Swathi Muthina Male Haniye Trailer : ರಾಜ್ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
‘ಸ್ಯಾಂಡಲ್‌ವುಡ್ ಕ್ವೀನ್’ ರಮ್ಯಾ ಅವರು ತಮ್ಮ ಆಪಲ್ ಬಾಕ್ಸ್ ಸ್ಟುಡಿಯೋಸ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲೈಟರ್ ಬುದ್ಧ ಫಿಲಂಸ್ ಸಹಯೋಗದೊಂದಿಗೆ ನಿರ್ಮಾಣವಾಗಿರುವ "ಸ್ವಾತಿ ಮುತ್ತಿನ ಮಳೆ ಹನಿಯೇ" ಚಿತ್ರ ನವೆಂಬರ್ 24ರಂದು ಕೆ.ಆರ್.ಜಿ. ಸ್ಟುಡಿಯೋಸ್ ಮೂಲಕ ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದೆ.
ಇದನ್ನೂ ಓದಿ : Priya Prakash Warrier: ಕಣ್ಸನ್ನೆ ಬೆಡಗಿಯ ಬೋಲ್ಡ್ ಅವತಾರಕ್ಕೆ ಪಡ್ಡೆಹೈಕ್ಳು ಫಿದಾ..!
ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಟ ಹಾಗೂ ನಿರ್ದೇಶಕ ರಾಜ್ ಬಿ ಶೆಟ್ಟಿ, ನಾನೊಬ್ಬ ಬ್ಯಾಚುಲರ್ ಆಫ್ ಸೋಶಿಯಲ್ ವರ್ಕ್ ವಿದ್ಯಾರ್ಥಿ. ನಾನು ಜನರ ಕಷ್ಟಗಳನ್ನು ಹತ್ತಿರದಿಂದ ನೋಡಿದ್ದೇನೆ. ಸಾವಿನಂಚಿನಲ್ಲಿರುವ ರೋಗಿಗಳನ್ನು ಶುಶ್ರೂಷೆ ಮಾಡುವ ಕೇಂದ್ರಕ್ಕೆ ಭೇಟಿ ನೀಡಿದಾಗ ಈ ಕಥೆ ಮಾಡಬೇಕೆನಿಸಿತು. ಇನ್ನು ಸ್ವಾತಿ ಮಳೆಯ ನೀರು ಆರೋಗ್ಯಕರ ಎಂದು ಆಯುರ್ವೇದ ಹೇಳುತ್ತದೆ. ಈ ಮಳೆಯ ನೀರು ಕಪ್ಪೆಚಿಪ್ಪಿನ ಜೊತೆ ಸೇರಿ ಮುತ್ತಾಗುತ್ತದೆ. ಹಾಗಾಗಿ ನಮ್ಮ ಚಿತ್ರದ ಕಥೆಗೆ ಈ ಶೀರ್ಷಿಕೆ ಸರಿ ಹೊಂದುವುದರಿಂದ "ಸ್ವಾತಿ ಮುತ್ತಿನ ಮಳೆ ಹನಿಯೇ" ಎಂದು ಶೀರ್ಷಿಕೆ ಇಟ್ಟಿದ್ದೇವೆ. ಅನಿಕೇತ್ ನನ್ನ ಪಾತ್ರದ ಹೆಸರು. ಮಿಥುನ್ ಮುಕುಂದನ್ ಸುಮಧುರ ಸಂಗೀತದಲ್ಲಿ ಚಿತ್ರದ ಹಾಡುಗಳು ಇಂಪಾಗಿ ಮೂಡಿಬಂದಿದೆ. ಚಿತ್ರತಂಡದ ಸಹಕಾರದಿಂದ ಚಿತ್ರ ಕೂಡ ಚೆನ್ನಾಗಿ ಬಂದಿದೆ ಎಂದರು.
ಈ ಚಿತ್ರದಲ್ಲಿ ನನ್ನ ಪಾತ್ರದ ಹೆಸರು ಪ್ರೇರಣ. ಹಾಸ್ ಪೈಸ್ ವೊಂದರಲ್ಲಿ ಕೌನ್ಸಿಲರ್ ಆಗಿ ಕಾರ್ಯ ನಿರ್ವಹಿಸುತ್ತಿರುತ್ತೇನೆ. ಸಾವಿನಂಚಿನಲ್ಲಿರುವವರಿಗೆ ಸಾವಿನ ಬಗ್ಗೆ ಧೈರ್ಯ ತುಂಬುವ ಪಾತ್ರ ಎನ್ನಬಹುದು ಎಂದು ನಾಯಕಿ ಸಿರಿ ರವಿಕುಮಾರ್ ತಿಳಿಸಿದರು. ಮಿಥುನ್ ಮುಕುಂದನ್ ಸಂಗೀತದ ಬಗ್ಗೆ ಮಾಹಿತಿ ನೀಡಿದರು. ಗಾಯಕಿ ಮಾಧುರಿ ಶೇಷಾದ್ರಿ ಚಿತ್ರದ "ಮೆಲ್ಲಗೆ" ಹಾಡನ್ನು ಹಾಡಿದರು.
‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದಲ್ಲಿ ನಟಿಸಿರುವ ಬಾಲಾಜಿ ಮನೋಹರ್, ಸೂರ್ಯ ವಸಿಷ್ಠ, ರೇಖಾ ಕೂಡ್ಲಿಗಿ, ಸ್ನೇಹ ಶರ್ಮಾ ಮುಂತಾದವರು ತಮ್ಮ ಪಾತ್ರದ ಕುರಿತು ಮಾತನಾಡಿದರು. ಪ್ರವೀಣ್ ಶ್ರೀಯಾನ್ ಈ ಚಿತ್ರದ ಛಾಯಾಗ್ರಹಣದ ಜೊತೆಗೆ, ರಾಜ್ ಜೊತೆಗೆ ಸೇರಿ ಸಂಕಲನದ ಜವಾಬ್ದಾರಿಯನ್ನೂ ಹೊತ್ತಿದ್ದಾರೆ.
ಇದನ್ನೂ ಓದಿ : ZEE5 ಒಟಿಟಿಗೆ ಲಗ್ಗೆ ಇಟ್ಟ ಶಿವಣ್ಣನ ಸಿನಿಮಾ: 10 ಸಾವಿರ ಚದರ ಅಡಿಯ ‘ಘೋಸ್ಟ್’ ಪೋಸ್ಟರ್ ಅನಾವರಣ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.