ಬೆಂಗಳೂರು: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹಾಗೂ ಕಿರಣ್ ರಾಜ್ ಕಾಂಬಿನೇಷನ್ ನಲ್ಲಿ ಮೂಡಿ ಬಂದಿದ್ದ 777 ಚಾರ್ಲಿ ಸಿನಿಮಾ ಇದೇ ತಿಂಗಳ 10 ರಂದು ಬಿಡುಗಡೆಯಾಗಿ ಈಗ ಈ ಚಿತ್ರ ವಿಶ್ವದಾದ್ಯಂತ ಅದ್ಧೂರಿ ಪ್ರದರ್ಶನ ಕಾಣುತ್ತಿದೆ.
ಮನುಷ್ಯ ಹಾಗೂ ಶ್ವಾನದ ಭಾವುಕ ಪಯಣದ ಸಾರವನ್ನು ಹೊಂದಿರುವ ಈ ಚಿತ್ರವನ್ನು ಇತ್ತೀಚಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸಂಪುಟ ಸಹೋದ್ಯೋಗಿಗಳೊಂದಿಗೆ ಸಿನಿಮಾ ನೋಡಿ ಕಣ್ಣೀರಿಟ್ಟಿದ್ದರು.ಇದಾದ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ತೆರಿಗೆ ವಿನಾಯಿತಿ ಘೋಷಿಸಿದೆ.
ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’
ರಕ್ಷಿತ್ ಶೆಟ್ಟಿ ತಮ್ಮದೇ ಪ್ರೊಡಕ್ಷನ್ ಸಂಸ್ಥೆಯಿಂದ ನಿರ್ಮಿಸಿದ್ದ ಈ ಸಿನಿಮಾದಲ್ಲಿ ಶ್ವಾನಗಳ ಸ್ವಾಸ್ಥ್ಯದ ಮೇಲಾಗುವ ಪರಿಣಾಮಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲಾಗಿದೆ.ಈ ಚಿತ್ರವು ಪ್ರಾಣಿಗಳ ಸೂಕ್ಷ್ಮತೆಗಳನ್ನು ಎತ್ತಿಹಿಡಿಯುವ ಕಥಾವಸ್ತುವನ್ನು ಹೊಂದಿದೆ ಎನ್ನುವ ಕಾರಣಕ್ಕಾಗಿ ಈ ಚಿತ್ರಕ್ಕೆ ತೆರಿಗೆ ವಿನಾಯಿತಿ ಘೋಷಿಸಬೇಕು ಎಂದು ಸಾಕಷ್ಟು ಅಭಿಮಾನಿಗಳು ಆಗ್ರಹಿಸಿದ್ದರು.ಇದರ ಬೆನ್ನಲ್ಲೇ ಈಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆಯಿಂದ ಆರು ತಿಂಗಳ ಕಾಲ ಜಿಎಸ್ ಟಿ ವಿಧಿಸದೇ ಸಿನಿಮಾಗೆ ವೀಕ್ಷಣೆಗೆ ಅವಕಾಶ ಕಲ್ಪಿಸಿದ್ದಾರೆ.
ಇದನ್ನೂ ಓದಿ : Railway Employee : ರೈಲ್ವೆ ನೌಕರರಿಗೆ ಸಿಹಿ ಸುದ್ದಿ : 14% ರಷ್ಟು DA ಹೆಚ್ಚಿಸಿದ ಕೇಂದ್ರ ಸರ್ಕಾರ!
ವಿಶೇಷವೆಂದರೆ ಈಗ ರಾಜ್ಯ ಸರ್ಕಾರ ಕಾಶ್ಮೀರಿ ಫೈಲ್ಸ್ ಬಳಿಕ 777 ಚಾರ್ಲಿ ಸಿನಿಮಾಗೆ ತೆರಿಗೆ ವಿನಾಯಿತಿ ನೀಡಿದೆ.ಕಿರಣ್ ರಾಜ್ ಚೊಚ್ಚಲ ಬಾರಿಗೆ ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ಸಂಗೀತ ಶೃಂಗೇರಿ,ರಾಜ್ ಬಿ ಶೆಟ್ಟಿ, ಬಾಬಿ ಸಿಂಹ, ಬೇಬಿ ಶರ್ವರಿ ಸೇರಿದಂತೆ ಮುಂತಾದ ನಟ ನಟಿಯರು ಚಿತ್ರದಲ್ಲಿ ನಟಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
.