಾಸಿ ಕಾರ್ಮಿಕರಿಗೆ ತಮಾಷೆಯ ಶೈಲಿಯಲ್ಲಿ ಅವರನ್ನು ಸಂಪರ್ಕಿಸಿ ಅವರಿಗೆ ಸಹಾಯ ಮಾಡುವಲ್ಲಿ ಜನಪ್ರಿಯತೆಯನ್ನು ಸಂಪಾದಿಸಿದ್ದಾರೆ ಎಂಬುದು ಇಲ್ಲಿ ಗಮನಾರ್ಹ.