ಪಬ್,ಬಾರ್ ಗಳಿಗೆ ಅಪ್ರಾಪ್ತರಿಗೆ ಎಂಟ್ರಿ ಕೊಟ್ರೆ ಕಠಿಣ ಕ್ರಮ
ರಾಜ್ಯದಲ್ಲಿ ಪಬ್, ಮತ್ತು ಮದ್ಯದಂಗಡಿಗಳು ಪಬ್, ಬಾರ್, ಮತ್ತು ಮದ್ಯದಂಗಡಿಗಳು ನಿಗದಿತ ಸಮಯದಲ್ಲಿ ಬಂದ್ ಮಾಡುವ ಜೊತೆಗೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಪಬ್, ಮತ್ತು ಮದ್ಯದಂಗಡಿಗಳು ಪಬ್, ಬಾರ್, ಮತ್ತು ಮದ್ಯದಂಗಡಿಗಳು ನಿಗದಿತ ಸಮಯದಲ್ಲಿ ಬಂದ್ ಮಾಡುವ ಜೊತೆಗೆ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದಾರೆ.
ಅಲೋಕ್ ಕುಮಾರ್ ಆದೇಶವೇನು?
ಇದನ್ನೂ ಓದಿ: ಇಂದಿನ ಈ ಸ್ಥಿತಿಗೆ ಸಿದ್ದರಾಮಯ್ಯನವರೇ ನೇರ ಕಾರಣಕರ್ತರು: ಬಿಜೆಪಿ ಆರೋಪ
ಬಾರ್,ಪಬ್, ಮದ್ಯದಂಗಡಿಗಳಿಗೆ ಅಪ್ರಾಪ್ತರು ವಯಸ್ಕರು ಪ್ರವೇಶಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದು.
ಬಾರ್, ಪಬ್, ಮದ್ಯದಂಗಡಿಗಳಲ್ಲಿ ಮಾದಕ ದ್ರವ್ಯ ಸಾಗಣಿಕೆ ಮತ್ತು ಬಳಕೆಯನ್ನು ತಡೆಗಟ್ಟುವ ನಿಟ್ಟಿನ ಕ್ರಮಗಳನ್ನು ಜರುಗಿಸುವುದು.
ಇದನ್ನೂ ಓದಿ: 17 ವರ್ಷಗಳಿಂದ ಭಾರತದಲ್ಲಿ ಅಕ್ರಮವಾಗಿ ನೆಲೆಸಿದ್ದ ವಿದೇಶಿ ಪ್ರಜೆ ಗಡಿಪಾರು!
ಬಾರ್, ಪಬ್, ಮದ್ಯದಂಗಡಿಗಳ ಲೈಸನ್ಸ್‌ಗಳಲ್ಲಿ ನಿಗದಿಪಡಿಸಿದ ಸಮಯದಂತೆ ಕಡ್ಡಾಯವಾಗಿ ಮುಚ್ಚಬೇಕು.
ಸುಪ್ರೀಂಕೋರ್ಟ್ ಆದೇಶದಂತೆ ಪಬ್‌ಗಳಲ್ಲಿ ಅಳವಡಿಸಿರುವ ಧ್ವನಿವರ್ದಕಗಳನ್ನು ರಾತ್ರಿ 10.00ಗಂಟೆಯೊಳಗಾಗಿ ನಿಲ್ಲಿಸಿ ಶಬ್ದ ಮಾಲಿನ್ಯ ಉಂಟಾಗದಂತೆ ಎಚ್ಚರಿಕೆ ವಹಿಸಬೇಕು.ಹೀಗೆ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಹೊರತುಪಡಿಸಿ ಉಳಿದ ಎಲ್ಲಾ ನಗರದ ಆಯುಕ್ತರಿಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಕ್ರಮವನ್ನು ಕೈಗೊಳ್ಳಲು ಸೂಚಿಸಲಾಗಿದೆ. ಜುಲೈ 31ರೊಳಗೆ ಈ ಆದೇಶ ಜಾರಿಗೊಳಿಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಲಾಗಿದೆ. ನಿಯನ ಮೀರಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.