Disha Salian Suicide: ಸಿಬಿಐ ತನಿಖೆಯಲ್ಲಿ ಸುಶಾಂತ್ ಮ್ಯಾನೇಜರ್ ದಿಶಾ ಸಾವಿನ ರಹಸ್ಯ ಬಯಲು!
Disha Salian Suicide: ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವು ಒಂದು ಅಪಘಾತ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತನ್ನ ತನಿಖೆಯಲ್ಲಿ ಬಹಿರಂಗಪಡಿಸಿದೆ. ತನಿಖೆಯ ನಂತರ, ಟ್ಯಾಲೆಂಟ್ ಮ್ಯಾನೇಜರ್ ದಿಶಾ ಸಾಲಿಯಾನ್ ಕುಡಿದ ಅಮಲಿನಲ್ಲಿ ಟೆರೇಸ್‌ನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸಿಬಿಐ ಬಹಿರಂಗಪಡಿಸಿದೆ.
Disha Salian Suicide: ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವು ಒಂದು ಅಪಘಾತ ಎಂದು ಕೇಂದ್ರ ತನಿಖಾ ದಳ (ಸಿಬಿಐ) ತನ್ನ ತನಿಖೆಯಲ್ಲಿ ಬಹಿರಂಗಪಡಿಸಿದೆ. ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣದಲ್ಲಿ, ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ತನಿಖೆಯ ನಂತರ ಅವರ ಸಾವು ಒಂದು ಅಪಘಾತ ಎಂದು ತೀರ್ಮಾನಿಸಿದೆ. ತನಿಖೆಯ ನಂತರ, ಟ್ಯಾಲೆಂಟ್ ಮ್ಯಾನೇಜರ್ ದಿಶಾ ಸಾಲಿಯಾನ್ ಕುಡಿದ ಅಮಲಿನಲ್ಲಿ ಟೆರೇಸ್‌ನಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ್ದಾರೆ ಎಂದು ಸಿಬಿಐ ಬಹಿರಂಗಪಡಿಸಿದೆ.
ಇದನ್ನೂ ಓದಿ : ಗರ್ಭಿಣಿ ಪತ್ನಿಯ ಕತ್ತು ಹಿಸುಕಿ ಕೊಂದು ಅರಣ್ಯದಲ್ಲಿ ಹೂತು ಹಾಕಿದ ಪತಿ!
ನಟಿ, ಮಾಡೆಲ್ ಮತ್ತು ಟ್ಯಾಲೆಂಟ್ ಮ್ಯಾನೇಜರ್ ದಿಶಾ ಸಾಲಿಯಾನ್ ಅವರು ಜೂನ್ 2020 ರಲ್ಲಿ ಮುಂಬೈನ ಮಲಾಡ್‌ನಲ್ಲಿರುವ ತಮ್ಮ ಫ್ಲಾಟ್‌ನ 12 ನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದರು. ದಿಶಾ ಸಾವಿನ ನಂತರ ಅನೇಕ ರೀತಿಯ ಊಹಾಪೋಹಗಳು ಕೇಳಿಬಂದಿದ್ದವು. ಇದೊಂದು ಕೊಲೆ ಎಂದು ಅನೇಕರು ಅನುಮಾನ ವ್ಯಕ್ತಪಡಿಸಿದ್ದರು. ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೆಲವು ವರದಿಗಳು ಹೇಳಿದ್ದರೂ ಕೊಲೆಯ ಶಂಕೆ ದಿಶಾ ಸಾವಿನಲ್ಲಿ ವ್ಯಕ್ತವಾಗಿತ್ತು.
ದಿಶಾ ಸಾಲಿಯಾನ್ ಸಾವಿನ ಪ್ರಕರಣದಲ್ಲಿ ಸಿಬಿಐ ಪ್ರತ್ಯೇಕ ಪ್ರಕರಣ ದಾಖಲಿಸಿಲ್ಲ. ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯ ಸಮಯದಲ್ಲಿ ಸಿಬಿಐ ದಿಶಾ ಅವರ ಸಾವಿನ ಬಗ್ಗೆ ತನಿಖೆ ನಡೆಸಿತು, ಏಕೆಂದರೆ ಇಬ್ಬರೂ ಕೆಲವು ದಿನಗಳ ಅಂತರದಲ್ಲಿ ನಿಧನರಾಗಿದ್ದರು.
ಇದನ್ನೂ ಓದಿ : ಮಾಸ್ಕ್ ಧರಿಸಿ ಕಡಲೆಕಾಯಿ ಪರಿಷೆ ಸುತ್ತಿದ ಸಪ್ತಮಿಗೌಡ : ವಿಡಿಯೋ ನೋಡಿ
ಸಾವಿನ ದಿನ ದಿಶಾ ಸಾಲಿಯಾನ್ ಮದ್ಯದ ಅಮಲಿನಲ್ಲಿದ್ದರು ಮತ್ತು ಈ ವೇಳೆ ಆಯತಪ್ಪಿ ಟೆರೇಸ್ ನಿಂದ ಬಿದ್ದಿದ್ದರು ಎಂದು ಸಿಬಿಐ ತನಿಖೆಯಿಂದ ತಿಳಿದುಬಂದಿದೆ. ಇದಾದ ನಂತರ ದಿಶಾ ಸಾವಿಗೂ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆಗೂ ಯಾವುದೇ ಸಂಬಂಧವಿಲ್ಲ ಎಂಬುದು ಸ್ಪಷ್ಟವಾಗಿದೆ. ಜೂನ್ 9 ರಂದು ದಿಶಾ ಸಾವನ್ನಪ್ಪಿದ್ದರು. ಆ ಬಳಿಕ ಸುಶಾಂತ್ ಸಿಂಗ್ ರಜಪೂತ್ ಅವರ ಶವ ಜೂನ್ 14 ರಂದು ಬಾಂದ್ರಾ ಫ್ಲಾಟ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.