ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ "GST" ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ!

GST Movie: ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿರುವ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡುತ್ತಿರುವ "GST" ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ.   

Written by - YASHODHA POOJARI | Last Updated : Feb 16, 2024, 04:30 PM IST
  • ಬೆಂಗಳೂರಿನಲ್ಲೇ, ಅದರಲ್ಲೂ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ.
  • "GST" ಚಿತ್ರದ ಮತ್ತೊಂದು ವಿಶೇಷವೆಂದರೆ ನಿರ್ಮಾಪಕ ಸಂದೇಶ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಸಿದ್ದಾರೆ.
ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ "GST" ಚಿತ್ರಕ್ಕೆ ಮಾತಿನ ಭಾಗದ ಚಿತ್ರೀಕರಣ ಮುಕ್ತಾಯ! title=

ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಬೆಂಗಳೂರಿನಲ್ಲೇ, ಅದರಲ್ಲೂ ಅಭಿಮಾನ್ ಸ್ಟುಡಿಯೋದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲೇ ಹೆಚ್ಚಿನ ಚಿತ್ರೀಕರಣ ನಡೆದಿದೆ. ಚಿತ್ರದ ಡಬ್ಬಿಂಗ್ ಸಹ ಸಂಪೂರ್ಣವಾಗಿದೆ.

"GST"  ಚಿತ್ರದ ಮತ್ತೊಂದು ವಿಶೇಷವೆಂದರೆ ನಿರ್ಮಾಪಕ ಸಂದೇಶ್ ಅವರು ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ ಸೃಜನ್ ಗುಪ್ತವಾಗಿಟ್ಟಿದ್ದಾರೆ. ಇನ್ನು ಈ ಚಿತ್ರದಲ್ಲಿ ಗಿರಿಜಾ ಲೋಕೇಶ್, ಸೃಜನ್ ಲೋಕೇಶ್ ಹಾಗೂ ಸೃಜನ್ ಅವರ ಪುತ್ರ ಸುಕೃತ್ ಮೂರು ಜನ ಅಭಿನಯಿಸುತ್ತಿದ್ದಾರೆ. 

ಇದನ್ನೂ ಓದಿ-Karnataka Budget 2024: ಬಜೆಟ್‌ ಮಂಡಣೆಯಲ್ಲಿ ಕನ್ನಡ ಸಿನಿಮಾಗಳನ್ನು ಉಲ್ಲೇಖಿಸಿದ ಸಿಎಂ!

ಅಜ್ಜಿ, ಮಗ ಹಾಗೂ ಮೊಮ್ಮಗ ಮೂರು ಜನರನ್ನು ಒಟ್ಟಿಗೆ ತೆರೆಯ ಮೇಲೆ ನೋಡಬಹುದು. ತಮ್ಮ ನಿರ್ದೇಶನದ ಮೊದಲ ಚಿತ್ರದಲ್ಲೇ ಸೃಜನ್ ತಮ್ಮ ತಾಯಿ ಹಾಗೂ ಮಗನಿಗೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಪರಿಶುದ್ಧ ಮನೋರಂಜನೆಯ ಕಥಾಹಂದರ ಹೊಂದಿರುವ "GST"ಗೆ, " ಘೋಸ್ಟ್ ಇನ್ ಟ್ರಬಲ್" ಎಂಬ ಅಡಿಬರಹವಿದೆ.

ಸೃಜನ್ ಲೋಕೇಶ್ ಅವರಿಗೆ ನಾಯಕಿಯಾಗಿ ರಜನಿ ಭಾರದ್ವಾಜ್ ನಟಿಸುತ್ತಿದ್ದಾರೆ.  ಪ್ರಮೋದ್ ಶೆಟ್ಟಿ, ಗಿರಿಜಾ ಲೋಕೇಶ್, ಶೋಭ್ ರಾಜ್, ಶರತ್ ಲೋಹಿತಾಶ್ವ, ನಿವೇದಿತಾ, ಅರವಿಂದ್ ರಾವ್, ತಬಲ ನಾಣಿ, ರವಿಶಂಕರ್ ಗೌಡ, ವಿನೋದ್ ಗೊಬ್ಬರಗಾಲ, ಮಾಸ್ಟರ್ ಸುಕೃತ್ ಮುಂತಾದವರು ಈ ಸಿನಿಮಾದ ತಾರಾಬಳಗದಲ್ಲಿದ್ದಾರೆ. ಚಂದನ್ ಶೆಟ್ಟಿ ಸಂಗೀತ ನಿರ್ದೇಶನ ಹಾಗೂ  ಗುಂಡ್ಲುಪೇಟೆ ಸುರೇಶ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ     ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ. ತೇಜಸ್ವಿ ಕೆ ನಾಗ್ ಈ ಚಿತ್ರದ ಸಹ ನಿರ್ದೇಶಕರು.

ಇದನ್ನೂ ಓದಿ-ಇಂದು ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಹುಟ್ಟುಹಬ್ಬ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News