ಟಗರು ಪಲ್ಯ ಸಿನಿಮಾದ ಎರಡನೇ ಹಾಡು ರಿಲೀಸ್...ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ

ನಟರಾಕ್ಷಸ ಡಾಲಿ ಧನಂಜಯ್  ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ  ‘ಟಗರು ಪಲ್ಯ’. ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

Written by - YASHODHA POOJARI | Edited by - Manjunath N | Last Updated : Sep 14, 2023, 09:31 PM IST
  • ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ.
  • ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ.
 ಟಗರು ಪಲ್ಯ ಸಿನಿಮಾದ ಎರಡನೇ ಹಾಡು ರಿಲೀಸ್...ಸೂರ್ಯಕಾಂತಿ ನಾನು ಎಂದು ಕುಣಿದ ಲವ್ಲಿಸ್ಟಾರ್ ಪುತ್ರಿ title=

ಬೆಂಗಳೂರು: ನಟರಾಕ್ಷಸ ಡಾಲಿ ಧನಂಜಯ್  ನಟನೆಯಲ್ಲಿ ಮಾತ್ರವಲ್ಲ, ನಿರ್ಮಾಣದಲ್ಲೂ ಪ್ರಯೋಗಾತ್ಮಕ ಸಿನಿಮಾಗಳ ನಿರ್ಮಾಣದಲ್ಲಿ ತೊಡಗಿಸಿಕೊಂಡಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶ ನೀಡಬೇಕು ಎನ್ನುವ ಉದ್ದೇಶದೊಂದಿಗೆ ಅವರು ‘ಡಾಲಿ ಪಿಕ್ಚರ್ಸ್​’ ನಿರ್ಮಾಣ ಸಂಸ್ಥೆ ಆರಂಭಿಸಿದ್ದಾರೆ. ಈ ಸಂಸ್ಥೆಯ ಮೂರನೇ ಪ್ರಯತ್ನವೇ  ‘ಟಗರು ಪಲ್ಯ’. ಸೆಟ್ಟೇರಿದ ದಿನದಿಂದಲೂ ಭಾರೀ ಸದ್ದು ಮಾಡುತ್ತಿರುವ ಟಗರು ಪಲ್ಯ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ.

ಇದನ್ನೂ ಓದಿ: "ಯಡಿಯೂರಪ್ಪ ಅವರೇ ನಿಮಗೆ ಮೋಸ ಮಾಡಿದ ಕುಮಾರಸ್ವಾಮಿ ಅವರನ್ನು ಮತ್ತೆ ಹೇಗೆ ಸೇರಿಸಿಕೊಳ್ಳುತ್ತಿದ್ದೀರಿ"

ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಟ್ರ್ಯಾಕ್ ಗೆ ಅದ್ಭುತ ಪ್ರತಿಕ್ರಿಯೆ ಸಿಕ್ಕಿದೆ. ಇದೀಗ ಚಿತ್ರತಂಡ ಸೂರ್ಯಕಾಂತಿ ನಾನು ಎಂಬ ಮೆಲೋಡಿ ಹಾಡನ್ನು ಅನಾವರಣ ಮಾಡಿದೆ. ಸ್ವತಃ ಧನಂಜಯ್ ಅವರೇ ಕ್ಯಾಚಿ‌ ಮ್ಯಾಚಿ ಪದಗಳನ್ನು ಪೊಣಿಸಿ ಸಾಹಿತ್ಯ ಬರೆದಿದ್ದು, ಮಾಧುರಿ ಶೇಷಾದ್ರಿ ಕಂಠ ಕುಣಿಸಿದ್ದು, ವಾಸುಕಿ ವೈಭವ್ ಟ್ಯೂನ್ ಹಾಕಿದ್ದಾರೆ. ಹಳ್ಳಿ ಸೊಗಡಿನ ಕಂಪು ಹೊಂದಿರುವ ಈ ಮೆಲೋಡಿ ಹಾಡಿಗೆ ಲವ್ಲಿ ಸ್ಟಾರ್ ಪ್ರೇಮ್ ಪುತ್ರಿ ಅಮೃತಾ ಪ್ರೇಮ್ ಹೆಜ್ಜೆ ಹಾಕಿದ್ದಾರೆ. 

ಇದನ್ನೂ ಓದಿ- ಪುಷ್ಪ ಸಿನಿಮಾದಂತೆ ರಕ್ತ ಚಂದನ ಸಾಗಿಸುತ್ತಿದ್ದ ಖದೀಮರ ಬಂಧನ

ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣ ಆಗುತ್ತಿರುವ ‘ಟಗರು ಪಲ್ಯ’ ಚಿತ್ರಕ್ಕೆ ಉಮೇಶ್ ಕೆ ಕೃಪ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾ ಮೂಲಕ ಅನೇಕ ಹೊಸಬರಿಗೆ ಅವಕಾಶ ಸಿಕ್ಕಿದೆ. ಈ ಸಿನಿಮಾ ಮೂಲಕ ನಟಿಯಾಗಿ ನೆನಪಿರಲಿ ಪ್ರೇಮ್ ಮಗಳು ಅಮೃತಾ ಚಿತ್ರರಂಗಕ್ಕೆ ಕಾಲಿಡುತ್ತಿದ್ದಾರೆ. ವಿಭಿನ್ನ ಪಾತ್ರಗಳನ್ನ ಆಯ್ಕೆ ಮಾಡಿಕೊಂಡು, ಕನ್ನಡ ಸಿನಿಮಾ ಪ್ರೇಕ್ಷಕರನ್ನು ರಂಜಿಸುತ್ತಿರುವ ನಾಗಭೂಷಣ್ ಟಗರು ಪಲ್ಯದ ನಾಯಕ. 

'ಟಗರು ಪಲ್ಯ' ಸಿನಿಮಾದಲ್ಲಿ ದೊಡ್ಡ ತಾರಾಬಳಗವೇ ಇದ್ದು ಕೂತೂಹಲ ದುಪ್ಪಟ್ಟಾಗಿದೆ. ಹಿರಿಯ ಕಲಾವಿದರಾದ ರಂಗಾಯಣ ರಘು, ತಾರಾ, ಶರತ್ ಲೋಹಿತಾಶ್ವ ಸೇರಿದಂತೆ ದೊಡ್ಡ ಸ್ಟಾರ್ ಕಾಸ್ಟ್  ಚಿತ್ರಕ್ಕೆ ಸಾಥ್ ಕೊಟ್ಟಿದೆ. ಹಾಗೇ ವಾಸುಕಿ ವೈಭವ್ ಸಂಗೀತವಿದೆ ಇನ್ನು ಎಸ್.ಕೆ.ರಾವ್ ಕ್ಯಾಮೆರಾ ಕೈಚಳಕ ತೋರಿಸಿದ್ದಾರೆ. ಪ್ರಚಾರ ಕಾರ್ಯ ಆರಂಭಿಸಿರುವ ಟಗರು ಪಲ್ಯ ತಂಡ ಇದೇ ವರ್ಷದ ಕನ್ನಡ ರಾಜ್ಯೋತ್ಸವಕ್ಕೆ ಸಿನಿಮಾ ರಿಲೀಸ್ ಮಾಡಲು ಸಕಲ ಸಿದ್ಧತೆ ನಡೆಸುತ್ತಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

 

Trending News