ಸ್ಪಂದನಾ ತಾಯಿಯೊಂದಿಗಿನ ಫೋಟೋಗಳು ವೈರಲ್
Spandana Vijay Raghavendra photos : ಅಭಿಮಾನಿಗಳು ಸ್ಪಂದನಾ ಅವರ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುವ ಮೂಲಕ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಅಂತಹ ಒಂದು ಪ್ರಯತ್ನದಲ್ಲಿ, ಅವರ ತಾಯಿಯೊಂದಿಗಿನ ಚಿತ್ರಗಳು ಈಗ ವೈರಲ್ ಆಗಿವೆ.
Spandana Vijay Raghavendra : ನಟ ವಿಜಯ್ ರಾಘವೇಂದ್ರ ಅವರ ಪತ್ನಿ ಸ್ಪಂದನಾ ಅವರು ಆಗಸ್ಟ್ 6 ರಂದು ಭಾನುವಾರ ರಾತ್ರಿ ಬ್ಯಾಂಕಾಕ್‌ನಲ್ಲಿ ಕಡಿಮೆ ರಕ್ತದೊತ್ತಡ ಮತ್ತು ಹೃದಯ ಸ್ತಂಭನದಿಂದ ನಿಧನರಾದರು. ಅಭಿಮಾನಿಗಳು ಸ್ಪಂದನಾ ಅವರ ಚಿತ್ರಗಳನ್ನು ಆನ್‌ಲೈನ್‌ನಲ್ಲಿ ಹಂಚಿಕೊಳ್ಳುವ ಮೂಲಕ ನೆನಪುಗಳನ್ನು ಮೆಲುಕು ಹಾಕುತ್ತಿದ್ದಾರೆ. ಅಂತಹ ಒಂದು ಪ್ರಯತ್ನದಲ್ಲಿ, ಅವರ ತಾಯಿಯೊಂದಿಗಿನ ಚಿತ್ರಗಳು ಈಗ ವೈರಲ್ ಆಗಿವೆ. ದಿವಂಗತ ಸ್ಪಂದನಾ ವಿಜಯ್ ಅವರ ಅಭಿಮಾನಿಗಳ ಪುಟದಿಂದ ಹಂಚಿಕೊಂಡ ಪೋಸ್ಟ್‌ಗಳನ್ನು ಹಲವಾರು ಬಳಕೆದಾರರು ಇಷ್ಟಪಟ್ಟಿದ್ದಾರೆ.
ಇದನ್ನೂ ಓದಿ: BBK 10 : ಬಿಗ್ ಬಾಸ್ ಕನ್ನಡ ಸೀಸನ್ 10 ರ ಸ್ಪರ್ಧಿಗಳ ಲಿಸ್ಟ್ ವೈರಲ್!
ಸ್ಪಂದನಾ ನೋಡಲು ಥೇಟ್ ಅವರ ತಾಯಿಯಂತೆಯೇ ಇದ್ದಾರೆ. ಅಮ್ಮನ ಪಡಿಯಚ್ಚು ಸ್ಪಂದನಾ ಎಂದು ಅನೇಕರು ಕಾಮೆಂಟ್ ಮಾಡಿದ್ದಾರೆ. ಇದಲ್ಲದೆ, ವಿಜಯ್ ಅವರು ತಮ್ಮ ಅಧಿಕೃತ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಹೆಂಡತಿಯನ್ನು ಉದ್ದೇಶಿಸಿ ಹೃದಯವಿದ್ರಾವಕ ಪೋಸ್ಟ್ ಅನ್ನು ಹಂಚಿಕೊಂಡಿದ್ದಾರೆ. “ನಿನ್ನನ್ನು ಉಸಿರಾಡುತ್ತಿದ್ದೇನೆ…ಚಿನ್ನಾ” ಎಂದು ಬರೆದಿದ್ದಾರೆ.
ಗಲ್ಲಾಪೆಟ್ಟಿಗೆಯಲ್ಲಿ ಜೈಲರ್ ಹೊಸ ದಾಖಲೆ!! ಒಟ್ಟು ಕಲೆಕ್ಷನ್ ಎಷ್ಟು ಕೋಟಿ ಗೊತ್ತಾ?
ಸ್ಪಂದನಾ ಅವರ ಅಂತ್ಯಕ್ರಿಯೆಯಲ್ಲಿ ಹಲವು ಗಣ್ಯರು ಪಾಲ್ಗೊಂಡಿದ್ದರು. ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಯಶ್ ಅವರು ವಿಜಯ್ ಅವರನ್ನು ಬಿಗಿಯಾಗಿ ಅಪ್ಪಿಕೊಂಡ ಘಟನೆ ಗಮನ ಸೆಳೆದಿದೆ. ಈ ವಿಡಿಯೋವನ್ನು ಅಭಿಮಾನಿಯೊಬ್ಬರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.