ದೆಹಲಿ: ಸಂಸದೆ ಸುಮಲತಾ ಅಂಬರೀಶ್ ಕೆಲ ದಿನಗಳ ಹಿಂದೆ ಅಷ್ಟೇ ಸುದ್ದಿಗೋಷ್ಠಿ ನಡೆಸಿ ತಮ್ಮ ಬೆಂಬಲವನ್ನು ಬಿಜೆಪಿಗೆ ಹಾಗೂ ಪ್ರಧಾನಿ ನರೇಂದ್ರ ಮೋದಿಗೆ ಎಂದು ಹೇಳಿ ಅವರ ನಾಯಕತ್ವ ಕುರಿತು ಕೊಂಡಾಡಿದ್ದರು. ಬೆಂಬಲ ಸೂಚಿಸಿದ ಬೆನ್ನಲೇ ಇದೀಗ ತಮ್ಮ ಪುತ್ರ ಅಭಿಷೇಕ್ ಅಂಬರೀಷ್ ಜೊತೆ ಪ್ರಧಾನಿ ನರೇಂದ್ರ ಮೋದಿಯನ್ನು ಇಂದು ಭೇಟಿ ಮಾಡಿದ್ದಾರೆ.
ತಮ್ಮ ಮಗನೊಂದಿಗೆ ಮೋದಿಯನ್ನು ಭೇಟಿ ಮಾಡಿದ ಸುಮಲತಾ ಅಂಬರೀಷ್, ತಮ್ಮ ಮಗನ ಮದುವೆಯ ಆಮಂತ್ರಣ ನೀಡಿ ಆಹ್ವಾನಿಸಿದ್ದಾರೆ. ಆಮಂತ್ರಣದ ಕ್ಷಣವನ್ನು ಹಂಚಿಕೊಂಡ ಸುಮಲತಾ ತಮ್ಮ ಟ್ವೀಟರ್ ಖಾತೆಯಲ್ಲಿ, ವಿಶ್ವದಲ್ಲಿ ನಾ ಕಂಡ ಅದ್ಭುತ ನಾಯಕ ಮೋದಿ , ಇವರನ್ನು ಆಹ್ವಾನಿಸಿದ ಕ್ಷಣವು ತುಂಬಾ ಖುಷಿ ಕೊಟ್ಟಿದ್ದೆ ಎಂದು ಬರೆದುಕೊಂಡಿದ್ದಾರೆ.
ಇದೇ ಸಂದರ್ಭದಲ್ಲಿ ರಾಜ್ಯದ ಮತ್ತು ನನ್ನ ಮಂಡ್ಯ ಕ್ಷೇತ್ರದ ಬಗ್ಗೆ ಹಲವು ವಿಚಾರಗಳನ್ನು ಚರ್ಚಿಸಲಾಯಿತು. ಮಾನ್ಯ ಪ್ರಧಾನಿಗಳು ಮಂಡ್ಯಕ್ಕೆ ಬಂದಾಗ ನನ್ನ ಸ್ವಾಭಿಮಾನಿ ಜನತೆ ಅವರನ್ನು ಬರಮಾಡಿಕೊಂಡ ರೀತಿಯನ್ನು ನೆನಪಿಸಿಕೊಂಡು ಶ್ಲ್ಯಾಘಿಸಿದರು. ಮಂಡ್ಯ ಹಾಗೂ ಕರ್ನಾಟಕದ ಬಗ್ಗೆ ಅವರಿಗಿರುವ ಅಪಾರವಾದ ಅಭಿಮಾನಕ್ಕೆ ನನ್ನ ತುಂಬು ಹೃದಯದ ಧನ್ಯವಾದಗಳು. pic.twitter.com/yjZKJfdShY
— Sumalatha Ambareesh 🇮🇳 ಸುಮಲತಾ ಅಂಬರೀಶ್ (@sumalathaA) April 5, 2023
ಇದನ್ನೂ ಓದಿ: Kichcha Sudeep Press Meet : ‘ಚುನಾವಣೆ ನಿಲುವಿನ ಬಗ್ಗೆ ಸ್ಪಷ್ಟನೆ ಕೊಟ್ಟ ಕಿಚ್ಚ ಸುದೀಪ್
ಈ ಮೂಲಕ ಮೋದಿಯ ಆಡಳಿತವನ್ನು ಕೊಂಡಾಡಿದ್ದಾರೆ. ಈ ಹಿಂದೆಯೇ ಮೋದಿಗೆ ನನ್ನ ಸಂಪೂರ್ಣ ಬೆಂಬಲ ಘೋಷಿಸಿದ್ದರು. ಇಂದು ತಮ್ಮ ಮಗನ ಮದುವೆ ಆಮಂತ್ರಣ ನೀಡುವ ಮೂಲಕ ಮತ್ತೆ ಸಾಬೀತು ಮಾಡಿದ್ದಾರೆ.
ಇದನ್ನೂ ಓದಿ: Prakash Raj : "ನಮ್ಮ ಕಿಚ್ಚ ಮಾರಿಕೊಳ್ಳುವವರಲ್ಲ" - ನಟ ಪ್ರಕಾಶ್ ರಾಜ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.