)
GST Kannada movie : ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ "GST" ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.
"GST" ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಲೋಕೇಶ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸಿದ್ದಾರೆ.
ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ಈ ಚಿತ್ರದಲ್ಲಿ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳಿದ್ದಾರೆ. ಮನೋರಂಜನೆಯೇ ಪ್ರಧಾನವಾಗಿರುವ "GST" ಚಿತ್ರಕ್ಕೆ "ಘೋಸ್ಟ್ ಇನ್ ಟ್ರಬಲ್" ಎಂಬ ಅಡಿಬರಹವಿದೆ.
ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸಿದ್ದಾರೆ. ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ