"ಬೆಲ್ ಬಟನ್" ಗೆ ಚಾಲನೆ ನೀಡಿದ ಸುನೀಲ್ ಕುಮಾರ್ ದೇಸಾಯಿ

ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗ (Sandalwood) ವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿ ಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು.ಅಂತಹ ಉತ್ತಮ ನಿರ್ದೇಶಕರಿಂದ ಇತ್ತೀಚೆಗೆ "ಬೆಲ್ ಬಟನ್" ಚಿತ್ರದ ಪೋಸ್ಟರ್ ಅನಾವರಣವಾಗಿದೆ.

Written by - YASHODHA POOJARI | Edited by - Manjunath N | Last Updated : Apr 7, 2022, 04:15 PM IST
  • ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.
"ಬೆಲ್ ಬಟನ್" ಗೆ ಚಾಲನೆ ನೀಡಿದ ಸುನೀಲ್ ಕುಮಾರ್ ದೇಸಾಯಿ title=

ಬೆಂಗಳೂರು: ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿ ಕನ್ನಡ ಚಿತ್ರರಂಗ (Sandalwood) ವನ್ನು ಶ್ರೀಮಂತಗೊಳಿಸಿದ ನಿರ್ದೇಶಕರಲ್ಲಿ ಸುನೀಲ್ ಕುಮಾರ್ ದೇಸಾಯಿ ಸಹ ಒಬ್ಬರು.ಅಂತಹ ಉತ್ತಮ ನಿರ್ದೇಶಕರಿಂದ ಇತ್ತೀಚೆಗೆ "ಬೆಲ್ ಬಟನ್" ಚಿತ್ರದ ಪೋಸ್ಟರ್ ಅನಾವರಣವಾಗಿದೆ.

ಇದನ್ನೂ ಓದಿ: ಮಾಜಿ ಸಿಎಂ ಬಿಎಸ್‌ವೈ ನಂತರ "ತನುಜಾ" ಸಿನಿಮಾ ಅಖಾಡಕ್ಕೆ ಸಚಿವ ಸುಧಾಕರ್ ಎಂಟ್ರಿ!

ಕನ್ನಡದ ಖ್ಯಾತ ನಿರ್ದೇಶಕರ ಜೊತೆ ಸಹ ನಿರ್ದೇಶಕರಾಗಿ, ಹಾಗು ರಂಗಭೂಮಿ ನಟರಾಗಿ ಅನುಭವವಿರುವ ಲ‌ಕ್ಷ್ಮಿನರಸಿಂಹ.ಎಂ "ಬೆಲ್ ಬಟನ್" ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ.ಲವ್ ಹಾಗೂ ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ.

ಇದನ್ನೂ ಓದಿ: Yash Father : ಆ ಘಟನೆ ನಡೆದಾಗ ಯಶ್‌ ತಂದೆ ಗಳಗಳನೆ ಅತ್ತುಬಿಟ್ರಂತೆ!

ಫ್ರೆಶ್ ಫಿಲಂಸ್ ಮೂಲಕ ಗಂಗರಾಜ್ ಗೌಡ ಆರ್, ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.ಎ.ಆರ್ ರೆಹಮಾನ್ ಬಳಿ ಕೆಲಸ ಮಾಡಿರುವ ಎಸ್ ಎಂ ರಾಹಿತ್ಯ ಸಂಗೀತ ನೀಡುತ್ತಿದ್ದಾರೆ.ಗೌತಮ್ ನಾಯಕ್ ಛಾಯಾಗ್ರಹಣ ಹಾಗೂ ಎಸ್ ಆಕಾಶ್ ಮಹೇಂದ್ರಕರ್ ಸಂಕಲನ ಈ ಚಿತ್ರಕ್ಕಿದೆ.ಕಲಾವಿದರ ಆಯ್ಕೆಯಲ್ಲಿ ‌ತೊಡಗಿರುವ ನಿರ್ದೇಶಕ ಲಕ್ಷ್ಮಿನರಸಿಂಹ ಅವರು, ಮೇನಲ್ಲಿ ಚಿತ್ರೀಕರಣ ಆರಂಭಿಸುವುದಾಗಿ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News