ಮುಂಬೈ: ಖ್ಯಾತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪುತ್ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಕುಟುಂಬ ಮಂಗಳವಾರ ಪಾಟ್ನಾದಲ್ಲಿ ಎಫ್‌ಐಆರ್ ದಾಖಲಿಸಿದ ನಂತರ ಬಿಹಾರ ಪೊಲೀಸರ ತಂಡ ತನಿಖೆಗಾಗಿ ಮುಂಬೈ ತಲುಪಿದೆ. ಈ ಪ್ರಕರಣದ ಬಗ್ಗೆ ಬಿಹಾರ ಪೊಲೀಸರು ಬುಧವಾರದಿಂದ ನಿರಂತರವಾಗಿ ತನಿಖೆ ನಡೆಸುತ್ತಿದ್ದಾರೆ. ವಾಸ್ತವವಾಗಿ, ಸುಶಾಂತ್ ಪ್ರಕರಣದಲ್ಲಿ ಮುಂಬೈ ಪೊಲೀಸರು ಎಡಿಆರ್ ಅಂದರೆ ಆಕ್ಸಿಡೆಂಟಲ್ ಡೆತ್ ರಿಪೋರ್ಟ್ (ಎಡಿಆರ್) ಮಾತ್ರ ದಾಖಲಿಸಿದ್ದಾರೆ, ಆದರೆ ಬಿಹಾರ ಪೊಲೀಸರು ಈ ಪ್ರಕರಣದಲ್ಲಿ ಮೊದಲ ಬಾರಿಗೆ ಎಫ್‌ಐಆರ್ ದಾಖಲಿಸಿದ್ದು, ಇದರಿಂದ ಪ್ರಕರಣ ಸಿಬಿಐಗೆ ಹಸ್ತಾಂತರಿಸುವ ಎಲ್ಲ ಮಾರ್ಗ ಸುಗಮವಾದಂತಾಗಿದೆ. ಏಕೆಂದರೆ ಯಾವುದೇ ಒಂದು ಪ್ರಕರಣದಲ್ಲಿ FIR ದಾಖಲಾಗದ ಹೊರತು ಅದನ್ನು ಸಿಬಿಐಗೆ ಹಸ್ತಾಂತರಿಸಲು ಸಾಧ್ಯವಿಲ್ಲ. 


COMMERCIAL BREAK
SCROLL TO CONTINUE READING

ಇದೇ ವೇಳೆ ತನಿಖೆಯನ್ನು ಸಿಬಿಐಗೆ ನೀಡಲು ಮಹಾರಾಷ್ಟ್ರ ಸರ್ಕಾರ ನಿರಾಕರಿಸಿದೆ. ಈ ಕುರಿತು ಝೀ ನ್ಯೂಸ್ ಗೆ ಮಾಹಿತಿ ನೀಡಿರುವ ಮಹಾರಾಷ್ಟ್ರದ ಗೃಹ ಖಾತೆ ಸಚಿವ ಶಂಭುರಾಜ್ ದೇಸಾಯಿ, 'ಸುಶಾಂತ್ ಪ್ರಕರಣದಲ್ಲಿ ಮೊದಲಿನಿಂದಲೋ ಕೂಡ ಮಹಾರಾಷ್ಟ್ರ ಪೊಲೀಸರು ಮತ್ತು ಮುಂಬೈ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ. ಏನೇ ಬಹಿರಂಗವಾದರೂ, ಸಂಪೂರ್ಣ ತನಿಖೆ ಮುಂಬೈ ಪೊಲೀಸರಿಂದ ದಾಖಲೆಯನ್ನು ತೆಗೆದುಕೊಳ್ಳುವ ಮೂಲಕ ನಡೆಯಲಿದೆ ಮತ್ತು ಇಂತಹ ಪರಿಸ್ಥಿತಿಯಲ್ಲಿ  ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಪೊಲೀಸರು ಇಲ್ಲಿ ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ. ಮುಂಬೈ ಪೊಲೀಸ್ ಮತ್ತು ಮಹಾರಾಷ್ಟ್ರ ಪೊಲೀಸರು ತನಿಖೆಗಾಗಿ ಇಡೀ ದೇಶದಲ್ಲಿಯೇ ಪ್ರಸಿದ್ಧಿ ಹೊಂದಿದ್ದಾರೆ ಎಂದು ಹೇಳಿದ್ದಾರೆ.


ಇದುವರೆಗೂ ಕೂಡ ಮುಂಬೈ ಪೊಲೀಸರ ಇನ್ವೆಸ್ಟಿಗೆಶನ್ ನಡೆಯುತ್ತಿದೆ. ಹಲವು ಜನರನ್ನು ಈಗಾಗಲೇ ವಿಚಾರಣೆಗೆ ಒಳಪಡಿಸಿ ಅವರ ಹೇಳಿಕೆಗಳನ್ನು ದಾಖಲಿಸಲಾಗಿದೆ. ಇನ್ನೂ ಹಲವರನ್ನು ವಿಚಾರಣೆಗೆ ಕರೆಯಲಾಗುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಪ್ರಕರಣವನ್ನು ಸಿಬಿಐಗೆ ನೀಡುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅವರು ಹೇಳಿದ್ದಾರೆ.