Emraan Hashmi: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ

Emraan Hashmi In Kashmir: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಈ ದಿನಗಳಲ್ಲಿ ಕಾಶ್ಮೀರದಲ್ಲಿದ್ದು, ಅವರ ಮುಂಬರುವ ಸಿನಿಮಾದ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಈ ನಡುವೆ ಕೆಲವು ದುಷ್ಕರ್ಮಿಗಳು ನಟನ ಮೇಲೆ ಕಲ್ಲಿನಿಂದ ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ. 

Written by - Chetana Devarmani | Last Updated : Sep 20, 2022, 11:50 AM IST
  • ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ
  • ಬಾಲಿವುಡ್ ನಟ ಇಮ್ರಾನ್ ಹಶ್ಮಿ
  • ಸಿನಿಮಾ ಶೂಟಿಂಗ್‌ ವೇಳೆ ನಡೆದ ಘಟನೆ
Emraan Hashmi: ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಲ್ಲು ತೂರಾಟ  title=
ಇಮ್ರಾನ್ ಹಶ್ಮಿ

Emraan Hashmi : ಕಾಶ್ಮೀರದ ಸುಂದರ ಕಣಿವೆಗಳಲ್ಲಿ ಸಿನಿಮಾ ಶೂಟಿಂಗ್‌ ಮಾಡುತ್ತಿದ್ದ ಬಾಲಿವುಡ್‌ ಖ್ಯಾತ ನಟನ ಮೇಲೆ ಕಲ್ಲು ತೂರಾ ನಡೆದಿದೆ. ಬಾಲಿವುಡ್‌ನ ಖ್ಯಾತ ನಟ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಿದ್ದು, ಈ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಟ ಇಮ್ರಾನ್ ಹಶ್ಮಿ ಈ ದಿನಗಳಲ್ಲಿ ತಮ್ಮ ಮುಂಬರುವ ಚಿತ್ರದ ಚಿತ್ರೀಕರಣವನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಸುತ್ತಿದ್ದಾರೆ.  

ಇದನ್ನೂ ಓದಿ : ಮೊಬೈಲ್‌ನಲ್ಲಿ ಅಶ್ಲೀಲ ವಿಡಿಯೋ ನೋಡುವವರೇ ಎಚ್ಚರ! ಮೈಮೆರೆತರೆ ಅಪಾಯ ಫಿಕ್ಸ್‌!

ಇಮ್ರಾನ್ ಹಶ್ಮಿ ಜಮ್ಮು ಮತ್ತು ಕಾಶ್ಮೀರದಲ್ಲಿ ತಮ್ಮ ಮುಂಬರುವ ಚಿತ್ರ 'ಗ್ರೌಂಡ್ ಜೀರೋ' ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಪಹಲ್ಗಾಮ್‌ನಲ್ಲಿ ಎಲ್ಲಾ ಶೂಟಿಂಗ್ ಕೆಲಸಗಳು ನಡೆಯುತ್ತಿವೆ, ಆದರೆ ಇಲ್ಲಿ ಇಮ್ರಾನ್ ಹಶ್ಮಿ ಅವರ ಮೇಲೆ ಕಲ್ಲು ತೂರಾಟ ನಡೆಸಲಾಯಿತು. ಇತ್ತೀಚೆಗಷ್ಟೇ ಇಮ್ರಾನ್ ಹಶ್ಮಿ ಶೂಟಿಂಗ್ ಮುಗಿಸಿ ಸೆಟ್‌ನಿಂದ ಹೊರಗೆ ಬಂದಾಗ ದುಷ್ಕರ್ಮಿಗಳು ಅವರ ಮೇಲೆ ಕಲ್ಲು ಎಸೆದಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದ್ದಾರೆ.

ಮಾಹಿತಿಯ ಪ್ರಕಾರ, ಸಂಜೆ ಶೂಟಿಂಗ್ ಮುಗಿಸಿದ ನಂತರ, ಇಮ್ರಾನ್ ಹಶ್ಮಿ ಚಿತ್ರತಂಡದೊಂದಿಗೆ ಪಹಲ್ಗಾಮ್ ಮುಖ್ಯ ಮಾರುಕಟ್ಟೆಗೆ ತೆರಳಿದರು. ಆಗ ಇದ್ದಕ್ಕಿದ್ದಂತೆ ಯಾರೋ ಅಪರಿಚಿತರು ನಟನ ಜೊತೆಯಲ್ಲಿದ್ದವರೆಲ್ಲರ ಮೇಲೆ ಹಲ್ಲೆ ನಡೆಸಿದರು ಮತ್ತು ಎಲ್ಲರೂ ಆತನ ಮೇಲೆ ಕಲ್ಲು ತೂರಾಟ ಆರಂಭಿಸಿದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕಲ್ಲು ತೂರಾಟ ನಡೆಸಿದವರ ಮೇಲೆ 147, 148, 370, 336, 323 ಸೆಕ್ಷನ್‌ಗಳನ್ನು ವಿಧಿಸಲಾಗಿದೆ.  ಕೆಲವು ಮಾಧ್ಯಮ ವರದಿಗಳ ಪ್ರಕಾರ, ಪೊಲೀಸರು ದುಷ್ಕರ್ಮಿಯನ್ನು ಗುರುತಿಸಿ ಬಂಧಿಸಿದ್ದಾರೆ. 

ಇದನ್ನೂ ಓದಿ : Bigg Boss : ಬಿಗ್‌ಬಾಸ್‌ ಮನೆಗೆ ಎಂಟ್ರಿ ಕೊಡಲಿದ್ದಾರೆ ಈ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ.!

ಇನ್ನೂ ಗ್ರೌಂಡ್ ಜೀರೋ ಸಿನಿಮಾ ಗಡಿ ಭದ್ರತಾ ಪಡೆ (ಬಿಎಸ್ಎಫ್) ಜವಾನರನ್ನು ಆಧರಿಸಿದೆ. ಈ ಚಿತ್ರದಲ್ಲಿ ಇಮ್ರಾನ್ ಹಶ್ಮಿ ಸೇನಾಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಪಹಲ್ಗಾಮ್ ಮೊದಲು, ಶ್ರೀನಗರದಲ್ಲಿ ಈ ಸಿನಿಮಾ ಶೂಟಿಂಗ್ ನಡೆದಿತ್ತು.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News