Mahesh Babu - SS Rajamouli : ಸೂಪರ್‌ಸ್ಟಾರ್ ಮಹೇಶ್‌ಬಾಬು ಸಂಕ್ರಾಂತಿಗೆ ʼಗುಂಟೂರು ಕಾರʼ ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ತ್ರಿವಿಕ್ರಮ್ ನಿರ್ದೇಶನದ ಈ ಸಿನಿಮಾದಲ್ಲಿ ಶ್ರೀಲೀಲಾ ಮತ್ತು ಮೀನಾಕ್ಷಿ ಚೌಧರಿ ನಾಯಕಿಯರಾಗಿ ನಟಿಸಿದ್ದಾರೆ. ತಮನ್ ಸಂಗೀತ ಸಂಯೋಜಿಸಿದ್ದಾರೆ. ಈ ಸಿನಿಮಾದ ನಂತರ ಮಹೇಶ್ ರಾಜಮೌಳಿ ನಿರ್ದೇಶನದಲ್ಲಿ ನಟಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಈ ಸಿನಿಮಾ ಆಫ್ರಿಕನ್ ಕಾಡಿನಲ್ಲಿ ಈ ಸಿನಿಮಾ ಚಿತ್ರೀಕರಣಗೊಳ್ಳಲಿದೆ. ರಾಜಮೌಳಿ ಅವರ ತಂದೆ, ಬರಹಗಾರ ವಿಜಯೇಂದ್ರ ಪ್ರಸಾದ್ ಕಥೆ ಬರೆದಿದ್ದಾರೆ. ಈ ಪ್ಯಾನ್ ವರ್ಲ್ಡ್ ಚಿತ್ರದ ಪ್ರಿ-ಪ್ರೊಡಕ್ಷನ್ ಚಟುವಟಿಕೆಗಳು ನಡೆಯುತ್ತಿವೆ. ಈ ಸಿನಿಮಾ ಯಾವಾಗ ಸೆಟ್ಟೇರಲಿದೆ ಎಂದು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಇತ್ತೀಚಿನ ಮಾಹಿತಿಯ ಪ್ರಕಾರ, ಈ ಸಿನಿಮಾ ಮಾರ್ಚ್‌ನಲ್ಲಿ ಸೆಟ್‌ ಏರುವ ಸಾಧ್ಯತೆ ಇದೆ ಎನ್ನಲಾಗಿದೆ.


ಇದನ್ನೂ ಓದಿ: ಬಾಯ್‌ಫ್ರೆಂಡ್‌ಗಾಗಿ ಹೃದಯದ ಮೇಲೆ ಟ್ಯಾಟೂ..! ಲವ್‌ ಸ್ಟೋರಿ ಬಿಚ್ಚಿಟ್ಟ ಶ್ರದ್ಧಾ ಶ್ರೀನಾಥ್


ಇದಲ್ಲದೇ ಈ ಸಿನಿಮಾದ ಬಜೆಟ್ ಬಗ್ಗೆ ಒಂದು ಕುತೂಹಲಕಾರಿ ಸುದ್ದಿ ಇದೆ. ಈ ಚಿತ್ರಕ್ಕೆ ಬರೋಬ್ಬರಿ 1500 ಕೋಟಿ ಬಜೆಟ್‌ ಮೀಸಲಿಡಲಾಗುತ್ತಿದೆ ಎಂದು ವರದಿಯಾಗಿದೆ. ಆದರೆ ಟಾಲಿವುಡ್ ಹೀರೋ ಚಿತ್ರಕ್ಕೆ ಇಷ್ಟೊಂದು ಬಜೆಟ್ ಖರ್ಚು ಮಾಡುವುದು ಸಾಮಾನ್ಯ ಸಂಗತಿಯಲ್ಲ. ಸದ್ಯ ರಾಜಮೌಳಿ ಲೊಕೇಶನ್‌ಗಳ ಹುಡುಕಾಟದಲ್ಲಿ ತೊಡಗಿದ್ದಾರೆ ಎನ್ನಲಾಗುತ್ತಿದೆ.


ಶೂಟಿಂಗ್‌ಗೂ ಮುನ್ನ ವಿಶೇಷ ಕಾರ್ಯಾಗಾರವನ್ನು ರಾಜಮೌಳಿ ಯೋಜಿಸಲಿದ್ದಾರೆ. ಮಹೇಶ್ ಬಾಬು ಜೊತೆಗೆ ಇಡೀ ತಂಡ ಕೂಡ ಇರಲಿದೆ. ಇತ್ತೀಚೆಗಷ್ಟೇ ನಡೆದ ಸಂದರ್ಶನವೊಂದರಲ್ಲಿ ರಾಜಮೌಳಿ ಇದು 'ಜಗತ್ತನ್ನು ಸುತ್ತುವ ಸಾಹಸಿಯೊಬ್ಬನ ಕಥೆ' ಎಂದು ಹೇಳಿದ್ದರು. ಮುಖಾ ಹಾಲಿವುಡ್ ಸ್ಟುಡಿಯೋ ಕೆಎಲ್ ನಾರಾಯಣ ಸಹಯೋಗದಲ್ಲಿ ಈ ಚಿತ್ರವನ್ನು ನಿರ್ಮಿಸಲಿದೆ. ಎಂ.ಎಂ.ಕೀರವಾಣಿ ಸಂಗೀತ ನೀಡಲಿದ್ದಾರೆ. ಸದ್ಯದಲ್ಲೇ ನಾಯಕಿ ಹಾಗೂ ಇತರೆ ನಟರ ಆಯ್ಕೆಯಾಗುವ ಸಾಧ್ಯತೆ ಇದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.