ಮೆಟ್ಟಿಲುಗಳ ಮೇಲಿಂದ ಬಿದ್ದು ಖ್ಯಾತ ನಟಿ ನಿಧನ..! ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ

actress Park Soo Ryun : ಕಳೆದ 2 ದಿನಗಳ ಹಿಂದಷ್ಟೇ  ಜೇಜು ದ್ವೀಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾರ್ಕ್‌ ಪ್ರದರ್ಶನ ನೀಡಲು ಮೆಟ್ಟಿಲು ಹತ್ತುವಾಗ ಜಾರಿದ್ದರು. ಕೆಳಕ್ಕೆ ಬಿದ್ದು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. 

Written by - Krishna N K | Last Updated : Jun 14, 2023, 11:12 AM IST
  • ದಕ್ಷಿಣ ಕೊರಿಯಾದ ಸ್ಟಾರ್‌ ನಟಿ ʼಪಾರ್ಕ್ ಸೂ ರ್ಯುನ್ʼ ನಿಧನ.
  • ಪ್ರದರ್ಶನ ನೀಡುತ್ತಿದ್ದ ವೇದಿಕೆಯ ಮೆಟ್ಟಲುಗಳ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ.
  • ನಟಿ ಪಾರ್ಕ್ ಸೂ ರ್ಯುನ್ ಕೇವಲ 29 ವರ್ಷ ವಯಸ್ಸಾಗಿತ್ತು.
ಮೆಟ್ಟಿಲುಗಳ ಮೇಲಿಂದ ಬಿದ್ದು ಖ್ಯಾತ ನಟಿ ನಿಧನ..! ಅಂಗಾಂಗ ದಾನಕ್ಕೆ ಮುಂದಾದ ಕುಟುಂಬ title=

Park Soo Ryun Dies : ಜನಪ್ರಿಯ ಕೆ-ಡ್ರಾಮಾ ಸರಣಿ 'ಸ್ನೋಡ್ರಾಪ್' ಖ್ಯಾತಿಯ ದಕ್ಷಿಣ ಕೊರಿಯಾದ ಸ್ಟಾರ್‌ ನಟಿ ʼಪಾರ್ಕ್ ಸೂ ರ್ಯುನ್ʼ ಪ್ರದರ್ಶನ ನೀಡುತ್ತಿದ್ದ ವೇದಿಕೆಯ ಮೆಟ್ಟಲುಗಳ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಆಕೆಗೆ ಕೇವಲ 29 ವರ್ಷ ವಯಸ್ಸಾಗಿತ್ತು. 

ಹೌದು.. ಪಾರ್ಕ್ ಸೂ ರ್ಯುನ್ ಪ್ರದರ್ಶನಕ್ಕಾಗಿ ಜೆಜು ದ್ವೀಪಕ್ಕೆ ಭೇಟಿ ನೀಡಿದ್ದರು. ಈ ವೇಳೆ ಅವರು ವೇದಿಕೆಯ ಮೆಟ್ಟಿಲುಗಳ ಮೇಲಿಂದ ಕೆಳಗೆ ಬಿದ್ದಿದ್ದರು. ತಕ್ಷಣ ಆಕೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ, ವೈದ್ಯರು ಬ್ರೈನ್‌ ಡೆತ್‌ ಆಗಿರುವುದಾಗಿ ತಿಳಿಸಿದ್ದರು ಎಂದು 'ಓಸೆನ್' ವರದಿ ಮಾಡಿದೆ.

ಇದನ್ನೂ ಓದಿ: ಸಿಎಂ ಭೇಟಿಯಾದ ಗೀತಾ -ಶಿವಣ್ಣ : ಇದರ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ..!?

ತಮ್ಮ ಅದ್ಭುತ ನಟನೆ ಮತ್ತು ಸೌಂದರ್ಯದಿಂದ ಭಾರತ ಸೇರಿದಂತೆ ವಿಶ್ವದಾದ್ಯಂತ ಕೋಟ್ಯಾಂತರ ಅಭಿಮಾನಿಗಳನ್ನು ಪಾರ್ಕ್ ಸೂ ರ್ಯುನ್ ಗಳಿಸಿದ್ದರು. ಕೇವಲ 29 ವಯಸ್ಸಾಗಿದ್ದ ನಟಿ ಜೀವನ ಪಯಣ ಮುಗಿಸಿದ್ದು, ಅವರ ಅಭಿಮಾನಿಗಳಿಗೆ ನುಂಗಲಾರದ ತುತ್ತಾಗಿದೆ.

ಕಳೆದ 2 ದಿನಗಳ ಹಿಂದಷ್ಟೇ  ಜೇಜು ದ್ವೀಪದಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಪಾರ್ಕ್‌ ಪ್ರದರ್ಶನ ನೀಡಲು ಮೆಟ್ಟಿಲು ಹತ್ತುವಾಗ ಜಾರಿದ್ದರು. ಕೆಳಕ್ಕೆ ಬಿದ್ದು ಪ್ರಜ್ಞೆ ತಪ್ಪಿದ್ದರು. ಕೂಡಲೇ ಅವರನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸದ್ಯ ನಟಿಯ ಕುಟುಂಬಸ್ಥರು ಆಕೆಯ ಅಂಗಾಂಗ ದಾನಕ್ಕೆ ನಿರ್ಧರಿಸಿದ್ದಾರೆ. ಈ ಮೂಲಕ ಸಾವಿನಲ್ಲೂ ಮಾನವೀತಯೆ ಮೆರೆದಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News