MM Keravaani : ಆರ್‌ಆರ್‌ಆರ್ ಚಿತ್ರತಂಡಕ್ಕೆ ಈಗ ಸುಗ್ಗಿ ಕಾಲ. ಸಾಲು ಸಾಲು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬರ್ತಿವೆ. ಇತ್ತೀಚಿಗೆ ಗೋಲ್ಡನ್‌ ಗ್ಲೋಬ್ಸ್‌ ಪ್ರಶಸ್ತಿಗೆ ಪಾತ್ರವಾಗಿದ್ದ ರಾಜಮೌಳಿ ಚಿತ್ರತಂಡ ಇದೀಗ ಆಸ್ಕರ್‌ ಅಂಗಳದಲ್ಲಿದೆ. ಇನ್ನು ಇದೇ ವೇಳೆ ಈ ʼನಾಟು ನಾಟುʼ ಹಾಡಿನ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತು ಸಂತೋಷ ವ್ಯಕ್ತಪಡಿಸಿರುವ ನಿರ್ದೇಶಕ ರಾಜಮೌಳಿ, ಸುದೀರ್ಘ ಬರಹದ ಮೂಲಕ ಕೀರವಾಣಿಯವರನ್ನು ಹಾಡಿ ಹೊಗಳಿದ್ದಾರೆ.


COMMERCIAL BREAK
SCROLL TO CONTINUE READING

ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ಈ ಕುರಿತು ಪೋಸ್ಟ್‌ ಹಂಚಿಕೊಂಡಿರುವ ರಾಜಮೌಳಿ, ನಿಮ್ಮ ಅನೇಕ ಅಭಿಮಾನಿಗಳಲ್ಲಿ ನಾನೂ ಒಬ್ಬ. ನಿಮ್ಮ ಸಾಧನೆಯನ್ನು ಬಹಳ ತಡವಾಗಿ ಗುರುತಿಸಲಾಗಿದೆ. ನಿವೇ ಹೇಳುವಂತೆ ಈ ಪ್ರಪಂಚ ಒಬ್ಬರ ಪ್ರಯತ್ನಗಳಿಗೆ ಪ್ರತಿಫಲ ನೀಡುವ ವಿಭಿನ್ನ ಮಾರ್ಗವನ್ನು ಹೊಂದಿದೆ. ನಾನು ಮತ್ತೇ ಆ ಪ್ರಪಂಚದೊಂದಿಗೆ ಮಾತನಾಡಲು ಸಾಧ್ಯವಾದರೆ, ಒಂದನ್ನೇ ಪೂರ್ಣವಾಗಿ ಎಂಜಾಯ್‌ ಮಾಡೋವರೆಗೂ ಸ್ವಲ್ಪ ಗ್ಯಾಪ್‌ ಕೊಡಮ್ಮಾ.. ಅಂತ ಕೇಳ್ತೀನಿ.. ಅಂತ ಕಿರವಾಣಿಯವರಿಗೆ ಲಭಿಸುತ್ತಿರುವ ಸಾಲು ಸಾಲು ಗೌರವದ ಕುರಿತು ಸಂತೋಷ ವ್ಯಕ್ತಪಡಿಸಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.