ನಿರ್ದೇಶನದತ್ತ ಹೆಜ್ಜೆಯಿಟ್ಟ ಪತ್ರಕರ್ತೆ ಸುನಯನಾ ಸುರೇಶ್

ಸಿನಿಮಾ ನಿರ್ಮಾಣಕ್ಕೆ ಹೊಸಬರಲ್ಲದ ಸುನಯನಾ, ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು ಮತ್ತು ಕೆಲವು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸದಲ್ಲಿ, ಮೀಡಿಯಾ ಸ್ಟ್ರಾಟೆಜಿಸ್ಟ್ ಮತ್ತು ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ.

Written by - YASHODHA POOJARI | Last Updated : Jun 14, 2024, 07:52 PM IST
    • ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಸುನಯನಾ ಸುರೇಶ್
    • ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು
    • ಮೌನ ರಾಗ ಎಂಬ ಕಿರುಚಿತ್ರಕ್ಕೆ ಬರಹಗಾರರಾಗಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗುತ್ತಿದ್ದಾರೆ
ನಿರ್ದೇಶನದತ್ತ ಹೆಜ್ಜೆಯಿಟ್ಟ ಪತ್ರಕರ್ತೆ ಸುನಯನಾ ಸುರೇಶ್ title=
Sunayana Suresh

Sunayana Suresh: ಟೈಮ್ಸ್ ಆಫ್ ಇಂಡಿಯಾ, ಡಿಎನ್‌ಎ, ಡೆಕ್ಕನ್ ಕ್ರಾನಿಕಲ್ ಮತ್ತು ಮಿಡ್ ಡೇ ನಂತಹ ಪ್ರಮುಖ ಪತ್ರಿಕೆಗಳಲ್ಲಿ ಪತ್ರಕರ್ತೆಯಾಗಿ ಕೆಲಸ ಮಾಡಿದ ಅನುಭವ ಇರುವ ಸುನಯನಾ ಸುರೇಶ್ ಇದೀಗ ನಿರ್ದೇಶನದತ್ತ ಧುಮುಕಿದ್ದಾರೆ.

ಸಿನಿಮಾ ನಿರ್ಮಾಣಕ್ಕೆ ಹೊಸಬರಲ್ಲದ ಸುನಯನಾ, ಈ ಹಿಂದೆ ಸ್ವಾತಿ ಮುತ್ತಿನ ಮಳೆ ಹನಿಯೇ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕಿಯಾಗಿದ್ದರು ಮತ್ತು ಕೆಲವು ಚಿತ್ರಗಳಿಗೆ ಸ್ಕ್ರಿಪ್ಟ್ ಕೆಲಸದಲ್ಲಿ, ಮೀಡಿಯಾ ಸ್ಟ್ರಾಟೆಜಿಸ್ಟ್ ಮತ್ತು ಕಾಸ್ಟಿಂಗ್ ಡೈರೆಕ್ಟರ್ ಆಗಿಯೂ ಕೆಲಸ ಮಾಡಿದ್ದಾರೆ. ಈಗ ಇದೇ ಸುನಯನಾ, ಮೌನ ರಾಗ ಎಂಬ ಕಿರುಚಿತ್ರಕ್ಕೆ ಬರಹಗಾರರಾಗಿ, ನಿರ್ಮಾಪಕಿ ಮತ್ತು ನಿರ್ದೇಶಕರಾಗುತ್ತಿದ್ದಾರೆ.

ಇದನ್ನೂ ಓದಿ: ಚಿಟಿಕೆಯಷ್ಟು ಕಾಳುಮೆಣಸಿನ ಪುಡಿಯನ್ನು ಈ ಎಣ್ಣೆಯಲ್ಲಿ ಬೆರೆಸಿ ಹಚ್ಚಿದರೆ ನಿಮಿಷದಲ್ಲಿ ಕಪ್ಪುಬಣ್ಣಕ್ಕೆ ತಿರುಗುತ್ತೆ ಬಿಳಿಕೂದಲು

ಈ ಹೊಸ ಹೆಜ್ಜೆಯ ಬಗ್ಗೆ ಮಾತನಾಡಿದ ಅವರು, "2000ರ ದಶಕದ ಆರಂಭದಲ್ಲಿ ಇಂಡೀ ಫಿಲ್ಮ್ ಮೇಕಿಂಗ್ ಅಲೆಯು ಸಿನಿಮಾ ಮತ್ತು ಸಿನಿಮಾ ನಿರ್ಮಾಣದ ಮೇಲಿನ ನನ್ನ ಪ್ರೀತಿಯನ್ನು ಮತ್ತಷ್ಟು ಹೆಚ್ಚಿಸಿತು. ನಾಗೇಶ್ ಕುಕುನೂರ್ ಅವರಂತಹ ಹೆಸರುಗಳಿಂದ ಸಿನಿಮಾ ನನ್ನನ್ನು ಸೆಳೆಯಿತು. ಮಾಧ್ಯಮ ಪ್ರತಿನಿಧಿಯಾಗಿ ಮತ್ತು ಸಿನಿಮಾ ವಿಮರ್ಶಕಿಯಾಗಿ ಎರಡು ದಶಕಗಳ ಕಾಲ ಸಿನಿಮಾ ಮತ್ತು ಸಿನಿಮಾ ನಿರ್ಮಾಣವನ್ನು ಸೂಕ್ಷ್ಮವಾಗಿ ಗಮನಿಸಿದೆ" ಎಂದಿದ್ದಾರೆ.

"ಕಳೆದೆರಡು ವರ್ಷಗಳಿಂದ ಸಿನಿಮಾ ನಿರ್ಮಾಣ, ಕಾಸ್ಟಿಂಗ್, ಸ್ಕ್ರಿಪ್ಟ್ ಡಾಕ್ಟರಿಂಗ್ ಮತ್ತು ಪಬ್ಲಿಸಿಟಿಯ ವಿವಿಧ ಆಯಾಮಗಳನ್ನು ಅವಲೋಕಿಸಿದೆ. ಅದರಂತೆ ಈಗ ಮೌನ ರಾಗದ ಮೂಲಕ ಚಿತ್ರನಿರ್ಮಾಪಕಿಯಾಗಿದ್ದೇನೆ, ಇದು ನಾನು ಪ್ರೀತಿಯಿಂದ ಬರೆದು ನಿರ್ದೇಶಿಸಿದ ಕಿರುಚಿತ್ರ” ಎಂದು ಹೇಳಿದ್ದಾರೆ.

ಇದನ್ನೂ ಓದಿ: Kiara Advani : ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿ 10 ವರ್ಷ ! ಸಂಭ್ರಮದಲ್ಲಿ ಕಿಯಾರಾ ಫೋಟೋಸ್ ವೈರಲ್.. 

ಮೌನ ರಾಗ ಕಿರುಚಿತ್ರಕ್ಕೆ ಪ್ರೀತಾ ಜಯರಾಮನ್ ಛಾಯಾಗ್ರಾಹಕರಾಗಿದ್ದಾರೆ. ಶ್ರುತಿ ಹರಿಹರನ್ ನಾಯಕಿ. ಇವರಲ್ಲದೆ ಬಾದಲ್ ನಂಜುಂಡಸ್ವಾಮಿ ಅವರ ಕಲಾ ನಿರ್ದೇಶನ ಮತ್ತು ಆಲ್ ಓಕೆ ಸಂಗೀತ ಸಂಯೋಜನೆ ಮಾಡಲಿದ್ದಾರೆ. ಚಿತ್ರದಲ್ಲಿ ಅಗ್ನಿವ್ ಪ್ರಮುಖ ಪಾತ್ರದಲ್ಲಿದ್ದಾರೆ. ಈ ಚಿತ್ರದಲ್ಲಿ ನಟಿಯರಾದ ಸಂಯುಕ್ತಾ ಹೊರನಾಡು, ಸೂರಜ್ ಗೌಡ, ರಾಜಶ್ರೀ ಪೊನ್ನಪ್ಪ, ಅನಿರುದ್ಧ್ ಆಚಾರ್ಯ, ಹರ್ಷಿಲ್ ಕೌಶಿಕ್ ಮತ್ತು ಆಲ್ ಒಕೆ ನಟಿಸಲಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News