close

News WrapGet Handpicked Stories from our editors directly to your mailbox

ಮೋದಿಗೆ ಭರ್ಜರಿ ಜಯ; ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದೇನು?

ಭಾರತೀಯ ಜನತಾ ಪಕ್ಷ ನೇತೃತ್ವದ ಮೈತ್ರಿಕೂಟ ಅದ್ಭುತ ವಿಜಯ ಸಾಧಿಸಿದ ಬೆನ್ನಲ್ಲೇ ಭಾರತೀಯ ಚಲನಚಿತ್ರ ರಂಗದ ಸೂಪರ್ ಸ್ಟಾರ್ ರಜನಿಕಾಂತ್ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Updated: May 23, 2019 , 11:18 PM IST
ಮೋದಿಗೆ ಭರ್ಜರಿ ಜಯ; ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಹೇಳಿದ್ದೇನು?
file photo

ಮುಂಬೈ: ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ನೇತೃತ್ವದ ಮೈತ್ರಿಕೂಟ ಅದ್ಭುತ ವಿಜಯ ಸಾಧಿಸಿದ ಬೆನ್ನಲ್ಲೇ ಭಾರತೀಯ ಚಲನಚಿತ್ರ ರಂಗದ ಸೂಪರ್ ಸ್ಟಾರ್ ರಜನಿಕಾಂತ್ ಪ್ರಧಾನಿ ಮೋದಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರಜನಿಕಾಂತ್, "ಗೌರವಾನ್ವಿತ ನರೇಂದ್ರ ಮೋದಿಜಿಯವರೇ, ನಿಮಗೆ ಹೃದಯ ಪೂರ್ವಕ ಅಭಿನಂದನೆಗಳು. ನೀವು ಸಾಧಿಸಿದ್ದೀರಿ!! ದೇವರು ಒಳ್ಳೆಯದನ್ನು ಮಾಡಲಿ" ಎಂದಿದ್ದಾರೆ.

ಈ ಬಾರಿಯ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ದೇಶಾದ್ಯಂತ ಬಿಜೆಪಿ ಪ್ರಚಂಡ ಜಯಭೇರಿ ಬಾರಿಸಿದೆ.  ಎನ್‌ಡಿಎ ಮೈತ್ರಿಕೂಟ 350ರ ಗಡಿ ಮುಟ್ಟಿರುವುದಲ್ಲದೇ, ಬಿಜೆಪಿ ಮ್ಯಾಜಿಕ್ ನಂ 272ರನ್ನು ಮೀರಿ ಸ್ಪಷ್ಟ ಬಹುಮತ ಗಳಿಸಿದ್ದು, ಎರಡನೇ ಅವಧಿಗೆ ಬಿಜೆಪಿ ಸರ್ಕಾರ ರಚನೆ ಮಾಡಲಿದೆ. ಅಲ್ಲದೆ, ಮೋದಿ ಮತ್ತೊಮ್ಮೆ ಪ್ರಧಾನಿಯಾಗಿ ದೇಶದ ಆಡಳಿತದ ಚುಕ್ಕಾಣಿಯನ್ನು ಮುನ್ನಡೆಸಲಿದ್ದಾರೆ.