ಬೆಂಗಳೂರು : ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ 


COMMERCIAL BREAK
SCROLL TO CONTINUE READING

ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ "GST" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣದೊಂದಿಗೆ "ಜಿ ಎಸ್ ಟಿ" ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸೃಜನ್ ಲೋಕೇಶ್ ಹಾಗೂ ಚಂದನ್ ಶೆಟ್ಟಿ ಹಾಡುಗಳನ್ನು ಬರೆದಿದ್ದಾರೆ.ಮುರುಗಾನಂದ ನೃತ್ಯ ನಿರ್ದೇಶನ ಮಾಡಿದ್ದಾರೆ. ಈ ಚಿತ್ರಕ್ಕೆ ಸಿಜಿ ಕಾರ್ಯ ನಡೆಯುತ್ತಿದ್ದು, ಆದಷ್ಟು ಬೇಗ ಚಿತ್ರವನ್ನು ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ತಿಳಿಸಿದ್ದಾರೆ. 


"GST"  ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ.ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು  ಪ್ರಮುಖಪಾತ್ರದಲ್ಲಿ ನಟಸಿದ್ದಾರೆ.ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ.ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ.ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. 


ಇದನ್ನೂ ಓದಿ : ಅಪ್ಪು ಜೊತೆ ನಟಿಸಿ ʼಪರಮಾತ್ಮʼನ ಪ್ರೀತಿಯಲ್ಲಿ ಪರವಶಳಾಗಿದ್ದ ನಟಿ ದೀಪಾ ಸನ್ನಿಧಿ ಈಗ ಎಲ್ಲಿದ್ದಾರೆ? ಏನ್‌ ಮಾಡ್ತಿದ್ದಾರೆ ಗೊತ್ತಾ?


ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ.  ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. 


ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ  ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. 


ಇದನ್ನೂ ಓದಿ : ಓದಲು ಆಸಕ್ತಿಯಿಲ್ಲದೆ ಸಿನಿಮಾಗೆ ಎಂಟ್ರಿ ಕೊಟ್ಟ ಈಕೆ ಇಂದು ಸೂಪರ್‌ ಸ್ಟಾರ್‌..! ಈ ಖ್ಯಾತ ನಟಿಗೆ ಅಮೀರ್‌ ಖಾನ್‌ ಕೂಡ ದೊಡ್ಡ ಅಭಿಮಾನಿ


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.