ನವದೆಹಲಿ: ಪ್ರಧಾನಿ ಮೋದಿ ಜೀವನಾಧಾರಿತ ಚಿತ್ರ 'ಪಿಎಂ ನರೇಂದ್ರ ಮೋದಿ' ಬಿಡುಗಡೆಗೆ ತಡೆ ಕೋರಿ  ಕಾಂಗ್ರೆಸ್‌ ನಾಯಕ ಅಮನ್ ಅನ್ವರ್ ಸಲ್ಲಿಸಿದ್ದ ಮನವಿಯನ್ನು ಏಪ್ರಿಲ್ 8ರಂದು ವಿಚಾರಣೆ ನಡೆಸುವುದಾಗಿ ಗುರವಾರ ಸುಪ್ರೀಂಕೋರ್ಟ್ ಹೇಳಿದೆ. 


COMMERCIAL BREAK
SCROLL TO CONTINUE READING

ನ್ಯಾಯಮೂರ್ತಿಗಳಾದ ಎಸ್‌.ಎ.ಬೋಬಡೆ, ಎಸ್.ಅಬ್ದುಲ್ ನಜೀರ್ ಮತ್ತು ಇಂದಿರಾ ಬ್ಯಾನರ್ಜಿ ಅವರನ್ನೊಳಗೊಂಡ ಪೀಠ ಏ.8ರಂದು ಪ್ರಕರಣದ ವಿಚಾರಣೆ ನಡೆಸಲು ಒಪ್ಪಿಗೆ ನೀಡಿದೆ.


ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತ ಚಿತ್ರ ಬಿಡುಗಡೆ ಆಗುತ್ತಿರುವುದಕ್ಕೆ ಕಾಂಗ್ರೆಸ್ ಸೇರಿದಂತೆ ಇತರ ಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಅಲ್ಲದೆ, ಚಿತ್ರ ಬಿಡುಗಡೆಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ ಎಂದು ವಾದಿಸಿವೆ. ಏಪ್ರಿಲ್ 5 ರಂದು ದೇಶಾದ್ಯಂತ ಚಿತ್ರ ಬಿಡುಗಡೆ ಆಗಲಿದೆ ಎನ್ನಲಾಗಿತ್ತು. ಆದರೀಗ ವಿಚಾರಣೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿರುವುದರಿಂದ ಚಿತ್ರ ಬಿಡುಗಡೆ ಮುಂದೂಡಿಕೆಯಾಗುವ ಸಾಧ್ಯತೆಯಿದೆ.