Lalit Manchanda: 'ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ' ನಟ ಲಲಿತ್ ಮಂಚಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಏಪ್ರಿಲ್ 21 ರಂದು, ನಟನ ಮೃತ ದೇಹವು ಮೀರತ್‌ನಲ್ಲಿರುವ ಅವರ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ಥಳದಲ್ಲಿ ಯಾವುದೇ ಪತ್ತೆಯಾಗಿಲ್ಲ. ಪೊಲೀಸರು 36 ವರ್ಷದ ಲಲಿತ್ ಮಂಚಂದ ಅವರ ಮೃತ ದೇಹವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಲಲಿತ್ ಮಂಚಂದ ಅವರ ಸಾವಿನ ಪ್ರಾಥಮಿಕ ತನಿಖೆಯಲ್ಲಿ ನಟ ಮಾನಸಿಕ ಒತ್ತಡದಲ್ಲಿದ್ದರು ಎಂದು ತಿಳಿದುಬಂದಿದೆ. ಅಮರ್ ಉಜಾಲಾ ಅವರ ವರದಿಯ ಪ್ರಕಾರ, ಲಲಿತ್ ಮುಂಬೈನಲ್ಲಿ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿದ್ದರು. ಆರು ತಿಂಗಳ ಹಿಂದೆ ತಮ್ಮ ಕುಟುಂಬದೊಂದಿಗೆ ಮೀರತ್‌ಗೆ ಮರಳಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಐಶ್ವರ್ಯಾ ರೈ ನೋಡುತ್ತಿದ್ದಂತೆ ಕಣ್ಣೀರಿಟ್ಟ ಅಮಿತಾಬ್ ಬಚ್ಚನ್!? - Throwback Tuesday
ಲಲಿತ್ ಮಂಚಂದ ಅವರ ನಿಧನವು ಟಿವಿ ಉದ್ಯಮ ಮತ್ತು ಅವರ ಅಭಿಮಾನಿಗಳನ್ನು ತೀವ್ರವಾಗಿ ಆಘಾತಗೊಳಿಸಿದೆ. ಸಿನಿಮಾ ಮತ್ತು ಟಿವಿ ಕಲಾವಿದರ ಸಂಘ (CINTAA) ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಪೋಸ್ಟ್ ಮಾಡುವ ಮೂಲಕ ಲಲಿತ್ ಅವರಿಗೆ ಗೌರವ ಸಲ್ಲಿಸಿದೆ. ನಟನ ಫೋಟೋವನ್ನು ಹಂಚಿಕೊಂಡ ಸಂಘವು, 'ಲಲಿತ್ ಮಂಚಂದ (2012 ರಿಂದ ಸದಸ್ಯ) ಅವರ ನಿಧನಕ್ಕೆ CINTAA ತನ್ನ ಸಂತಾಪವನ್ನು ವ್ಯಕ್ತಪಡಿಸುತ್ತದೆ' ಎಂದು ಬರೆದುಕೊಂಡಿದೆ. ಇನ್ನೂ ಮತ್ತೊಂದೆಡೆ, ಪೊಲೀಸರು ಲಲಿತ್ ಮಂಚಂಧ ಅವರ ಕುಟುಂಬ ಮತ್ತು ಆಪ್ತರನ್ನು ವಿಚಾರಣೆ ಮಾಡಲು ಪ್ರಾರಂಭಿಸಿದ್ದಾರೆ.
ಲಲಿತ್ ಮಂಚಂದ ಅವರು ಸಬ್ ಟಿವಿಯ ಜನಪ್ರಿಯ ಕಾರ್ಯಕ್ರಮ 'ತಾರಕ್ ಮೆಹ್ತಾ ಕಾ ಊಲ್ತಾ ಚಶ್ಮಾ' ನಂತಹ ಹಲವು ಟಿವಿ ಕಾರ್ಯಕ್ರಮಗಳಲ್ಲಿ ಕೆಲಸ ಮಾಡಿದ್ದಾರೆ. 'ಇಂಡಿಯಾಸ್ ಮೋಸ್ಟ್ ವಾಂಟೆಡ್', 'ಕ್ರೈಮ್ ಪೆಟ್ರೋಲ್' ಮತ್ತು 'ಯೇ ರಿಶ್ತಾ ಕ್ಯಾ ಕೆಹ್ಲಾತಾ ಹೈ' ಮುಂತಾದ ಶೋಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ನಟ ಸ್ವಲ್ಪ ಸಮಯದ ಹಿಂದೆ ವೆಬ್ ಸರಣಿಗಾಗಿ ಕೆಲಸ ಮಾಡುತ್ತಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀ ಕನ್ನಡ ನ್ಯೂಸ್ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್ ಲಭ್ಯ
Sun Direct-292
TATA PLAY- 1664
JIO TV-1334
NXT Digital-30
IN-CABLE-30
U-Digital-162
GTPL-17
Rockline Telecommunications ಬೆಂಗಳೂರು-42
V4 Digital Infotech ಮಂಗಳೂರು-628
Malanad infotech Pvt Ltd-56
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.